ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಈಶ್ವರಪ್ಪ

Team Udayavani, Apr 30, 2021, 10:54 PM IST

30-21

ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಗುರುವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಾಲೀಕತ್ವದ ಜಮೀನಿನಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ಕುಟುಂಬಗಳಿಗೆ ಸ್ವಂತ ಸೂರಿನ ಮಾಲೀಕತ್ವ ಹೊಂದಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಈಗಾಗಲೇ ಹಕ್ಕುಪತ್ರ ನೀಡಲು ಆದೇಶ ಹೊರಡಿಸಿದೆ ಎಂದರು.

ಈ ಹಕ್ಕುಪತ್ರಗಳನ್ನು ವಿತರಿಸಲು ಈ ಹಿಂದೆ ನಿಗದಿ ಪಡಿಸಿದ್ದ ದರವನ್ನು ಸಹ ಸರ್ಕಾರ ಕಡಿಮೆ ಮಾಡಿದೆ. ಅದರಂತೆ ಪುರಸಭೆ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 1200 ಚದರ ಅಡಿಗಳಿಗೆ ಮೀರದಂತೆ ರೂ. 2ಸಾವಿರ ಹಾಗೂ ಪ.ಜಾತಿ, ಪಂಗಡ ಮತ್ತು ಅಂಗವಿಕಲರಿಗೆ 1ಸಾವಿರ ರೂ. ನಿಗದಿಪಡಿಸಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳಿಗೆ ಮೀರದಂತೆ ರೂ. 2 ಸಾವಿರ ಹಾಗೂ 1ಸಾವಿರ ನಿಗದಿಪಡಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳಿಗೆ ಮೀರದಂತೆ 4ಸಾವಿರ ರೂ. ಹಾಗೂ ಪ.ಜಾತಿ, ಪಂಗಡ, ಅಂಗವಿಕಲರಿಗೆ 2ಸಾವಿರ ದರ ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ನಗರದಲ್ಲಿ ಘೋಷಿತ ಕೊಳಚೆ ಪ್ರದೇಶಗಳಲ್ಲಿರುವ 5531 ಕುಟುಂಬಗಳ 26,732 ನಿವಾಸಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಮಹಾನಗರ ಪಾಲಿಕೆ ಮತ್ತು ಇತರ ಸರ್ಕಾರಿ ಇಲಾಖೆಗಳ ಜಮೀನುಗಳಲ್ಲಿರುವ ಈ ಕೊಳಚೆ ಪ್ರದೇಶಗಳ ಜಮೀನನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಒಂದು ತಿಂಗಳ ಒಳಗಾಗಿ ಹಸ್ತಾಂತರಿಸಿ ಶೀಘ್ರ ಹಕ್ಕುಪತ್ರ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದರಿಂದ ಕೊಳೆಗೇರಿ ನಿವಾಸಿಗಳ ದಶಕಗಳ ಕನಸು ನನಸಾಗಲಿದ್ದು, ಇದೇ ರೀತಿ ಜಿಲ್ಲೆಯ ಇತರ ತಾಲೂಕುಗಳಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ 13,943 ಕುಟುಂಬಗಳಿಗೆ ಸಹ ಹಕ್ಕುಪತ್ರ ನೀಡಲು ಸಿದ್ಧತೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಮುಂದಿನ ಹಂತದಲ್ಲಿ ಖಾಸಗಿ ಜಮೀನುಗಳಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವವರಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲಾಧಿ  ಕಾರಿ ಕೆ.ಬಿ. ಶಿವಕುಮಾರ್‌ ಮತ್ತಿತರ ಅಧಿ  ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.