ಸರ್ಕಾರಿ ನೌಕರರ ಸಂಬಳ ಕಡಿತದ ಸುದ್ದಿ ಸತ್ಯಕ್ಕೆ ದೂರವಾದ ಮಾತು : ಸಿ.ಎಸ್. ಷಡಕ್ಷರಿ
Team Udayavani, Apr 27, 2021, 7:32 AM IST
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತ ಮಾಡಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರ ನೌಕರರ ವೇತನ ಕಡಿತದಂತಹ ತೀರ್ಮಾನ ತೆಗೆದುಕೊಳ್ಳುವ ಮುಂಚೆ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಇನ್ನು ಸಂಬಳ ಕಡಿತದ ಬಗ್ಗೆ ಯಾವುದೇ ಚರ್ಚೆಗಳು ಸರ್ಕಾರ ಹಾಗೂ ನೌಕರರ ಸಂಘದ ಪದಾಧಿಕಾರಿಗಳ ಜೊತೆ ನಡೆದಿಲ್ಲ. ಹೀಗಾಗಿ ಸರ್ಕಾರಿ ನೌಕರರ ವೇತನ ಕಡಿತದ ವದಂತಿ ಸತ್ಯಕ್ಕೆ ದೂರವಾದದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕಡಿತ ಮಾಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.