ಭಾರತ: ಮೊದಲ ಬಾರಿಗೆ ಕಳೆದ 24ಗಂಟೆಗಳಲ್ಲಿ 4ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ಪತ್ತೆ
ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವುದು ಕಳವಳಕ್ಕೆ ಎಡೆಮಾಡಿಕೊಟ್ಟಿದೆ ಎಂದು ವರದಿ ತಿಳಿಸಿದೆ.
Team Udayavani, May 1, 2021, 10:05 AM IST
ನವದೆಹಲಿ:ಭಾರತದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಎರಡನೇ ಅಲೆಯ ರೂಪಾಂತರಿ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಕಳೆದ 24ಗಂಟೆಗಳಲ್ಲಿ 4,01,993 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 3,523 ಸಾವು ಸಂಭವಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಈ ಮಗುವಿನ ನಡೆ ಎಷ್ಟು ನಿಸ್ವಾರ್ಥ ಅಲ್ವಾ : ತಾನು ನೆನೆದರೂ ನಾಯಿಯನ್ನು ನೆನೆಯಲು ಬಿಡುತ್ತಿಲ್ಲ
ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 1.91ಕೋಟಿಗೆ (1,91,64,969) ಏರಿಕೆಯಾಗಿದೆ. ಇದರಲ್ಲಿ 32,68,710 ಸಕ್ರಿಯ ಕೋವಿಡ್ ಪ್ರಕರಣಗಳು. ಈವರೆಗೆ ಕೋವಿಡ್ ನಿಂದ 2.11ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
India reports 4,01,993 new #COVID19 cases, 3523 deaths and 2,99,988 discharges in the last 24 hours, as per Union Health Ministry
Total cases: 1,91,64,969
Total recoveries: 1,56,84,406
Death toll: 2,11,853
Active cases: 32,68,710Total vaccination: 15,49,89,635 pic.twitter.com/S56SPyLZtq
— ANI (@ANI) May 1, 2021
ಹಲವಾರು ರಾಜ್ಯಗಳಲ್ಲಿ ಕೋವಿಡ್ ಲಸಿಕೆಯ ಕೊರತೆಯ ನಡುವೆಯೂ ಶನಿವಾರ(ಮೇ 1) ದೇಶಾದ್ಯಂತ ಮೂರನೇ ಹಂತದ ಲಸಿಕೆ ಅಭಿಯಾನ ನಡೆಯುತ್ತಿದ್ದು, ಮತ್ತೊಂದೆಡೆ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವುದು ಕಳವಳಕ್ಕೆ ಎಡೆಮಾಡಿಕೊಟ್ಟಿದೆ ಎಂದು ವರದಿ ತಿಳಿಸಿದೆ.
ಸತತ ಒಂಬತ್ತು ದಿನಗಳ ಕಾಲ 3ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದ್ದು, ಇದೀಗ ಮೊದಲ ಬಾರಿಗೆ ದಾಖಲೆಯ 4ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ.
ಇಂದಿನಿಂದ ಮೂರನೇ ಹಂತದಲ್ಲಿ 18ರಿಂದ 44 ವರ್ಷದವರಿಗೆ ಲಸಿಕೆ ವಿತರಣೆ ಆರಂಭ. ಆದರೆ ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಬಂಗಾಳ, ಕೇರಳ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಲಸಿಕೆ ಕೊರತೆ ಇದ್ದು, ಮೇ 1ರಿಂದ ಲಸಿಕೆ ಅಭಿಯಾನ ಇಲ್ಲ ಎಂದು ತಿಳಿಸಿದೆ.
ಕೋವಿಡ್ ಪ್ರಕರಣ ಹೆಚ್ಚಳ, ಆಕ್ಸಿಜನ್ ಕೊರತೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಚಿವರ ಜತೆ ಸಭೆ ನಡೆಸಿ, ರಾಜ್ಯಗಳ ಜತೆಗಿನ ಸಹಕಾರ, ಆಕ್ಸಿಜನ್ ಸರಬರಾಜು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.