ಉಡುಪಿ ಜಿಲ್ಲೆ : ಶೇ.69.99 ಸೋಂಕಿತರಿಗೆ ಮನೆಯಲ್ಲೇ ಆರೈಕೆ :ವಿವಿಧೆಡೆ ಹೋಮ್‌ ಕೇರ್‌ ನಿರ್ಮಾಣ

Team Udayavani, May 1, 2021, 3:15 AM IST

ಉಡುಪಿ ಜಿಲ್ಲೆ : ಶೇ.69.99 ಸೋಂಕಿತರಿಗೆ ಮನೆಯಲ್ಲೇ ಆರೈಕೆ :ವಿವಿಧೆಡೆ ಹೋಮ್‌ ಕೇರ್‌ ನಿರ್ಮಾಣ

ಉಡುಪಿ : ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಕೋವಿಡ್‌ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗು ತ್ತಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾದವ ರಲ್ಲಿ ಶೇ. 69.99ರಷ್ಟು ಮಂದಿ ಹೋಂ ಐಸೋಲೇಶನ್‌ನಲ್ಲಿಯೇ ಗುಣಮುಖ ಆಗುತ್ತಿರುವುದು ಆರೋಗ್ಯ ಇಲಾಖೆಯ ಭಾರವನ್ನು ಇಳಿಸಿದೆ.

ಆರೋಗ್ಯ ಇಲಾಖೆಯ ಮಾಹಿತಿ ಅನ್ವಯ ಜಿಲ್ಲೆಯಲ್ಲಿ ಎ.29ರಂದು 2,359 ಪ್ರಕರಣ ಸಕ್ರಿಯವಾಗಿದೆ. ಅದರಲ್ಲಿ 1,650 ಸೋಂಕಿತರು ಹೋಂ ಐಸೋಲೇಶನ್‌ನಲ್ಲಿ ಇದ್ದಾರೆ. ಸೋಂಕಿನ ಯಾವುದೇ ಲಕ್ಷಣಗಳಿಲ್ಲದವರು ಮನೆಯಲ್ಲಿಯೇ ಆರಾಮವಾಗಿ ಪ್ರತ್ಯೇಕ ವಾಗಿಯೇ ವಿಶ್ರಾಂತಿ ಪಡೆಯುವಂತೆ ಹಾಗೂ ಅವರ ಆರೋಗ್ಯದ ಬಗ್ಗೆ ಇಲಾಖೆ ನಿಗಾ ವಹಿಸುತ್ತಿದೆ.

ಮರಣ ಪ್ರಮಾಣದಲ್ಲಿ ಇಳಿಕೆ
ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಲ್ಲಿ ಕೊರೊನಾ ಪ್ರಕರಣ ವರದಿ ಯಾಗುತ್ತಿದೆ. ಎ.29ರಂದು ಕುಂದಾಪುರ ಹಾಗೂ ಕಾರ್ಕಳ ಮೂಲದ ವಯಸ್ಕ ರಿಬ್ಬರು ವಿವಿಧ ರೋಗದಿಂದ ಬಳಲು ತ್ತಿರುವವರು ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ ಆಗಸ್ಟ್‌ – ಸೆಪ್ಟೆಂಬರ್‌ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಅಧಿಕವಿರುವ ಸಂದರ್ಭ ಮರಣ ಪ್ರಕರಣ ಶೇ. 1 ಇತ್ತು. ಈ ಬಾರಿ ನಿತ್ಯ 500ರಿಂದ 660 ಪ್ರಕರಣಗಳು ದಾಖಲಾಗುತ್ತಿದ್ದರೂ, ಮರಣ ಪ್ರಕರಣ ಶೇ. 0.6 ಇದೆ. ಇದು ನಿಜಕ್ಕೂ ಜಿಲ್ಲೆಯ ಜನರಲ್ಲಿ ನೆಮ್ಮದಿ ತರಿಸುವ ಸಂಗತಿ.

ಶೇ. 93ರಷ್ಟು ಗುಣಮುಖ
ಜಿಲ್ಲೆಯಲ್ಲಿ ಜನವರಿ ಅಂತ್ಯದ ವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಶೇ.99.22 ಇತ್ತು. ಆದರೆ ಫೆಬ್ರವರಿಯಿಂದ ಕೊರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಶೇ. 93ಕ್ಕೆ ಇಳಿಕೆಯಾಗಿದೆ. ಆರೋಗ್ಯ ಇಲಾಖೆ ಪ್ರಕಾರ ನಿತ್ಯ 500ರ ವರೆಗೆ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಸಕ್ರಿಯ ಪ್ರಕರಣ ಹೆಚ್ಚಾಗುತ್ತಿದ್ದು, ಇದರಿಂದ ಗುಣಮುಖರಾಗುವವರ ಶೇಕಡಾವಾರಿ ನಲ್ಲಿ ಇಳಿಕೆ ಕಂಡು ಬಂದಿದೆ.

ಲಕ್ಷಣವಿರುವ ಸೋಂಕು ಹೆಚ್ಚು
ಜಿಲ್ಲೆಯಲ್ಲಿ ಜನರಿಗೆ ಕೋವಿಡ್‌ ಸೋಂಕಿನ ಲಕ್ಷಣಗಳಿರುವ ಪ್ರಕರಣ ಹೆಚ್ಚಾಗುತ್ತಿದೆ. ಶೇ.30ರಷ್ಟು ಪ್ರಕರಣಗಳಲ್ಲಿ ಕೋವಿಡ್‌ ಲಕ್ಷಣಗಳಿದ್ದು ಹಾಗೂ ಶೇ. 70ರಷ್ಟು ಪ್ರಕರಣಗಳಲ್ಲಿ ಲಕ್ಷಣವೇ ಇಲ್ಲ. ಕಳೆದ ಬಾರಿ ಲಕ್ಷಣವಿರುವ ಪ್ರಕರಣ ಸಂಖ್ಯೆ ಶೇ.30ಕ್ಕಿಂತ ಕಡಿಮೆ ಇತ್ತು.

ಇಲಾಖೆ ಸನ್ನದ್ಧ
ಪ್ರಸ್ತುತ 42 ಆಸ್ಪತ್ರೆಗಳನ್ನು ಕೋವಿಡ್‌ ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ. ಆಸ್ಪತ್ರೆಗಳ ಸಂಖ್ಯೆ ಇನ್ನಷ್ಟು ಹೆಚ್ಚಳ ಮಾಡಬಹದು. ಒಟ್ಟು 2,000 ಹಾಸಿಗೆಗಳಿದ್ದು, 500 ಹಾಸಿಗೆಗಳು ಬಳಕೆಯಲ್ಲಿವೆ. ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌, ವೆಂಟಿಲೇಟರ್‌ ಸೇರಿದಂತೆ ಐಸಿಯು ಕೊಠಡಿ ಸಿದ್ಧಪಡಿ ಸಿದ್ದು, ಅಗತ್ಯಕ್ಕೆ ತಕ್ಕಂತೆ ಸಿಬಂದಿಯನ್ನು ನೇಮಕ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳ ಶೇ. 75ರಷ್ಟು ಹಾಸಿಗೆಗಳನ್ನು ಸರಕಾರಕ್ಕೆ ನೀಡಲಾಗಿದೆ.

2 ಸಾವಿರ ಹೋಂ ಕೇರ್‌

ಮೇ ತಿಂಗಳಿನಲ್ಲಿ ಕೊರೊನಾ ಪ್ರಕರಣ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುವುದರಿಂದ ಅಗತ್ಯ ಇರುವ ಸಿದ್ಧತೆ ಮಾಡಿಕೊಂಡಿದೆ. ಅದರ ಭಾಗವಾಗಿ ಜಿಲ್ಲೆಯಲ್ಲಿ 2,000 ಬೆಡ್‌ಗಳ ಹೋಮ್‌ ಕೇರ್‌ ಸೆಂಟರ್‌ ನಿರ್ಮಿಸಲಾಗಿದೆ. ಉಡುಪಿ, ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾಪು, ಕಾರ್ಕಳ, ಬೈಂದೂರು ತಾಲೂಕಿನ ನರ್ಸಿಂಗ್‌ ಹೋಂ, ಹಾಸ್ಟೆಲ್‌, ಗೆಸ್ಟ್‌ ಹೌಸ್‌, ಗ್ರಂಥಾಲಯದಲ್ಲಿ ಅಗತ್ಯವಿರುವ ಹಾಸಿಗೆ ಹಾಗೂ ವೈದ್ಯಕೀಯ ಸವಲತ್ತುಗಳನ್ನು ಅಳವಡಿಸ ಲಾಗುತ್ತಿದೆ. ಉಡುಪಿಯ ಡಾ| ಟಿ.ಎಂ.ಎ. ಪೈ ಆಸ್ಪತ್ರೆಯನ್ನು ಮತ್ತೆ ಕೋವಿಡ್‌ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಮಣಿಪಾಲ ಮಾಹೆ ಒಪ್ಪಿಗೆ ಸೂಚಿಸಿದೆ.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.