![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 29, 2021, 9:18 PM IST
ಚಾಮರಾಜನಗರ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ತವ್ಯದಲ್ಲಿ ತೊಡಗಿರುವ ಕೋವಿಡ್ ವಾರಿಯರ್ಸ್‌ಗಳು, ಮುಂಚೂಣಿ ಕಾರ್ಯಕರ್ತರು ಕೋವಿಡ್ ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಚಿಕಿತ್ಸೆಗೆ ಅನುವಾಗುವಂತೆ ನಗರದ ಮಾದಾಪುರದಲ್ಲಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಮೀಸಲಿಡಲಾಗಿದೆ.
ಕೋವಿಡ್ ಸೋಂಕಿತರಿಗಾಗಿ ಜಿಲ್ಲೆಯಲ್ಲಿ ನಾನಾ ಕಡೆ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಪೈಕಿ ನಗರದ ಮಾದಾಪುರದಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಹಾಸ್ಟೆಲ್ ನಲ್ಲಿಯೂ ಸಹ ಕೋವಿಡ್ ಕೇಂದ್ರ ಸಜ್ಜುಗೊಳಿಸಲಾಗಿದೆ. ಕೋವಿಡ್ ವಾರಿಯರ್ಸ್‌ಗಳಿಗಾಗಿಯೇ ಈ ಕೋವಿಡ್ ಕೇರ್ ಸೆಂಟರ್ ಸೌಲಭ್ಯ ಒದಗಿಸುವ ಮೂಲಕ ಚಾಮರಾಜನಗರ ಜಿಲ್ಲೆ ಕೋವಿಡ್ ವಾರಿಯರ್ಸ್‌ಗಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸೌಕರ್ಯ ನೀಡಿ ರಾಜ್ಯದಲ್ಲೇ ಮೊದಲು ಎನಿಸಿದೆ.
ಇದನ್ನೂ ಓದಿ : ಚಾಮರಾಜನಗರ: ಕೋವಿಡ್‌ನಿಂದ 7 ಮಂದಿ ಸಾವು
ಕೋವಿಡ್ ಸೋಂಕು ತಡೆಗಾಗಿ, ವಿವಿಧ ಇಲಾಖೆಗಳು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಹಲವಾರು ಅಧಿಕಾರಿ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕರ್ತವ್ಯದ ಅವಧಿಯಲ್ಲಿ ಅನೇಕರು ಕೋವಿಡ್ ಸೋಂಕಿಗೆ ಒಳಗಾಗುತ್ತಿರುವ ಸಂದರ್ಭಗಳು ಹೆಚ್ಚುತ್ತಿವೆ. ಇಂತಹ ವೇಳೆ ಕೋವಿಡ್ ವಾರಿಯರ್ಸ್‌ಗಳಿಗೆ ನೆರವಾಗಿ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಕೋವಿಡ್ ಕೇಂದ್ರವನ್ನು ಬಳಸಿಕೊಳ್ಳಲಾಗುತ್ತಿದೆ.
ಕೋವಿಡ್ ಕೇರ್ ಕೇಂದ್ರದಲ್ಲಿ ಒಟ್ಟು 19 ಕೊಠಡಿಗಳಿದ್ದು 56 ಹಾಸಿಗೆಗಳು ಲಭ್ಯವಿದೆ. ಈ ಪೈಕಿ 50 ಹಾಸಿಗೆಗಳನ್ನು ಕೋವಿಡ್ ವಾರಿಯರ್ಸ್‌ಗಳಿಗಾಗಿ ಇಡಲಾಗಿದೆ. ಸ್ನಾನಕ್ಕಾಗಿ ಸೋಲಾರ್ ವ್ಯವಸ್ಥೆ, ಕುಡಿಯಲು ಬಿಸಿನೀರು ಸೌಲಭ್ಯವಿದೆ. ಟಿ.ವಿ ಅಳವಡಿಸಲಾಗಿದೆ. ಯು.ಪಿ.ಎಸ್ ವ್ಯವಸ್ಥೆಯೂ ಲಭ್ಯವಿದೆ.
ಚಾಮರಾಜನಗರ ತಾಲೂಕಿನ ಮಾದಾಪುರದಲ್ಲಿ ಕೋವಿಡ್ ವಾರಿಯರ್ಸ್‌ಗಾಗಿಯೇ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರವನ್ನು ತೆರೆಯಾಗಲಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.