ವೆಂಟಿಲೇಟರ್ ಸದ್ಬಳಕೆಯಾಗಲಿ : ನಾರಾಯಣ ಸ್ವಾಮಿ

Team Udayavani, Apr 27, 2021, 7:31 PM IST

27-13

ಚಿತ್ರದುರ್ಗ: ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಜಿಲ್ಲೆಯಲ್ಲಿ 30 ವೆಂಟಿಲೇಟರ್‌ಗಳಿದ್ದರೂ, ಬಳಕೆಗೆ ಲಭ್ಯವಿರುವುದು 12 ಮಾತ್ರ, ಇನ್ನುಳಿದ 18 ಧೂಳು ಹಿಡಿಯುತ್ತಿವೆ ಎನ್ನುವ ಸಂಗತಿ ಸೋಮವಾರ ಸಂಸದ ಎ. ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೆಳಕಿಗೆ ಬಂದಿದೆ. ಕೋವಿಡ್‌ ಕುರಿತ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ಅಧಿ ಕಾರಿಗಳು ನೀಡಿದ ಈ ಮಾಹಿತಿ ಕೇಳಿ ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ತಕ್ಷಣ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಂಡು ಎಲ್ಲವೂ ಚಾಲನೆಯಲ್ಲಿರುವಂತೆ ನೋಡಿಕೊಳ್ಳಿ ಎಂದು ಜಿಲ್ಲಾ  ಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಸರ್ಜನ್‌ ಡಾ. ಬಸವರಾಜಪ್ಪ ಮಾಹಿತಿ ನೀಡಿ, ಜಿಲ್ಲಾ ಆಸ್ಪತ್ರೆಯಲ್ಲಿ 9 ಹಾಗೂ ಬಸವೇಶ್ವರ ಆಸ್ಪತ್ರೆಯ ಎರಡು ವೆಂಟಿಲೇಟರ್‌ಗಳು ಮಾತ್ರ ಸೇವೆ ಒದಗಿಸುತ್ತಿವೆ. ವೆಂಟಿಲೇಟರ್‌ ಬಳಕೆಗೆ ಜಿಲ್ಲಾಸ್ಪತ್ರೆಯಲ್ಲಿ 4 ಜನ ಮಾತ್ರ ಅರವಳಿಕೆ ವೈದ್ಯರಿದ್ದಾರೆ. ಇವರೊಂದಿಗೆ 20 ಶುಶ್ರೂಷಕಿಯರಿಗೆ ತರಬೇತಿ ನೀಡಲಾಗಿದೆ. ಇನ್ನೂ ಐವರು ಅರವಳಿಕೆ ತಜ್ಞರು ಹಾಗೂ ತಂತ್ರಜ್ಞರ ಅಗತ್ಯವಿದೆ ಎಂದು ಸಭೆಯ ಗಮನಕ್ಕೆ ತಂದರು.

ಕಳೆದ ವರ್ಷ ಕೊರೊನಾ ಕಾಣಿಸಿಕೊಂಡ ಬಳಿಕ ವೆಂಟಿಲೇಟರ್‌ಗಳನ್ನು ಖರೀದಿಸಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ಎಲ್ಲ ತಾಲೂಕುಗಳಿಗೆ ಒದಗಿಸಲಾಗಿತ್ತು. ಪ್ರತಿ ತಾಲೂಕಿಗೆ ಎರಡು ವೆಂಟಿಲೇಟರ್‌ಗಳಿದ್ದರೂ ಬಳಕೆಯಾಗದಿರುವುದು ಸೋಜಿಗದ ಸಂಗತಿ ಎಂದು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ವೆಂಟಿಲೇಟರ್‌ ನಿರ್ವಹಣೆಗೆ ನುರಿತ ಸಿಬ್ಬಂದಿಯ ಅಗತ್ಯವಿದೆ ಎಂಬುದನ್ನು ಏಕೆ ಈವರೆಗೆ ಮನವರಿಕೆ ಮಾಡಿಕೊಟ್ಟಿಲ್ಲ, ಅವು ಕಾರ್ಯನಿರ್ವಹಿಸದಿದ್ದರೆ ಜನರಿಗೆ ತೊಂದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ಅಗತ್ಯ ಇರುವ ತಂತ್ರಜ್ಞರು ಹಾಗೂ ಅರವಳಿಕೆ ತಜ್ಞರನ್ನು ನೇಮಕಾತಿ ಮಾಡಿಕೊಳ್ಳಿ. ವೈದ್ಯರು ಸಿಗದಿದ್ದರೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸೇವೆ ನೀಡಲು ಯತ್ನಿಸಿ. ಯಾವ ಕಾರಣಕ್ಕೂ ವೆಂಟಿಲೇಟರ್‌ಗಳು ಮೂಲೆ ಸೇರಬಾರದು ಎಂದು ನಾರಾಯಣಸ್ವಾಮಿ ತಾಕೀತು ಮಾಡಿದರು.

ಕೋವಿಡ್‌ ರೋಗಿಯ ಆಕ್ಸಿಜನ್‌ ಸ್ಯಾಚುರೇಷನ್‌ 92ಕ್ಕಿಂತ ಕಡಿಮೆ ಇದ್ದರೆ ವೆಂಟಿಲೇಟರ್‌ ಅಗತ್ಯವಿದೆ. 92 ರಿಂದ 97ರವರೆಗೆ ಇದ್ದರೆ ಆಕ್ಸಿಜನ್‌ ಬೆಡ್‌ನ‌ಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 12 ರೋಗಿಗಳು ವೆಂಟಿಲೇಟರ್‌ನಲ್ಲಿ ಹಾಗೂ 38 ರೋಗಿಗಳು ಆಕ್ಸಿಜನ್‌ ಬೆಡ್‌ನ‌ಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ಡಾ. ಬಸವರಾಜಪ್ಪ ಹೇಳಿದರು.

ಮನೆಯಲ್ಲಿರುವ ರೋಗಿಗಳ ಮೇಲೆ ನಿಗಾ ಇರಲಿ: ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ರೋಗಿಗಳ ಮೇಲೆ ಸರಿಯಾದ ನಿಗಾವಹಿಸದ ಪರಿಣಾಮ ಬೆಂಗಳೂರಿನಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ.  ರೋಗಿಯ ಸ್ಥಿತಿ ಕೈಮೀರಿ ರೆಮ್‌ಡಿಸಿವಿರ್‌ ಇಂಜೆಕ್ಷನ್‌ ನೀಡುವುದು ಅನಿವಾರ್ಯವಾಗಿದೆ. ಇಂತಹ ಸ್ಥಿತಿ ನಮ್ಮ ಜಿಲ್ಲೆಯಲ್ಲಿ ತಲೆದೋರಬಾರದು. ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗೆ ಕೊರತೆ ಆಗಬಾರದು. ಅಗತ್ಯ ಔಷಧ, ಆಕ್ಸಿಜನ್‌ ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಸಂಸದರು ಸೂಚಿಸಿದರು.

ಒಂದೇ ತಿಂಗಳಲ್ಲಿ ಐದು ಕೋವಿಡ್‌ ರೋಗಿಗಳ ಸಾವು: ಕೋವಿಡ್‌ ಎರಡನೇ ಅಲೆಗೆ ಏ.1ರಿಂದ ಈವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ಸಿ.ಎಲ್‌.ಫಾಲಾಕ್ಷ ಮಾಹಿತಿ ನೀಡಿದರು. ಚಿತ್ರದುರ್ಗದ ಮೂರು, ಚಳ್ಳಕೆರೆ ಹಾಗೂ ಹಿರಿಯೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಎಲ್ಲರೂ 60 ವರ್ಷ ಮೇಲ್ಪಟ್ಟವರಾಗಿದ್ದು, ಹಲವು ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಹೊರ ಜಿಲ್ಲೆಗೆ ತೆರಳಿದ್ದರಿಂದ ಚಿತ್ರದುರ್ಗದ ಬುಲೆಟಿನ್‌ಗೆ ಸೇರ್ಪಡೆಯಾಗಿಲ್ಲ ಎಂದರು. ಮೊದಲ ಅಲೆಗೆ 69 ಜನರು ಮೃತಪಟ್ಟಿದ್ದರು. ನವೆಂಬರ್‌ನಿಂದ ಏಪ್ರಿಲ್‌ವರೆಗೆ ಕೋವಿಡ್‌ ಸಾವು ಸಂಭವಿಸಿರಲಿಲ್ಲ. ಜಿಲ್ಲೆಯಲ್ಲಿ ಕೋವಿಡ್‌ ಸಾವಿನ ಪ್ರಮಾಣ ಶೇ 0.49 ಇದೆ. ರಾಜ್ಯದಲ್ಲಿಯೇ ತೀರಾ ಕನಿಷ್ಠ ಪ್ರಮಾಣದ ಸಾವು ಜಿಲ್ಲೆಯಲ್ಲಿ ಸಂಭವಿಸಿವೆ ಎಂದು ವಿವರಿಸಿದರು. ಹೆಚ್ಚುವರಿ ಜಿಲ್ಲಾ ಕಾರಿ ಬಾಲಕೃಷ್ಣ ಸೇರಿದಂತೆ ಇತರೆ ಅಧಿ ಕಾರಿಗಳು ಭಾಗವಹಿಸಿದ್ದರು.

ಲಸಿಕೆ ಹಾಕುವ ಗುರಿ ತಲುಪಲು ವಿಫಲ: ಜಿಲ್ಲೆಯ 15 ಲಕ್ಷ ಜನರ ಪೈಕಿ 4.48 ಲಕ್ಷ ಜನರಿಗೆ ಲಸಿಕೆ ನೀಡುವಂತೆ ಸರ್ಕಾರ ಆರೋಗ್ಯ ಇಲಾಖೆಗೆ ಗುರಿ ನೀಡಿತ್ತು. ಆದರೆ, ಈವರೆಗೆ ಕೇವಲ 1.85 ಲಕ್ಷ ಜನರು ಮಾತ್ರ ಕೋವಿಡ್‌ ಲಸಿಕೆ ಪಡೆದಿದ್ದಾರೆ ಎಂಬ ಸಂಗತಿ ಕೇಳಿ ಸಂಸದ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಡಿಎಚ್‌ಒ ಡಾ.ಸಿ.ಎಲ್‌.ಫಾಲಾಕ್ಷ ಮಾಹಿತಿ ನೀಡಿ, ಜಿಲ್ಲೆಯಲ್ಲಿ 199 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಮೂರು ಹಂತದಲ್ಲಿ ಲಸಿಕೆ ನೀಡಲಾಗಿದೆ. 60 ವರ್ಷ ಮೀರಿದ 1.45 ಲಕ್ಷ ಜನರಲ್ಲಿ 1.10 ಲಕ್ಷ ಜನರು ಲಸಿಕೆ ಪಡೆದಿದ್ದಾರೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನಾರಾಯಣಸ್ವಾಮಿ ನಮ್ಮ ಬೆನ್ನು ನಾವೇ ತಟ್ಟಿಕೊಂಡು ಸಾಕಾಗಿದೆ. ಅರ್ಧದಷ್ಟು ಜನರಿಗೆ ಲಸಿಕೆ ನೀಡಲು ಸಾಧ್ಯವಾಗಿಲ್ಲ ಎಂದರೆ ಏನು, ಲಸಿಕಾ ವಿತರಣೆಯನ್ನು ಆಂದೋಲನದ ಮಾದರಿಯಲ್ಲಿ ನಡೆಸಿ, ಗ್ರಾಮೀಣ ಪ್ರದೇಶದ ಜನರಿಗೆ ಲಸಿಕೆ ನೀಡಿ ರಾಜ್ಯಕ್ಕೆ ಮಾದರಿಯಾಗಿ ಎಂದು ಹೇಳಿದರು.

ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ಲಸಿಕಾ ಉತ್ಸವಕ್ಕೆ ಚಾಲನೆ ನೀಡಿದ್ದು, 100ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಲಸಿಕೆಗೆ ಜನರನ್ನು ಕರೆತರಲು ಎನ್‌ಎಸ್‌ಎಸ್‌ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದರು.

ಜಿಪಂ ಸಿಇಒ ಡಾ.ಕೆ. ನಂದಿನಿದೇವಿ ಮಾತನಾಡಿ, ಪಂಚಾಯತರಾಜ್‌ ಇಲಾಖೆಯಲ್ಲಿ ಶೇ.50 ರಷ್ಟು ಸಿಬ್ಬಂದಿ ಲಸಿಕೆ ಪಡೆದಿದ್ದಾರೆ. ಈ ಹಿಂದೆ ಗ್ರಾಮ ಮಟ್ಟದ ಸಮಿತಿ ರಚನೆ ಆಗಿದ್ದವು. ಅದೇ ಸಮಿತಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲು ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜಿ. ರಾಧಿ ಕಾ ಮಾತನಾಡಿ, ಮಾಸ್ಕ್ ಧರಿಸದಿವುದು, ಸಾಮಾಜಿಕ ಅಂತರದ ಉಲ್ಲಂಘನೆ ಸೇರಿದಂತೆ ನಿಯಮ ಉಲ್ಲಂಘನೆ ಮಾಡಿದವರಿಂದ ಈವರೆಗೆ 7 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಅನೇಕರನ್ನು ದೂರು ದಾಖಲಿಸಿ ಜೈಲಿಗೆ ಕಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೋವಿಡ್‌ ಟೆಸ್ಟ್‌ ಲ್ಯಾಬ್‌ ಹೆಚ್ಚಿಸಿ: ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೋವಿಡ್‌ ತಪಾಸಣೆಗಾಗಿ ಲ್ಯಾಬ್‌ ಸ್ಥಾಪಿಸಲು ಅಗತ್ಯ ಪ್ರಸ್ತಾವನೆ ಸಲ್ಲಿಸಿ ಎಂದು ಸಂಸದರು ಸೂಚಿಸಿದ್ದಾರೆ. ಪ್ರತಿ ಮನೆಗೆ ಭೇಟಿ ನೀಡಿ ಕೊರೊನಾ ಪರೀಕ್ಷೆ ನಡೆಸುವ ಅಗತ್ಯವಿದೆ. ಹೀಗಾಗಿ ಎಲ್ಲಾ ತಾಲೂಕಿನಲ್ಲೂ ಲ್ಯಾಬ್‌ ಸ್ಥಾಪಿಸಬೇಕು. ಈ ನಿಟ್ಟಿನಲ್ಲಿ ಲ್ಯಾಬ್‌ಗಳು ಹೆಚ್ಚಾದರೆ ಹೆಚ್ಚು ಹೆಚ್ಚು ಜನರನ್ನು ತಪಾಸಣೆ ನಡೆಸಬಹುದು ಎಂದು ಅಧಿ ಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.