ಈ ರಾಶಿಯವರಿಂದು ಯಾವುದೇ ಕಾರ್ಯಗಳಲ್ಲಿ ತೊಡಗಿಸಿಕೊಂಡರೂ ಪ್ರಗತಿ ಸಾಧಿಸುವಿರಿ


Team Udayavani, Apr 25, 2021, 7:11 AM IST

ಈ ರಾಶಿಯವರಿಂದು ಯಾವುದೇ ಕಾರ್ಯಗಳಲ್ಲಿ ತೊಡಗಿಸಿಕೊಂಡರೂ ಪ್ರಗತಿ ಸಾಧಿಸುವಿರಿ

25-04-2021

ಮೇಷ: ನಿಮ್ಮಂಥ ಸುಖೀಗಳು ಯಾರು ಇಲ್ಲ ಎಂಬ ಅನುಭವ ನಿಮ್ಮ ಗೋಚರಕ್ಕೆ ಬರುವುದು. ಸಾಂಸಾರಿಕವಾಗಿ ಸಾಮರಸ್ಯದ ಕೊರತೆ ಕಂಡು ಬರುವುದು. ಎಲ್ಲಾ ಸುಖವಿದ್ದು ಇಲ್ಲವೆಂಬಂತ ಪರಿಸ್ಥಿತಿ ನಿಮ್ಮದು. ಶುಭವಿದೆ.

ವೃಷಭ: ವೃತ್ತಿರಂಗದಲ್ಲಿ ಬೇರೆಯವರ ವಿಚಾರದಲ್ಲಿ ಮದ್ಯಸ್ಥಿಕೆ ಬೇಡ. ಒಳ್ಳೆಯ ಫ‌ಲಗಳಿದ್ದರೂ ಆಗಾಗ ನಿರುತ್ಸಾಹಿಗಳಾಗಿಯೇ ಇರುವ ಸಾಧ್ಯತೆ ಕಂಡುಬರುವುದು. ಧನಾರ್ಜನೆಯಲ್ಲಿ ಆಗಾಗ ತೊಡಕು ಕಂಡುಬರುವುದು.

ಮಿಥುನ: ನಿಮಗೆ ಅಧಿಕ ಲಾಭವಿದ್ದರೂ ಖರ್ಚು ಅಷ್ಟೇ ಕಂಡುಬರುವುದು. ಪತ್ನಿಯಿಂದ ಸಹಕಾರ ಕಂಡು ಬರುವುದು. ನಿರಾಶಾ ಮನೋಭಾವವನ್ನು ದೂರ ಮಾಡಿರಿ. ಆರ್ಥಿಕವಾಗಿ ಬಲಿಷ್ಠರಾಗುವ ಸೂಚನೆ ಕಂಡುಬಂದೀತು .

ಕರ್ಕ: ದಾಂಪತ್ಯ ಜೀವನದಲ್ಲಿ ಸಂಯಮವಿರಲಿ. ಕಾರ್ಯಕ್ಷೇತ್ರದಲ್ಲಿ ಆತ್ಮವಿಶ್ವಾಸದ ಬಲ ನಿಮಗೆ ಶ್ರೀರಕ್ಷೆಯಾಗಲಿದೆ. ವ್ಯವಹಾರದಲ್ಲಿ ಬುದ್ಧಿವಂತಿಕೆ ಇದ್ದರೂ ಎಚ್ಚರಿಕೆಯಿಂದ ವ್ಯವಹರಿಸುವ ಅಗತ್ಯವಿದೆ. ಮುನ್ನಡೆಯಿರಿ.

ಸಿಂಹ: ಅವಿವಾಹಿತರಿಗೆ ಅಚ್ಚರಿಯ ವಾರ್ತೆಯಿಂದ ಹರುಷವಾದೀತು. ಚಿಕ್ಕಪುಟ್ಟ ಸಂಚಾರದಿಂದ ದೇಹಾಯಾಸವು ಕಂಡು ಬರುವುದು. ಆತ್ಮವಿಶ್ವಾಸ ಹಾಗೂ ಪ್ರಯತ್ನ ಬಲ ನಿಮಗೆ ಪೂರಕವಾಗಿ ಕಂಡುಬರುವುದು.

ಕನ್ಯಾ: ಹೊಸ ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ಹೊಂದಬೇಕಾಗುವುದು. ಸ್ವಲ್ಪ ಪರಿಸ್ಥಿತಿಯನ್ನು ನೋಡಿಕೊಂಡು ಹೋಗುವ ಅಗತ್ಯವಿದೆ. ಆರ್ಥಿಕವಾಗಿ ಭಿನ್ನಾಭಿಪ್ರಾಯದಿಂದ ಗೊಂದಲಗಳು ತೋರಿಬಾರದಂತೆ ನೋಡಿರಿ.

ತುಲಾ: ಪತ್ನಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿರಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಮಾಡುವುದು. ವಾಹನ ಚಾಲನೆಯಲ್ಲಿ ಜಾಗ್ರತೆ ಮಾಡುವುದು. ಯೋಗ್ಯ ಸಂಬಂಧಗಳು ಒದಗಿ ಬಂದರೂ ಕಂಕಣಬಲ ಫ‌ಲಿಸದು.

ವೃಶ್ಚಿಕ: ನ್ಯಾಯಾಲಯದ ವಿಚಾರದಲ್ಲಿ ಅನಾವಶ್ಯಕವಾಗಿ ಅವಮಾನ, ಅಪಮಾನ ಎದುರಿಸಬೇಕಾದೀತು. ಪ್ರಯತ್ನ ಮಾಡುವ ಮುನ್ನ ಫ‌ಲದ ಯೋಚನೆ ಮಾಡದಿರಿ. ಹಲವು ವಿಚಾರದಲ್ಲಿ ನಿಮ್ಮ ಮನಸ್ಸು ಕೆರಳಬಹುದು. ಧೈರ್ಯ ಅಗತ್ಯವಿದೆ.

ಧನು: ನಿಮ್ಮ ಕೆಲಸವನ್ನು ಬಿಟ್ಟು ಇತರರ ಕಾರ್ಯಕ್ಕಾಗಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡದಿರಿ. ಅದರ ಬೆಲೆ ತಿಳಿಯುವವರಾದರೆ ಪರವಾಗಿಲ್ಲ . ನಿಮ್ಮ ವಿಶ್ವಾಸದ ದುರುಪಯೋಗವಾಗಲಿದೆ. ಆರ್ಥಿಕವಾಗಿ ಸಮಾಧಾನ ತಂದೀತು.

ಮಕರ: ಈ ಸಮಯವು ನಿಮಗೆ ಪೂರಕವಾಗಿರುವ ಕೆಲಸಕಾರ್ಯಗಳಲ್ಲಿ ಪ್ರಗತಿ ಸಾಧಿಸುವಿರಿ. ಬದುಕು ಉಲ್ಲಾಸದಿಂದ ಕೂಡಿರುವುದು. ಆದರೂ ಅನಾವಶ್ಯಕವಾಗಿ ದುಂದುವೆಚ್ಚ ಮಾಡದಿರಿ. ಹಿರಿಯರ ಮಾರ್ಗದರ್ಶನ ಪಡೆಯಿರಿ.

ಕುಂಭ: ವೃತ್ತಿರಂಗದಲ್ಲಿ ಯಾ ಸಾಂಸಾರಿಕವಾಗಲೀ ಯಾವುದೇ ಪ್ರಚೋದನೆಗೆ ವಿರುದ್ಧವಾಗಿ ಪ್ರತಿಕ್ರಿಯೆ ನೀಡದಿರುವುದೇ ಒಳ್ಳೆಯದು. ಹಿತಶತ್ರುಗಳ ಉದಾಸೀನ ಮಾಡದಿರಿ. ಇವರು ನಿಮ್ಮನ್ನು ಉಪಯೋಗಿಸಿಕೊಳ್ಳಲಿರುವರು.

ಮೀನ: ಈ ದಿನ ನೀವು ಯಾವುದೇ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡರೂ ಪ್ರಗತಿ ಸಾಧಿಸುವಿರಿ. ಮಹಿಳೆಯರ ಬಹುದಿನಗಳ ಬೇಡಿಕೆಗಳು ನೆರವೇರುವುದು. ಕಲಾವಿದರು, ಸಾಹಿತಿಗಳು ಯಶಸ್ಸು ಕಾಣುವಿರಿ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.