ಕೋವಿಡ್ ತಡೆಗೆ ಸರ್ವರ ಸಹಕಾರ ಅಗತ್ಯ
Team Udayavani, Apr 27, 2021, 4:38 PM IST
ಯಾದಗಿರಿ: ದಿನೇ ದಿನೇ ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದರೆ ಆರೋಗ್ಯ ಇಲಾಖೆಯೊಂದಿಗೆ ಸರ್ವರ ಸಹಕಾರ ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-19ಗೆ ಸಂಬಂ ಧಿಸಿದಂತೆ ಸಂಪರ್ಕ ಪತ್ತೆ ಹಚ್ಚುವಿಕೆ ಕುರಿತು ನಡೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕೋವಿಡ್ 2ನೇ ಅಲೆ ತಡೆಯಲು ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಕೋವಿಡ್ ಪಾಸಿಟಿವ್ ವರದಿ ಬಂದವರ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವರ ಪತ್ತೆ ಹಚ್ಚುವುದು ತುಂಬ ಮುಖ್ಯ. ಜಿಲ್ಲಾಧಿಕಾರಿಗಳ ಆದೇಶದನ್ವಯ ಸಂಪರ್ಕ ಪತ್ತೆಹಚ್ಚುವನಿಟ್ಟಿನಲ್ಲಿ ಶಿಕ್ಷಕರನ್ನು ನೇಮಿಸಿ ಮತ್ತು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.
ಕೋವಿಡ್ ರೋಗಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಕೋವಿಡ್ ಪರೀಕ್ಷೆ ನಂತರ ನಿಮ್ಮ ಸಂಪರ್ಕದಲ್ಲಿರುವರು, ಅವರ ಊರು,ಪ್ರದೇಶ, ಮನೆ ಸಮೀಪದ ದೇವಸ್ಥಾನ,ಮಸೀದಿ ಮುಂತಾದವುಗಳ ಲ್ಯಾಂಡ್ ಮಾರ್ಕ್ ಬಗ್ಗೆ,ಅವರು ಕೆಲಸ ಮಾಡುವ ಸ್ಥಳದ ಬಗ್ಗೆ ಪ್ರಶ್ನೆಗಳನ್ನು ಕೇಳಿಉತ್ತರ ಪಡೆದುಕೊಳ್ಳಬೇಕು ಎಂದರು.ಉತ್ತರ ಪಡೆದ ನಂತರ ಮಾಹಿತಿಯನ್ನು contacttracing app ನಲ್ಲಿ ಅಪ್‌ಲೋಡ್ ಮಾಡಬೇಕು. ಇದರಿಂದ ಕೋವಿಡ್ 2ನೇ ಅಲೆ ತಡೆಯಲು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಕಾಮಶೆಟ್ಟಿ ಮಾತನಾಡಿ, ಈಗಾಗಲೇ ಬೇರೆಜಿಲ್ಲೆಗಳಿಂದ ಆಗಮಿಸುತ್ತಿರುವರ ಪ್ರಯಾಣಿಕರಿಗೆ ಕೋವಿಡ್‌ಪರೀಕ್ಷೆ ಮಾಡಲಾಗುತ್ತಿದ್ದು, ಒಂದು ವೇಳೆ ಇವರಲ್ಲಿಪಾಸಿಟಿವ್ ಕಂಡುಬಂದರೆ ಅವರ ಸಂಪರ್ಕದಲ್ಲಿರುವಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆಯಲ್ಲಿಸಿಬ್ಬಂದಿಗಳ ಅಭಾವವಿರುವ ಕಾರಣ ಶಿಕ್ಷಕರನ್ನು ಈಕಾರ್ಯಕ್ಕೆ ನೇಮಿಸಲಾಗಿದೆ ಎಂದ ಅವರು, ಕೊರೊನಾಸೋಂಕಿನ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯಸಂಪರ್ಕದಲ್ಲಿರುವರು ಮತ್ತು ಅವರ ಪ್ರಯಾಣದ ವಿವರ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಹಿರಿಯ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ವಡಗೇರಾ ತಹಶೀಲ್ದಾರ್ ಸುರೇಶ ಅಂಕಲಗಿ,ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಜಿಲ್ಲಾಕುಟುಂಬ ಕಲ್ಯಾಣಾಧಿ ಕಾರಿ ನಾಗರಾಜ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.