ಅಥಣಿಯ 9 ಗ್ರಾಮಗಳಿಗೆ 45 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ಅಸ್ತು : ಸವದಿ
Team Udayavani, Apr 26, 2021, 5:13 PM IST
ಬೆಳಗಾವಿ : ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರೆ 08 ಗ್ರಾಮಗಳಿಗೆ 45.39 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗೆ ರಾಜ್ಯ ಸಚಿವ ಸಂಪುಟವು ಅಂಕಿತ ನೀಡಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದರು.
ಸಚಿವ ಸಂಪುಟ ಸಭೆಯ ಬಳಿಕ ಇಂದು ಈ ವಿವರ ನೀಡಿದ ಅವರು, ಸತ್ತಿಯೂ ಸೇರಿದಂತೆ ಒಟ್ಟು 09 ಗ್ರಾಮಗಳಲ್ಲಿ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂಬ ಬೇಡಿಕೆ ಬಹುದಿನಗಳಿಂದ ಬಾಕಿ ಇತ್ತು. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಯವರಲ್ಲಿಯೂ ನಾವು ಮನವಿ ಮಾಡಿಕೊಂಡಿದ್ದೆವು. ಇಂದು ಸಚಿವ ಸಂಪುಟವು ಈ ಯೋಜನೆಗೆ ಅನುಮೋದನೆ ನೀಡಿರುವುದರಿಂದ ಆ ಭಾಗದ ಸ್ಥಳೀಯರ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ತಿಳಿಸಿದರು.
ಕೇಂದ್ರದ “ಜಲ ಜೀವನ್ ಮಿಷನ್” ಯೋಜನೆಯಡಿ 18.12 ಕೋಟಿ ರೂ.ಗಳನ್ನು, ಆರ್.ಐ.ಡಿ.ಎಫ್. (ನಬಾರ್ಡ್) ನಿಂದ 15.40 ಕೋಟಿ ರೂ.ಗಳನ್ನು ಮತ್ತು ನಮ್ಮ ರಾಜ್ಯ ಸರ್ಕಾರದಿಂದ 11.87 ಕೋಟಿ ರೂ.ಗಳ ಅನುದಾನದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲು ಸಂಪುಟವು ಹಸಿರುನಿಶಾನೆ ನೀಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಜಾರಿಗೊಳಿಸಲಾಗುವ ಈ ಯೋಜನೆಯನ್ನು 15 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಅವರಖೋಡ, ನಾಗನೂರ ಪಿ.ಕೆ, ದೊಡವಾಡ, ನಂದೇಶ್ವರ, ಸವದಿ, ಹಲ್ಯಾಳ, ಹುಲಗಬಾಳ, ಸಂಕೋನಟ್ಟಿ ಗ್ರಾಮಗಳಿಗೆ ಕೃಷ್ಣಾ ನದಿಯಿಂದ ಕುಡಿಯುವ ನೀರು ಪೂರೈಕೆ ಸಾಧ್ಯವಾಗಿ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು ಸವದಿಯವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.