ಆಹಾರ ಸಚಿವರು ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ: ಹೆಚ್.ಡಿ.ಕೆ ಗರಂ
Team Udayavani, Apr 28, 2021, 4:53 PM IST
ಬೆಂಗಳೂರು : ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ. ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ ಎಂದಿದ್ದಾರೆ.
ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಮಾಜಿ ಸಿಎಂ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಲಾಕ್ ಡೌನ್ ನಿಯಮ ಕಟ್ಟು ನಿಟ್ಟಾಗಿ ಜಿಲ್ಲೆಯಾದ್ಯಂತ ಜಾರಿಯಾಗಬೇಕು : ಸಚಿವ ಬಿ.ಎ.ಬಸವರಾಜ
ಲಾಕ್ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ? ಎಂದು ಗದಗ ಜಿಲ್ಲೆಯ ರೈತ ಸಂಘದ ಅಧ್ಯಕ್ಷ ಈಶ್ವರ್ ಪ್ರಶ್ನಿಸಿದಕ್ಕೆ ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಅಹಂಕಾರದ ಮಾತುಗಳನ್ನಾಡಿದ್ದಾರೆ. ಆಹಾರ ಸಚಿವರ ಈ ಆಡಿಯೋ ವೈರಲ್ ಆಗಿದೆ.
ಸಚಿವರ ಮಾತು ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದ್ದಂತೆ ಉಮೇಶ್ ಕತ್ತಿ ಕ್ಷಮೆಯಾಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.