“ಕೋವಿಡ್‌ ನಿಯಂತ್ರಣ: ಎಸ್‌ಡಿಆರ್‌ಎಫ್‌ ಅನುದಾನ ಬಳಸಿ”

Team Udayavani, May 2, 2021, 4:30 AM IST

covid control

ಬಂಟ್ವಾಳ: ಕೋವಿಡ್‌ ನಿಯಂತ್ರಣದ ದೃಷ್ಟಿಯಿಂದ ಸರಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಿಗೆ ಬೇಕಾಗಿರುವ ಎಲ್ಲ ಸೌಕರ್ಯಗಳನ್ನು ಎಸ್‌ಡಿಆರ್‌ಎಫ್‌ ಖಾತೆಯಲ್ಲಿರುವ ಅನುದಾನ ಬಳಕೆ ಮಾಡಿಕೊಂಡು ಒದಗಿಸುವ ಜತೆಗೆ ಎಲ್ಲ ಕೊರೊನಾ ರೋಗಿಗಳಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಕ್ರಮ ಕೈಗೊಳ್ಳುವಂತೆ ದ.ಕ.ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಹಶೀಲ್ದಾರ್‌ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ಬಿ.ಸಿ.ರೋಡ್‌ನ‌ಲ್ಲಿರುವ ತಾ.ಪಂ. ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ.ಸಂಸದ ನಳಿನ್‌ಕುಮಾರ್‌ ಕಟೀಲು ಅವರ ನೇತೃತ್ವದಲ್ಲಿ ನಡೆದ ತಾಲೂಕಿನ ಕೊರೊನಾ ನಿಯಂತ್ರಣದ ಕಾರ್ಯದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಬಂಟ್ವಾಳ ಸರಕಾರಿ ಆಸ್ಪತ್ರೆಗೆ ವಿವಿಧ ಸೌಲಭ್ಯಗಳು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜನರೇಟರ್‌ ವ್ಯವಸ್ಥೆ, ಕೋವಿಡ್‌ ಕೇರ್‌ ಸೆಂಟರ್‌ ಮೊದಲಾದ ವ್ಯವಸ್ಥೆಗಳಿಗೆ ತಗಲುವ ವೆಚ್ಚವನ್ನು ತಾಲೂಕಿನ ಎಸ್‌ಡಿಆರ್‌ಎಫ್‌ ಖಾತೆಯಲ್ಲಿರುವ 40 ಲಕ್ಷ ರೂ.ಗಳನ್ನು ಬಳಸಿಕೊಳ್ಳಿ. ಜತೆಗೆ ಕೋವಿಡ್‌ ನಿಯಂತ್ರಣಕ್ಕಾಗಿ ಜಿಲ್ಲೆಗೆ 15 ಕೋ.ರೂ.ಬಂದಿದ್ದು, ನೀವು ಸೌಕರ್ಯಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ನೀಡಿದರೆ ಅನು ಮೋದನೆ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

“ಟಾಸ್ಕ್ ಫೋರ್ಸ್‌ ಮಾಹಿತಿ ಇಲ್ಲ’
ಕಳೆದ ವರ್ಷ ಕೊರೊನಾ ನಿಯಂತ್ರಣದ ದೃಷ್ಟಿಯಿಂದ ತನ್ನ ನೇತೃತ್ವದಲ್ಲಿ ಬಂಟ್ವಾಳ ಕ್ಷೇತ್ರದ ಎಲ್ಲ 39 ಗ್ರಾ.ಪಂ.ಗಳಲ್ಲೂ ಸ್ಥಳೀಯ ಟಾಸ್ಕ್ಫೋರ್ಸ್‌ ಸಭೆಯನ್ನು ಮಾಡಲಾಗಿದೆ. ಆದರೆ ಈ ಬಾರಿ ಟಾಸ್ಕ್ಫೋರ್ಸ್‌ನಲ್ಲಿ ಬದಲಾವಣೆ ಮಾಡಿರುವ ಕುರಿತು ಮಾಹಿತಿಯೇ ಬಂದಿಲ್ಲ ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಸಭೆಯ ಗಮನಕ್ಕೆ ತಂದರು.
ಈ ವೇಳೆ ಜಿ.ಪಂ.ಸಿಇಒ ಡಾ| ಕುಮಾರ್‌ ಹಾಗೂ ಜಿಲ್ಲಾಧಿಕಾರಿಗಳು ತಾ.ಪಂ.ಇಒ ರಾಜಣ್ಣ ಅವರ ಬಳಿ ಸ್ಪಷ್ಟನೆ ಕೇಳಿದರು. ಮುಂದಿನ ದಿನಗಳಲ್ಲಿ ಶಾಸಕರ ನೇತೃತ್ವದಲ್ಲಿ ಗ್ರಾ.ಪಂ.ಮಟ್ಟದ ಟಾಸ್ಕ್ಪೋರ್ಸ್‌ಗಳ ಸಭೆ ನಡೆಸುವುದಾಗಿ ಇಒ ಅವರು ಭರವಸೆ ನೀಡಿದರು.

ಪುರಸಭಾಧ್ಯಕ್ಷ ಮಹಮ್ಮದ್‌ ಶರೀಫ್‌ ಅವರು ಕೂಡ ಕೊರೊನಾ ರೋಗಿಗಳ ಕುರಿತು ತಮಗೆ ಸಮರ್ಪಕ ಮಾಹಿತಿ ಬರುತ್ತಿಲ್ಲ ಎಂದು ತಿಳಿಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹೊಂದಾಣಿಕೆಯಿಂದ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಆಸಕ್ತಿಯಿಂದ ಕೆಲಸ ಮಾಡುವುದಾದರೆ ಮಾಡಿ: ನಳಿನ್‌ ಕುಮಾರ್‌ ಕಟೀಲು

ದ.ಕ. ಜಿ.ಪಂ. ಸಿಇಒ ಡಾ| ಕುಮಾರ್‌ ಮಾತನಾಡಿ, ಕೊರೊನಾ ಪಾಸಿಟಿವ್‌ ಪ್ರಕರಣಗಳು ಬಂದಾಗ 1:30 ಪ್ರಾಥಮಿಕ ಸಂಪರ್ಕದ ಟ್ರೇಸಿಂಗ್‌ ನಡೆಯಬೇಕಿದ್ದು, ಈ ವಿಚಾರದಲ್ಲಿ ಬೇರೆ ತಾಲೂಕುಗಳಿಗಿಂತ ಬಂಟ್ವಾಳ ಚೆನ್ನಾಗಿ ಕೆಲಸ ಮಾಡಿದೆ. ಆದರೆ ಕೆಲವೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಈ ಕಾರ್ಯದಲ್ಲಿ ಹಿಂದೆ ಬಿದ್ದಿದೆ. ಅಳಿಕೆ, ಮಂಚಿ, ಪುಣಚ, ಪುಂಜಾಲಕಟ್ಟೆ ಹಾಗೂ ಪಂಜಿಕಲ್ಲು ಆರೋಗ್ಯ ಕೇಂದ್ರಗಳ ಪ್ರತಿ ತೀರಾ ಕಡಿಮೆ ಇದೆ ಎಂದರು.

ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸಮರ್ಪಕ ಉತ್ತರ ನೀಡದೆ ಇದ್ದಾಗ ಅವರನ್ನು ತರಾಟೆಗೆ ತೆಗೆದುಕೊಂಡ ಸಂಸದ ನಳಿನ್‌ ಕುಮಾರ್‌ ಕಟೀಲು, ನೀವು ಆಸಕ್ತಿಯಿಂದ ಕೆಲಸ ಮಾಡಿ ಎಂದು ಎಚ್ಚರಿಕೆ ನೀಡಿದರು. ಡಾಟಾ ಎಂಟ್ರಿಯ ಕುರಿತು ಗ್ರಾ.ಪಂ. ಬಳಿ ಹೇಳಿದರೂ ಸ್ಪಂದನೆ ನೀಡಿಲ್ಲ. ಹೀಗಾಗಿ ಭೂಮಿ ತಂತ್ರಾಂಶ ಅಪ್‌ಲೋಡ್‌ ವಿಳಂಬವಾಗಿದೆ ಎಂದು ಪಂಜಿಕಲ್ಲು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ತಿಳಿಸಿದರು. ಆರೋಗ್ಯ ಕೇಂದ್ರಕ್ಕೆ ಡಾಟಾ ಎಂಟ್ರಿ ಆಪರೇಟರ್‌ ಇಲ್ಲದಿದ್ದರೆ ಗ್ರಾ.ಪಂ.ನಿಂದ ನೀಡುವಂತೆ ಪ್ರತೀ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ ಎಂದು ಡಾ| ಕುಮಾರ್‌ ತಿಳಿಸಿದರು.

ಬಂಟ್ವಾಳದಲ್ಲಿ 10 ವೆಂಟಿಲೇಟರ್‌ ಸೌಕರ್ಯ

ಜಿಲ್ಲೆಯ ಎಲ್ಲ ಭಾಗಗಳಿಂದಲೂ ವೆಂಟಿಲೇಟರ್‌ ಅಗತ್ಯವಿರುವ ಎಲ್ಲ ಕೋವಿಡ್‌ ರೋಗಿಗಳನ್ನು ವೆನಾÉಕ್‌ ಆಸ್ಪತ್ರೆಗೆ ತಂದಾಗ ಗುಣಮಟ್ಟದ ಸೇವೆ ನೀಡಲು ಕಷ್ಟವಾಗುವ ಜತೆಗೆ, ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವೂ ಇರುತ್ತದೆ. ಈ ನಿಟ್ಟಿನಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆ ಹಾಗೂ ತುಂಬೆ ಫಾದರ್‌ ಮುಲ್ಲರ್‌ ಆಸ್ಪತ್ರೆಗಳಲ್ಲಿ ತಲಾ ಐದೈದು ವೆಂಟಿಲೇಟರ್‌ ಬೆಡ್‌ ವ್ಯವಸ್ಥೆ ಮಾಡಿದರೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಭಾಗದ ರೋಗಿಗಳಿಗೂ ಇಲ್ಲೇ ಚಿಕಿತ್ಸೆ ನೀಡಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು. ಬಂಟ್ವಾಳದಲ್ಲಿರುವ 12 ಖಾಸಗಿ ಆ್ಯಂಬುಲೆನ್ಸ್‌ಗಳಿಗೆ ಬಂಟ್ವಾಳ ಎಆರ್‌ಟಿಒ ಮೂಲಕ ಜಿಪಿಎಸ್‌ ಅಳವಡಿಸುವ ಕಾರ್ಯ ಮಾಡಿ. ಅದನ್ನು ಸ್ಮಾರ್ಟ್‌ಸಿಟಿಯಿಂದ ಉಚಿತವಾಗಿ ಅಳವಡಿಸಲಾಗುತ್ತದೆ. ಈ ಆ್ಯಂಬುಲೆನ್ಸ್‌ಗಳನ್ನು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಬಳಸಿಕೊಳ್ಳಿ. ಯಾವುದೇ ರೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಮೃತದೇಹ ಸಾಗಾಟ, ಅಂತ್ಯಸಂಸ್ಕಾರ ಕಾರ್ಯವನ್ನು ಸರಕಾರದಿಂದಲೇ ಭರಿಸಲಾಗುತ್ತದೆ. ಇದರ ನಿರ್ವಹಣೆಗೆ ಪ್ರತ್ಯೇಕ ತಂಡ ರಚಿಸುವಂತೆ ಅವರು ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌.ಅವರಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.