ಔರಾದ: ನಾಲ್ವರು ಕಳ್ಳರ ಬಂಧನ, 17 ಬೈಕ್ ವಶಕ್ಕೆ
Team Udayavani, Apr 29, 2021, 8:06 PM IST
ಔರಾದ :ಹಲವು ದಿನಗಳಿಂದ ಔರಾದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿತರನ್ನು ಪೊಲೀಸರು ಬಂಧಿಸಿ, 7.15 ಲಕ್ಷ ರೂ. ಮೌಲ್ಯದ 17 ಬೈಕ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ತಾಲೂಕಿನ ಡೋಣಗಾಂವ(ಎಂ) ಗ್ರಾಮದ ಶಿವಾಜಿ ನಾಮದೇವ, ತೋರಣಾ ಗ್ರಾಮದ ಶಿವಶರಣಯ್ಯ, ಕೋಟಗ್ಯಾಳ್‌ದ ಸಚಿನ್ ಕುಲಕರ್ಣಿ ಮತ್ತು ಗೋವಿಂದ ನರಸಿಂಗರಾವ್ ಬಂಧಿತ ಆರೋಪಿತರು. ತಾಲೂಕಿನಲ್ಲಿ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಿದ ಹಿನ್ನಲೆ ಸಿಪಿಐ ರವಿಂದ್ರನಾಥ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಬುಧವಾರ ತಡರಾತ್ರಿ ಔರಾದ ಉಪ ಬಂಧಿಖಾನೆ ಹತ್ತಿರ ಶಿವಾಜಿ ಎಂಬಾತ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಬೈಕ್ ಕಳ್ಳತನದ ಕೃತ್ಯ ಬಾಯಿಬಿಟ್ಟಿದ್ದಾನೆ.
ಕಳ್ಳತನ ಕೃತ್ಯದಲ್ಲಿ ಶಿವಶರಣಯ್ಯ ಸಾಥ್ ನೀಡುತ್ತಿದ್ದ. ಕಳುವು ಮಾಡಿದ ವಾಹನಗಳನ್ನು ಸಚಿನ ಮತ್ತು ಗೋವಿಂದ ಅವರಿಗೆ ಕ್ರಮವಾಗಿ 14 ಮತ್ತು 3 ದ್ವಿಚಕ್ರ ವಾಹನಗಳು ಮಾರಾಟ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಜತೆಗೆ ಕಳೆದ ಮಾರ್ಚ್‌ನಲ್ಲಿ ಔರಾದ ಪಟ್ಟಣದ ಮಹಿಳೆಯೊಬ್ಬರಿಂದ ದೋಚಿದ ಬಂಗಾರ ಮತ್ತು ಬೆಳ್ಳಿ ಆಭರಣ ಮಾರಾಟ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಪಿಎಸ್‌ಐ ಮಂಜನಗೌಡ ಪಾಟೀಲ, ಎಎಸ್‌ಐ ಮಾಧವ, ನರಸಾರೆಡ್ಡಿ, ಶಿವಯೋಗಪ್ಪ, ಅನೀಲರೆಡ್ಡಿ ಸೇರಿದಂತೆ ಇನ್ನಿತರರಿದ್ದರು. ಪ್ರಕರಣ ಭೇದಿಸಿರುವ ಪೊಲೀಸ ತಂಡಕ್ಕೆ ಸೂಕ್ತ ಬಹುಮಾನ ನೀಡುವುದಾಗಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.