ಮಧ್ಯ ಪ್ರದೇಶ : ಕ್ರಯೋಜನಿಕ್ ಆಕ್ಸಿಜನ್ ಟ್ಯಾಂಕರ್ ನೀಡಲು ಶಾ ಭರವಸೆ
Team Udayavani, Apr 28, 2021, 7:19 PM IST
ಭೋಪಾಲ್ : ಕೋವಿಡ್ ಸೋಂಕಿನಿಂದ ಮತ್ತೆ ಬಿಕ್ಕಟ್ಟಿಗೆ ಸಿಲುಕಿದ ಮಧ್ಯಪ್ರದೇಶಕ್ಕೆ ಕೇಂದ್ರ ಗೃಹ ಸಚಿವ ಕ್ರಯೋಜನಿಕ್ ಆಕ್ಸಿಜನ್ ಟ್ಯಾಂಕರ್ ನನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಫೋನ್ ಸಂಭಾಷಣೆಯಲ್ಲಿ ಮಾತನಾಡಿದ ಅಮಿತ್ ಶಾ, ಮಧ್ಯಪ್ರದೇಶದಲ್ಲಿನ ಆಕ್ಸಿಜನ್ ಕೊರತೆಯನ್ನು ನೀಗಿಸಲು ಆಕ್ಸಿಜನ್ ಟ್ಯಾಂಕರ್ ನನ್ನುಒದಗಿಸುವುದಾಗಿ ಭರವಸೆ ನೀಡಿರುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಚೇರಿ ತಿಳಿಸಿರುವುದನ್ನು ಸುದ್ದಿ ಸಂಸ‍್ಥೆ ಪಿಟಿಐ ವರದಿ ಮಾಡಿದೆ.
ಓದಿ :ಕೋವಿಡ್ ನಿಂದ ಮೃತಪಟ್ಟ ಮಹಿಳೆ: ಅಂತ್ಯಕ್ರಿಯೆ ನಡೆಸಲು ಬಾರದ ಆರೋಗ್ಯ ಇಲಾಖೆ ಸಿಬ್ಬಂದಿ
ಈ ಬಗ್ಗೆ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಚೇರಿ, ರಾಜ್ಯದ ಕೋವಿಡ್ ಪರಿಸ್ಥಿತಿಗೆ ಕೇಂದ್ರ ಸಾಥ್ ನೀಡುತ್ತಿದೆ. ಆಕ್ಸಿಜನ್ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ರಾಜ್ಯದೊಂದಿಗೆ ಸಹಭಾಗಿತ್ವವನ್ನು ವಹಿಸಲಿದೆ ಎಂದಿದೆ.
ಇನ್ನು, ರಕ್ಷಣಾ ಸಚಿವಾಲಯದ ಸಹಯೋಗದೊಂದಿಗೆ ರಾಜ್ಯದಲ್ಲಿ ಬಾಲಘಾಟ್, ಧಾರ್, ದಮೋಹ್, ಜಬಲ್ಪುರ್, ಬಾರ್ವಾನಿ, ಶಹ್ದೋಲ್, ಮಾಂಡ್ಸೌರ್ ಮತ್ತು ಸತ್ನಾದಲ್ಲಿ ಆಮ್ಲಜನಕ ಪ್ಲ್ಯಾಂಟ್ಸ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಕೋವಿಡ್ ಸೋಂಕಿನ ಹಠಾತ್ ಏರಿಕೆಯ ಕಾರಣದಿಂದಾಗಿ ರಾಜ್ಯದ ಕೋವಿಡ್ ಆಸ್ಪತ್ರೆಗಳುಇ ಆಕ್ಸಿಜನ್ ಕೊರತೆಯನ್ನು ಎದುರಿಸುತ್ತಿದೆ.
ಮಧ್ಯಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,417 ಕೋವಿಡ್ ಪ್ರಕರಣಗಳು ವರದಿಯಾಗಿದೆ. ಒಟ್ಟು ಈವರೆಗೆ ರಾಜ್ಯದಲ್ಲಿ 5,319 ಸಾವುಗಳು ಸೇರಿದಂತೆ 5,25,407 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿವೆ.
ಓದಿ : ಆಕ್ಸಿಜನ್‍ಗಾಗಿ ಹಾಹಾಕಾರ: 5 ವರ್ಷಗಳ ಹಿಂದೆ ಪ್ರಾಣೇಶ್ ಹೇಳಿದ್ದ ಮಾತು ಇಂದು ನಿಜವಾಯ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.