![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 28, 2021, 1:32 PM IST
ಮುಂಬೈ: ಕೋವಿಡ್ ಎರಡನೇ ಅಲೆಯ ಉಲ್ಬಣದಿಂದ ಸೃಷ್ಠಿಯಾಗಿರುವ ಆಮ್ಲಜನಕದ ಕೊರತೆ ನೀಗಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಕೈಜೋಡಿಸಿದ್ದಾರೆ.
ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.
ಇಂದು ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ ಮಾಡಿದ್ದರು. ಇದೀಗ ದೇಶಕ್ಕೆ ಅಗತ್ಯ ಇರುವ ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.
ಇನ್ನು ದೇಶದಲ್ಲಿ ಕೋವಿಡ್ ಅಲೆ ರಣಭೀಕರತೆ ಸೃಷ್ಟಿಸುತ್ತಿದೆ. ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಆತಂಕಕ್ಕೆ ಕಾರಣವಾಗಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.