ಕೋವಿಡ್ ನಿಂದ ನೊಂದವರ ಸಹಾಯಕ್ಕಾಗಿ ಮುಂದೆ ಬನ್ನಿ


Team Udayavani, Apr 26, 2021, 6:55 AM IST

COVID

ದೇಶದಲ್ಲಿ ಕೊರೊನಾ 2ನೇ ಅಲೆ ಈ ಪರಿಯಾಗಿ ಬಾಧಿಸುತ್ತದೆ ಎಂಬುದು ಯಾರಿಗೂ ತಿಳಿದಿರಲಿಕ್ಕಿಲ್ಲ. ವಿಜ್ಞಾನಿಗಳು, ವೈದ್ಯರ ನಿರೀಕ್ಷೆಗೂ ಮೀರಿ ಕೊರೊನಾದ 2ನೇ ಅಲೆ ಬಾಧಿಸುತ್ತಿದೆ. ಅದರಲ್ಲೂ ದಿಲ್ಲಿ, ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್‌ ಸಹಿತ ಹಲವಾರು ರಾಜ್ಯಗಳು ಕೊರೊನಾದ ಅಬ್ಬರಕ್ಕೆ ಅಕ್ಷರಶಃ ನಲುಗಿವೆ.

ದಿಲ್ಲಿಯಲ್ಲಿ ಪ್ರತೀ ಗಂಟೆಗೆ 12 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂಬ ವರದಿಯಾಗುತ್ತಿದೆ. ಬೆಂಗಳೂರಿನಲ್ಲೂ ಪ್ರತೀ ಗಂಟೆಗೆ ನೂರಾರು ಮಂದಿ ಸೋಂಕಿತರಾಗುತ್ತಿದ್ದಾರೆ. ಈ ಸಂಗತಿಗಳನ್ನು ನೋಡಿದರೆ, ಕೊರೊನಾದ ಪರಿಣಾಮಗಳು ಏನಾಗಿರಬಹುದು ಎಂಬುದನ್ನು ಊಹಿಸಿಕೊಳ್ಳಬಹುದು. ಜತೆಗೆ ಇಡೀ ದೇಶದಲ್ಲಿ ಇತ್ತೀಚಿನ ನಾಲ್ಕೈದು ದಿನಗಳಿಂದ ಹತ್ತಿರ ಹತ್ತಿರ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಇವರಲ್ಲಿ ಕಡೇ ಪಕ್ಷ ದಿನಕ್ಕೆ 50 ಸಾವಿರ ಮಂದಿಗೆ ಆಸ್ಪತ್ರೆ ವ್ಯವಸ್ಥೆ ಮಾಡುವುದೂ ದೊಡ್ಡ ಸವಾಲಿನ ಕೆಲಸವೇ ಸರಿ.

ಇಂಥ ಪರಿಸ್ಥಿತಿಯಲ್ಲಿ ಸರಕಾರಗಳ ಜತೆಗೆ ಸಾರ್ವಜನಿಕರೂ ಜನರ ನೋವಿನಲ್ಲಿ ಭಾಗಿಯಾಗಬೇಕಾದ ಅಗತ್ಯವಿದೆ. ಏಕೆಂದರೆ ಇದು ಅನಿರೀಕ್ಷಿತವಾಗಿ ಬಂದಿರುವಂಥ ದೊಡ್ಡ ಸಾಂಕ್ರಾಮಿಕ ರೋಗ. ಸರಕಾರದ ಕಡೆಯಿಂದ ಆಸ್ಪತ್ರೆಗಳು, ಕೊರೊನಾ ಕೇರ್‌ ಸೆಂಟರ್‌ ಗಳು, ಲಸಿಕೆಯ ವ್ಯವಸ್ಥೆ ಮಾಡಿಕೊಂಡಿದ್ದರೂ ಇದರಲ್ಲಿ ಜನರ ಸಹಕಾರ ಸಿಗದ ಹೊರತು ಅಧಿಕಾರಿಗಳಾಗಲಿ ಅಥವಾ ಸರಕಾರದ ಪ್ರತಿನಿಧಿಗಳಾಗಲಿ ಏನೂ ಮಾಡಲು ಸಾಧ್ಯವಿಲ್ಲ.

ಹೀಗಾಗಿ ಕೊರೊನಾವನ್ನು ಸಂಕಷ್ಟದ ಕಾಲವೆಂದು ಪರಿಗಣಿಸಿ ಜನರೂ ಇದರ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಬೇಕು. ಈಗಾಗಲೇ ಸರಕಾರದ ಕಡೆಯಿಂದಲೇ ಸ್ವಯಂಸೇವಕರಾಗಲು ಮುಂದೆ ಬನ್ನಿ ಎಂದು ಜನರಿಗೆ ಆಹ್ವಾನ ಕೊಟ್ಟಿದೆ. ಇದರಲ್ಲಿ ಸೇರಿ ಒಂದಷ್ಟು ಸಣ್ಣ ಪುಟ್ಟ ಸೇವೆಗಳನ್ನಾದರೂ ನೀಡಬಹುದು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಜನರು ಮೊದಲು ಮಾಡಬಹುದಾದ ಬಹುಮುಖ್ಯ ಕೆಲಸ, ನಿಮ್ಮ ಸುತ್ತಮುತ್ತಲಿನಲ್ಲಿ ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉತ್ತೇಜಿಸುವುದು. ಪರೀಕ್ಷೆ ಮಾಡಿಸಿಕೊಂಡ ಮಾತ್ರಕ್ಕೆ ಅಥವಾ ಕೊರೊನಾ ಪಾಸಿಟಿವ್‌ ಬಂದಿದೆ ಎಂಬ ಕಾರಣಕ್ಕೆ ನಿಮ್ಮನ್ನು ಬೇರೆ ರೀತಿ ಕಾಣುವುದಿಲ್ಲ ಎಂದು ಅವರಿಗೆ ಮನದಟ್ಟು ಮಾಡಿಸಿ ಅವರ ಜತೆ ನಿಲ್ಲುವ ಕೆಲಸ ಮಾಡಬೇಕು. ಜತೆಗೆ ಅವರಿಗೆ ಧೈರ್ಯವನ್ನೂ ತುಂಬಬೇಕು.
ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ಸಲುವಾಗಿ ಜನ ಬೇಕಾಗುತ್ತಾರೆ, ಕೊರೊನಾ ಕೇರ್‌ ಸೆಂಟರ್‌ಗಳಲ್ಲಿ ಉಸ್ತುವಾರಿಗಾಗಿ ಜನರ ಅಗತ್ಯವಿದೆ. ಇಂಥದ್ದದ್ದರಲ್ಲಿ ಸ್ವಯಂ ಸೇವಕರಾಗಿ ಜನರೇ ಭಾಗಿಯಾಗಬಹುದು. ಇನ್ನು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಆಕ್ಸಿಜನ್‌ ಸಿಲಿಂಡರ್‌ ಗಳ ವ್ಯವಸ್ಥೆ ಮಾಡಿಸುವುದು, ಸುತ್ತಮುತ್ತಲಿನ ಜನರಿಗೆ ಆಸ್ಪತ್ರೆ ಅಥವಾ ಬೇಕಾದ ಔಷಧದ ವ್ಯವಸ್ಥೆ ಮಾಡುವುದು, ಕೊರೊನಾ ಸೋಂಕಿತರಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವಂಥವರಿಗೆ ಅಗತ್ಯ ವಸ್ತುಗಳ ವ್ಯವಸ್ಥೆಯನ್ನೂ ಮಾಡಿಸಬಹುದು. ಇದರ ಜತೆಗೆ ಲಸಿಕಾ ಕೇಂದ್ರಗಳಿಗೆ ಅರ್ಹ ಫ‌ಲಾನುಭವಿಗಳನ್ನು ಕರೆತಂದು ಅವರಿಗೆ ಲಸಿಕೆ ಕೊಡಿಸುವ ಕೆಲಸವನ್ನೂ ಜನರು ಮಾಡಬಹುದು. ವ್ಯವಸ್ಥೆಯನ್ನು ಬಯ್ಯುತ್ತಾ ಕುಳಿತುಕೊಳ್ಳುವುದರ ಬದಲು, ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದರೆ ಒಂದಷ್ಟಾದರೂ ಯಶಸ್ಸು ಸಾಧಿಸಬಹುದು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.