ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದಲೇ ಲಸಿಕೆ ನೀಡುವುದು ಅನುಮಾನ!
Team Udayavani, Apr 29, 2021, 3:23 PM IST
ಬೆಂಗಳೂರು: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಆದರೆ ರಾಜ್ಯದಲ್ಲಿ ಮೇ 1ರಿಂದ ಲಸಿಕೆ ನೀಡಿಕೆ ಆರಂಭವಾಗುವುದು ಅನುಮಾನ ಎನ್ನಲಾಗುತ್ತಿದೆ. ಕಾರಣ ಲಸಿಕೆ ಕೊರತೆ!
ಕರ್ನಾಟಕಕ್ಕೆ 94,47,900 ಡೋಸ್ ನೀಡಲಾಗಿದೆ. ಈ ಪೈಕಿ, 91,01,215 ಡೋಸ್ ಫಲಾನುಭವಿಗಳಿಗೆ ನೀಡಿದ್ದು, ಇದೀಗ ರಾಜ್ಯದಲ್ಲಿ 3,46,685 ಡೋಸ್ ಲಭ್ಯವಿದೆ. ಇದಲ್ಲದೆ ರಾಜ್ಯಕ್ಕೆ 4 ಲಕ್ಷ ಡೋಸ್ ಹೆಚ್ಚುವರಿಯಾಗಿ ಲಸಿಕೆ ನೀಡುವುದಾಗಿ ಸಚಿವಾಲಯ ಹೇಳಿದೆ.
ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್, ಒಂದು ಕೋಟಿ ಲಸಿಕೆಗೆ ಆದೇಶಿಸಿದ್ದು, ಕಂಪೆನಿಗಳು ಪೂರೈಸಬೇಕು. ಆ ಬಳಿಕ ಲಸಿಕೆ ನೀಡಲು ನಿರ್ಧರಿಸಬಹುದು. ಶೀಘ್ರವೇ ಲಸಿಕೆ ನೀಡುವುದಾಗಿ ಬೆಂಗಳೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.
ಇದನ್ನೂ ಓದಿ:ಅಭಿಯಾನ ಕಷ್ಟ… ವಿಪಕ್ಷ ಆಡಳಿತ ಇರುವ ನಾಲ್ಕು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಕೊರತೆ!
ಇದರೊಂದಿಗೆ ಸೀರಂ ಇನ್‌ಸ್ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ಮೇ 15ರ ಬಳಿಕವೇ ಆಯಾ ರಾಜ್ಯ ಸರಕಾರಗಳ ಬೇಡಿಕೆಯನ್ನು ಪೂರೈಸಲು ಸಾಧ್ಯ ಎಂದಿವೆ.
ಪ್ರಸ್ತುತ ಕರ್ನಾಟಕದಲ್ಲಿ ಬುಧವಾರದ ಅಂತ್ಯಕ್ಕೆ ನಾಲ್ಕು ಲಕ್ಷ ಡೋಸ್‌ನಷ್ಟು ಲಸಿಕೆ ಇದೆ. ರಾಜ್ಯದಲ್ಲಿ ಈವರೆಗೂ 80 ಲಕ್ಷಕ್ಕೂ ಅಧಿಕ ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಪೈಕಿ 38 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ.
ಲಸಿಕೆ ಪಡೆದವರ ಪೈಕಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು 68 ಲಕ್ಷ ಮಂದಿ ಇದ್ದಾರೆ. ಸೂಕ್ತ ರೀತಿಯಲ್ಲಿ ಲಸಿಕೆ ಹಂಚಿಕ ಸಾಧ್ಯವಾಗದೆ ಹಲವು ಜಿಲ್ಲೆಗಳಲ್ಲಿ ಲಸಿಕೆ ಪಡೆಯಲು ಬರುವ 45 ವರ್ಷ ಮೇಲ್ಪಟ್ಟವರನ್ನು “ಲಸಿಕೆ ಖಾಲಿಯಾಗಿದೆ, ನಾಳೆ ಬನ್ನಿ’ ಎಂದು ವಾಪಸ್ ಕಳುಹಿಸಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ.
ಕರಾವಳಿಯಲ್ಲೂ ಕಷ್ಟ: ಮೇ 1ರಿಂದ ದ.ಕ. ಹಾಗೂ ಉಡುಪಿಯಲ್ಲಿ 18ಕ್ಕಿಂತ ಮೇಲ್ಪಟ್ಟ ವಯೋ ಮಾನದವರಿಗೆ ಲಸಿಕೆ ಲಭ್ಯವಾಗುವುದು ಅನುಮಾನ. ದ.ಕ. ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ಆಧರಿಸಿ ಮೇ 10ರ ಬಳಿಕ ನೀಡುವುದಾಗಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ತಿಳಿಸಿದ್ದರೆ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಹ, ಸರಕಾರ ಸೂಚಿಸಿದ ದಿನಾಂಕದಂದು ಲಸಿಕೆ ನೀಡುವುದಾಗಿ ತಿಳಿಸಿದ್ದಾರೆ.
ಉಭಯ ಜಿಲ್ಲೆಗಳಲ್ಲಿ ಒಂದು ವಾರದಿಂದ ಲಸಿಕೆ ಪಡೆಯುವವರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಹಾಗಾಗಿ ದ.ಕ. ಜಿಲ್ಲೆಯಲ್ಲಿ ಸಾಕಷ್ಟು ಲಸಿಕೆ ಸಿಗುತ್ತಿಲ್ಲ. ಕೆಲವು ಕೇಂದ್ರಗಳಿಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಬಂದು ವಾಪಸಾಗುತ್ತಿದ್ದಾರೆ. ಹಾಗಾಗಿ ಕೆಲವು ದಿನ ಮೊದಲನೇ ಡೋಸ್ ಲಸಿಕೆ ಸಿಗದು. ಎರಡನೇ ಡೋಸ್‌ಗೆ ಸಮಸ್ಯೆ ಇಲ್ಲ. ಆದರೆ ಉಡುಪಿ ಜಿಲ್ಲೆಯಲ್ಲಿ ಸಮಸ್ಯೆ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.