ಆಮ್ಲಜನಕ ಸ್ಥಿತಿ ಗತಿಗಳ ಬಗ್ಗೆ ಪ್ರಧಾನಿ, ಗೃಹ ಸಚಿವರಿಂದಲೇ ಪರಿಶೀಲನೆ
Team Udayavani, Apr 28, 2021, 7:30 AM IST
ಹೊಸದಿಲ್ಲಿ : ದೇಶದಲ್ಲಿ ವೈದ್ಯ ಕೀಯ ಆಮ್ಲಜನಕ ಪೂರೈಕೆಯ ಮೇಲುಸ್ತು ವಾರಿ ಯನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ವತಃ ವಹಿಸಿದ್ದಾರೆ ಎಂದು ಕೇಂದ್ರ ಸರಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ. ಜತೆಗೆ ಆಮ್ಲಜನಕ ಪೂರೈಕೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳ ಲಾಗುತ್ತಿದೆ ಎಂದು ನ್ಯಾ| ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಸಲ್ಲಿಸಲಾಗಿರುವ 200 ಪುಟಗಳ ಅಫಿದವಿತ್‌ನಲ್ಲಿ ಉಲ್ಲೇಖೀಸಲಾಗಿದೆ.
ದೇಶದ ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆ ಯನ್ನು ಸರಾಗಗೊಳಿಸುವ ಕ್ರಮ ಪ್ರಗತಿ ಯಲ್ಲಿದೆ. ಕೊರೊನಾ ಪರಿ ಸ್ಥಿತಿ ಮಾತ್ರವಲ್ಲ, ಅದರ ಅನಂತರದ ದಿನಗಳ ಅಗತ್ಯಕ್ಕೂ ಒದಗುವಂತೆ ವ್ಯವಸ್ಥೆ ಕೈಗೊಳ್ಳಲಾಗುತ್ತದೆ ಎಂದು ಸರಕಾರ ಹೇಳಿದೆ.
ಕೊರೊನಾ ನಿಯಂ ತ್ರಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ವೋಚ್ಚ ನ್ಯಾಯಾ ಲಯವು ಪ್ರಶ್ನಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಈ ಅಫಿದವಿತ್ ಸಲ್ಲಿಸಿದೆ.
ಕಾರಣ ಏನು?
ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳ ಬೆಲೆಯಲ್ಲಿ ವ್ಯತ್ಯಾಸ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಇದರ ಹಿಂದಿನ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಲಸಿಕೆ ಮತ್ತು ಇತರ ಅಗತ್ಯ ಔಷಧೀಯ ವಸ್ತುಗಳ ದರ ನಿಗದಿಗೆ ಅಳವಡಿಸಿಕೊಂಡ ಆಧಾರ, ತರ್ಕಗಳೇನು? ಇಂಥ ರಾಷ್ಟ್ರೀಯ ಬಿಕ್ಕಟ್ಟಿನಲ್ಲಿ ನಾವು ಮೂಕಪ್ರೇಕ್ಷಕರಾಗಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ನ ಪಾತ್ರ ಈ ವೇಳೆ ನಿರ್ಣಾಯಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ರಾಜ್ಯಗಳಿಗೆ ಸೂಚನೆ
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಗೆ ಸಿದ್ಧತೆ ಹೇಗೆ ನಡೆದಿದೆ ಎಂದು ಪ್ರಶ್ನಿಸಿರುವ ನ್ಯಾಯಪೀಠ, ಲಸಿಕೆ ನೀಡಿಕೆಗೆ ಸಂಬಂಧಿಸಿದ ಮೂಲ ಸೌಕರ್ಯಗಳ ಕುರಿತು ಮಾಹಿತಿ ನೀಡು ವಂತೆ ಎಲ್ಲ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿದೆ. ಲಸಿಕೆ, ಆಮ್ಲಜನಕ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.