ಕೋವಿಡ್ 19: ಕಡಿಮೆಗೊಳ್ಳುತ್ತಿಲ್ಲ ಸೋಂಕಿನ ವೇಗ.! ಮಹಾರಾಷ್ಟ್ರಕ್ಕೆ ಮತ್ತಷ್ಟು ಬಿಗಿ ಕ್ರಮ..?
Team Udayavani, Apr 27, 2021, 5:16 PM IST
ಸಾಂದರ್ಭಿಕ ಚಿತ್ರ
ಮಹಾರಾಷ್ಟ್ರ : ಮುಂಬೈ ಮತ್ತು ಥಾಣೆಯಲ್ಲಿ ಕೋವಿಡ್ 19 ಪರಿಸ್ಥಿತಿ ಕಡಿಮೆಯಾಗಿದ್ದರೂ ವಿದರ್ಭ ಮತ್ತು ಮರಾಠವಾಡದಲ್ಲಿ ಸೋಂಕುಗಳು ಹೆಚ್ಚಾಗುತ್ತಿವೆ ಎಂದು ಮಹಾರಾಷ್ಟ್ರ ಸಮಾಜ ಕಲ್ಯಾಣ ಸಚಿವ ವಿಜಯ್ ವಾಡೆಟ್ಟಿವಾರ್ ಅವರು ಹೇಳಿದ್ದಾರೆ.
ಈ ಬಗ್ಗೆ ಏಪ್ರಿಲ್ 29 ಗುರುವಾರ ನಡೆಯುವ ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು ಎಂದರು. ಸಭೆ ರಂದು ಮಧ್ಯಾಹ್ನ 12.30 ಕ್ಕೆ ನಡೆಯಲಿದೆ.
ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಜ್ಯದ ಜನರಿಗೆ ಉಚಿತ ಕೋವಿಡ್ 19 ಲಸಿಕೆಗಳನ್ನು ನೀಡುವುದಾಗಿ ಘೋಷಿಸಿದ್ದರು.
ಓದಿ : I went for campaigning because they conducted the Elections: Siddaramaiah
ಇನ್ನು, ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 66,191 ಹೊಸ ಕೊರೊನಾವೈರಸ್ ಸಕಾರಾತ್ಮಕ ಪ್ರಕರಣಗಳೊಂದಿಗೆ ಸೋಂಕಿನ ಪ್ರಮಾಣ 42,95,027 ಕ್ಕೆ ತಲುಪಿದ್ದರೆ, 832 ಮಂದಿ ಮೃತರಾಗುವುದರೊಂದಿಗೆ ಸಾವಿನ ಸಂಖ್ಯೆ 64,760 ಕ್ಕೆ ಏರಿಕೆಯಾಗಿದೆ.
ಇನ್ನು, ಮಹಾರಾಷ್ಟ್ರದಲ್ಲಿ ಈಗ 6,98,354 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಏಪ್ರಿಲ್ 15 ರಿಂದ ಮಹಾರಾಷ್ಟ್ರವು ಲಾಕ್ ಡೌನ್ ನಿರ್ಬಂಧಗಳಿಗೆ ಒಳಪಟ್ಟಿದೆ. ಏಪ್ರಿಲ್ 21 ರಂದು ಮಹಾರಾಷ್ಟ್ರ ಸರ್ಕಾರವು ಕೋವಿಡ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು, ಇದು ಏಪ್ರಿಲ್ 22 ರಂದು ರಾತ್ರಿ 8 ರಿಂದ ಜಾರಿಗೆ ಬರುವ ಮತ್ತು ಮೇ 1 ರಂದು ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಅಗತ್ಯ ಅಂಗಡಿಗಳು ಮತ್ತು ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಅಂಗಡಿ ಮುಂಗಟ್ಟಯಗಳನ್ನು ಮೇ ವರೆಗೆ ಮುಚ್ಚಬೇಕೆಂಬುದಾಗಿ ಮಾರ್ಗಸೂಚಿಯಲ್ಲಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಒಟ್ಟಿನಲ್ಲಿ ಲಾಕ್ ಡೌನ್ ನಿರ್ಬಂಧಗಳಿದ್ದರು ನಿತ್ಯ ದಾಖಲಾಗುತ್ತಿರುವ ಸೋಂಕಿನ ಪ್ರಮಾಣದಲ್ಲಿ ಕಡಿಮೆ ಕಂಡುಬಂದಿಲ್ಲ. ಈಗಿನ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಸಾಧ್ಯತೆಯ ಬಗ್ಗೆ ರಾಜಕೀಯ ವಲಯದಲ್ಲಿ ಹೇಳಲಾಗುತ್ತರುವುದಾಗಿ ವರದಿಯಾಗಿದೆ.
ಓದಿ : ಕಾಂಗ್ರೆಸ್ ನಿಂದ ರಾಜ್ಯಮಟ್ಟ ಕೋವಿಡ್ ಸೆಂಟರ್ ಮಾಡುತ್ತೇವೆ: ಡಿ.ಕೆ.ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.