ಕೊರೊನಾ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡಿಸಿಕೊಳಿ

Team Udayavani, Apr 28, 2021, 9:13 PM IST

28-13

ದಾವಣಗೆರೆ: ಕೊರೊನಾದ ಸಣ್ಣ ಪ್ರಮಾಣದಲ್ಲಿನ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಪರೀಕ್ಷೆ ಮಾಡಿಸಿಕೊಂಡು ಆಸ್ಪತ್ರೆಗೆ ದಾಖಲಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಮನವಿ ಮಾಡಿದ್ದಾರೆ.

ಮಂಗಳವಾರ ಮೋತಿ ವೀರಪ್ಪ ಕಾಲೇಜಿನ ಲಸಿಕಾಕರಣ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದ ಲಕ್ಷಣಗಳು ಕಾಣಿಸಿಕೊಂಡ ನಂತರವೂ ಕೆಲವರು ಸ್ವಯಂ ಚಿಕಿತ್ಸೆ ಪಡೆದುಕೊಳ್ಳುವುದು, ಜ್ವರ ಮತ್ತಿತರೆ ಸಮಸ್ಯೆಗೆ ಸಣ್ಣಪುಟ್ಟ ವೈದ್ಯರಲ್ಲಿ ಚಿಕಿತ್ಸೆ ಪಡೆದುಕೊಂಡು ಸಮಸ್ಯೆ ಉಲ್ಬಣವಾದಾಗ ಆಸ್ಪತ್ರೆಗೆ ಬರುವುದು ಕಂಡು ಬರುತ್ತಿದೆ. ಸಣ್ಣ ಪ್ರಮಾಣದಲ್ಲಿನ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಪರೀಕ್ಷೆ ಮಾಡಿಸಿಕೊಂಡು ಆಸ್ಪತ್ರೆಗೆ ದಾಖಲಾಗಬೇಕು ಎಂದು ಮನವಿ ಮಾಡಿದರು.

ಕೋವಿಡ್‌ನ‌ ಮೊದಲನೇ ಅಲೆಯಲ್ಲಿ ಜ್ವರ, ಕೆಮ್ಮು, ಸುಸ್ತು ಮುಂತಾದ ಲಕ್ಷಣಗಳು ಕಂಡು ಬರುತ್ತಿದ್ದವು. ಕೊರೊನಾದ 2ನೇ ಅಲೆಯಲ್ಲಿ ಲಕ್ಷಣಗಳು ಬದಲಾಗಿವೆ. ತಲೆನೋವು, ಭೇದಿ, ಕಣ್ಣು ಕೆಂಪಾಗುವುದು ಮುಂತಾದ ಲಕ್ಷಣ ಕಂಡು ಬರುತ್ತಿವೆ ಎಂದು ತಜ್ಞ ವೈದ್ಯರ ಸಮಿತಿ ತಿಳಿಸಿದೆ. ಹಾಗಾಗಿ ಲಕ್ಷಣಗಳು ಕಂಡ ಬಂದ ತಕ್ಷಣವೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ಆಸ್ಪತ್ರೆಗೆ ದಾಖಲಾಗಬೇಕು ಎಂದರು. ಜಿಲ್ಲಾ ಆಸ್ಪತ್ರೆಯಲ್ಲಿ ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ಗಳ ಕೊರತೆಯೇ ಇಲ್ಲ. ತಮ್ಮ ಬಳಿ ಸಂಪೂರ್ಣ ಮಾಹಿತಿ ಇದೆ. ಈವರೆಗೆ ಯಾವುದೇ ರೋಗಿ ವೆಂಟಿಲೇಟರ್‌ಗೆ ಹೋಗಿಲ್ಲ. ಶೇ.60 ರಷ್ಟು ಆಕ್ಸಿಜನ್‌ ಬೆಡ್‌ ಖಾಲಿ ಇವೆ. ಆಕ್ಸಿಜನ್‌ ಬೆಡ್‌ಗಳ ನಿರ್ವಹಣೆಗಾಗಿಯೇ ಸಮಿತಿ ಇದೆ. ಆಕ್ಸಿಜನ್‌ ಬೆಡ್‌ಗಳನ್ನು ಸಹ ಬಹಳ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಯಾರಿಗೆ ಆಕ್ಸಿಜನ್‌, ಎಷ್ಟು ಗಂಟೆ ಬೇಕಾಗುತ್ತದೆಯೋ ಅಷ್ಟು ಗಂಟೆ ಆಕ್ಸಿಜನ್‌ ಬೆಡ್‌ನ‌ಲ್ಲಿ ವ್ಯವಸ್ಥೆ ಮಾಡಲಾಗುವುದು. ನಂತರದಲ್ಲಿ ಬೇರೆಯವರಿಗೆ ಆಕ್ಸಿಜನ್‌ ಬೆಡ್‌ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಗೆ ಈ ಹಿಂದೆ 7 ಸಾವಿರ ಡೋಸ್‌ ಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಬರುತ್ತಿತ್ತು. ಪ್ರಾರಂಭಿಕ ಹಂತದಲ್ಲಿ ಜನರು ಲಸಿಕೆ ಪಡೆದುಕೊಳ್ಳಲಿಕ್ಕೆ ಮುಂದೆ ಬರುತ್ತಿರಲಿಲ್ಲ. ಸ್ವತಃ ನಾನು, ಜಿಲ್ಲಾ ರಕ್ಷಣಾಧಿಕಾರಿ ಇತರರು ಮಾದರಿಯಾಗಿ ಲಸಿಕೆ ಪಡೆದುಕೊಂಡು, ಏನು ಆಗುವುದಿಲ್ಲ ಎಂದು ತಿಳಿಸಿದರು ಜನರು ಬರುತ್ತಾ ಇರಲಿಲ್ಲ. ಕೊರೊನಾ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಾದಿಯಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಲು ಮುಂದೆ ಬರುತ್ತಿರುವುದು ಒಳ್ಳೆಯ ಬೆಳವಣಿಗೆ. ಜಿಲ್ಲಾಡಳಿತ ಎಲ್ಲರಿಗೂ ಕೋವಿಡ್‌ ಲಸಿಕೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಿದೆ.

ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ಸೋಮವಾರ ದಾವಣಗೆರೆ ಜಿಲ್ಲೆಗೆ 6 ಸಾವಿರ ಡೋಸ್‌ ಲಸಿಕೆ ಬಂದಿವೆ. ದಾವಣಗೆರೆಗೆ 4 ಸಾವಿರ ಡೋಸ್‌ ನೀಡಲಾಗಿದೆ. ಇನ್ನುಳಿದ ಕಡೆ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿತ್ತು. ಈಗ ದಿನಕ್ಕೆ 150, 200 ಕೊರೊನಾ ಸೋಂಕಿತರು ಬರುತ್ತಿದ್ದಾರೆ.

ಅಂತಹ ಕಡೆ ಹಿರಿಯ ನಾಗರಿಕರು ಗಂಟೆ, ಅರ್ಧ ಗಂಟೆ ಇದ್ದಾಗ ಅವರಿಗೆ ಏನಾದರೂ ಆದರೆ ಎಂದು ವೈದ್ಯರು ಹೇಳಿದ್ದರಿಂದ ಮೋತಿ ವೀರಪ್ಪ ಕಾಲೇಜಿನಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆ ಹೊರತುಪಡಿಸಿ ಇನ್ನುಳಿದ ಲಸಿಕಾ ಕೇಂದ್ರದಲ್ಲಿ ಲಸಿಕಾಕರಣ ಮುಂದುವರಿಯಲಿದೆ ಎಂದು ತಿಳಿಸಿದರು.

ದಾವಣಗೆರೆ ತಾಲೂಕಿನ ಲೋಕಿಕೆರೆ ಗ್ರಾಮದ ಮಹಿಳೆ ವೆಂಟಿಲೇಟರ್‌ ದೊರೆಯದೆ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ಮಿತ್ರರು ಹೇಳುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಯಿಂದ ಮಾಹಿತಿ ಪಡೆಯಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.