ರೈಲ್ವೆ ಇಲಾಖೆಗೆ ಕೋವಿಡಾಘಾತ : 93 ಸಾವಿರ ಸಿಬ್ಬಂದಿಗೆ ಮಹಾಮಾರಿ ಸೋಂಕು
Team Udayavani, Apr 24, 2021, 8:29 PM IST
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ನಿತ್ಯ 3 ಲಕ್ಷಕ್ಕೂ ಅಧಿಕ ಮಂದಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ.
ಕೋವಿಡ್ನ ಎರಡನೇ ಅಲೆ ದೇಶದ ಜನತೆಯನ್ನು ಆತಂಕಕ್ಕೆ ದೂಡಿದ್ದು, ರೈಲ್ವೆ ಇಲಾಖೆಯ ಸಿಬ್ಬಂದಿಗಳಿಗೆ ಬೆಂಬಿಡದೆ ಕಾಡುತ್ತಿದೆ. ರೈಲ್ವೆ ಇಲಾಖೆಯ 93 ಸಾವಿರ ಸಿಬ್ಬಂದಿಗೆ ಕೋವಿಡ್–19 ಇರುವುದು ದೃಢಪಟ್ಟಿದೆ.
‘ದೇಶದಲ್ಲಿನ ಸ್ಥಿತಿಗಿಂತ ರೈಲ್ವೆ ಇಲಾಖೆಯ ಸ್ಥಿತಿ ಭಿನ್ನವಾಗಿಲ್ಲ. ಸುಮಾರು 93 ಸಾವಿರ ರೈಲ್ವೆ ಸಿಬ್ಬಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಕೆಲ ಸಿಬ್ಬಂದಿಯನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕೆಲವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ರೈಲ್ವೆಯ 72 ಆಸ್ಪತ್ರೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಾಗಿರಿಸಲಾಗಿದೆ’ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಹಾಗೂ ಸಿಇಒ ಸುನೀತ್ ಶರ್ಮಾ ತಿಳಿಸಿದ್ದಾರೆ.
‘ಟಿಟಿಇ, ನಿರ್ವಾಹಕರು, ಸ್ಟೇಷನ್ ಸಿಬ್ಬಂದಿ ಸೇರಿದಂತೆ ಮುಂಚೂಣಿ ಕಾರ್ಮಿಕರು ಕೂಡಾ ಸೋಂಕಿಗೊಳಗಾಗಿದ್ದಾರೆ. ಆದರೂ, ರೈಲ್ವೆ ಸೇವೆಯ ಕೆಲಸಗಳು ಸುಗಮವಾಗಿ ಸಾಗಲು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದೂ ಅವರು ಹೇಳಿದ್ದಾರೆ.ರೈಲ್ವೆ ಇಲಾಖೆಯಲ್ಲಿ ಒಟ್ಟು 13 ಲಕ್ಷ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.