ಸರಕಾರದ ಅನುದಾನಕ್ಕೆ ಕಾಯುತ್ತಿರುವ ರಿಕ್ಷಾ ಚಾಲಕರು

Team Udayavani, May 1, 2021, 10:00 AM IST

ಸರಕಾರದ ಅನುದಾನಕ್ಕೆ ಕಾಯುತ್ತಿರುವ ರಿಕ್ಷಾ ಚಾಲಕರು

ಮುಂಬಯಿ: ಲಾಕ್‌ಡೌನ್‌ ಮತ್ತು ಸಂಬಂಧಿತ ನಿರ್ಬಂಧಗಳಿಂದ ಉಂಟಾಗುವ ಆರ್ಥಿಕ ನಷ್ಟವನ್ನು ಕಡಿಮೆ ಮಾಡಲು ರಾಜ್ಯದ ಚಾಲಕರಿಗೆ 1,500 ರೂ. ಗಳ ಅನುದಾನ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಅನುದಾನವನ್ನು ನೇರವಾಗಿ ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಮಹೈಟ್‌ (ಮಹಾರಾಷ್ಟ್ರ ಮಾಹಿತಿ ತಂತ್ರಜ್ಞಾನ) ಒಂದು ವ್ಯವಸ್ಥೆಯನ್ನು ಒಂದು ತಿಂಗಳೊಳಗೆ ಅಭಿವೃದ್ಧಿಪಡಿಸಲು ಮುಂದಾಗಿದ್ದು, ಬಳಿಕ ರಿಕ್ಷಾ ಚಾಲಕರಿಗೆ ಈ ಸಬ್ಸಿಡಿಯ ಲಾಭ ಸಿಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ 7 ಲಕ್ಷ 15 ಸಾವಿರ ರಿಕ್ಷಾ ಪರವಾನಿಗೆ ಪಡೆದವರಿಗೆ ತಲಾ 1,500 ರೂ. ಗಳಂತೆ ಒಟ್ಟು 107 ಕೋಟಿ ರೂ. ಗಳ ಅನುದಾನ ನೀಡಲು ನಿರ್ಧರಿಸಲಾಗಿದೆ. ಈ ಮೊತ್ತವನ್ನು ನೇರವಾಗಿ ಆನ್‌ಲೈನ್‌ನಲ್ಲಿ ಸಂಬಂಧಪಟ್ಟವರ ಬ್ಯಾಂಕ್‌ ಖಾತೆಗಳಲ್ಲಿ ಜಮಾ ಮಾಡಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ಅದಾಗ್ಯೂ ರಿûಾ ಎಳೆಯುವವರಿಗೆ ಸಬ್ಸಿಡಿ ಪಡೆಯಲು ಒಂದು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಆನ್‌ಲೈನ್‌ ವ್ಯವಸ್ಥೆ ಅಂದರೆ ಅನುದಾನ ಸಂಗ್ರಹಕ್ಕಾಗಿ ಸಾರಿಗೆ ಇಲಾಖೆಯಿಂದ ಪೋರ್ಟಲ್‌ ಅನ್ನು ಅಭಿವೃದ್ಧಿಪಡಿಸಲಾಗುತ್ತದೆ. ಪರವಾನಿಗೆ ಪಡೆದ ಆಟೋರಿûಾ ಚಾಲಕರು ತಮ್ಮ ಆಧಾರ್‌ ಸಂಖ್ಯೆ, ವಾಹನ ಸಂಖ್ಯೆ ಮತ್ತು ಪರವಾನಿಗೆ ಸಂಖ್ಯೆಯನ್ನು ದಾಖಲಿಸಬೇಕಾಗುತ್ತದೆ. ಇದನ್ನು ದೃಢಪಡಿಸಿದ ಬಳಿಕ ಅನುದಾನದ ಮೊತ್ತವನ್ನು ಆನ್‌ಲೈನ್‌ನಲ್ಲಿ ಆಧಾರ್‌ ಸಂಖ್ಯೆಗೆ ಲಿಂಕ್‌ ಮಾಡಲಾದ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ.

ಆನ್‌ಲೈನ್‌ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಾರಿಗೆ ಇಲಾಖೆ ಮಹೈಟ್‌ ಜತೆ ಸಭೆ ನಡೆಸಿದ್ದು, ಸಿಬಂದಿ ಕೊರತೆಯಿಂದಾಗಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಒಂದರಿಂದ ಎರಡು ತಿಂಗಳು ತೆಗೆದುಕೊಳ್ಳುತ್ತದೆ ಎಂದು ಎಂಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಆದಷ್ಟು  ಬೇಗ ಪೋರ್ಟಲ್‌ ಸ್ಥಾಪಿಸಬೇಕು ಎಂದು ಸಾರಿಗೆ ಆಯುಕ್ತ ಅವಿನಾಶ್‌ ಧಕೆ° ಆಗ್ರಹಿಸಿದ್ದಾರೆ.

ಈ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ www.transport.maharashtra.gov.in ನಲ್ಲಿ ಪ್ರಕಟಿಸಲಾಗುವುದು. ಎಲ್ಲ ರಿಕ್ಷಾ ಪರವಾನಿಗೆದಾರರು ತಮ್ಮ ಖಾತೆಯನ್ನು ಆಧಾರ್‌ ಸಂಖ್ಯೆಯೊಂದಿಗೆ ತತ್‌ಕ್ಷಣ ಲಿಂಕ್‌ ಮಾಡಬೇಕು ಎಂದು ಸಾರಿಗೆ ಇಲಾಖೆ ಮನವಿ ಮಾಡಿದೆ.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.