ಕಾಳಸಂತೆ ಕೊನೆಗೊಳಿಸಿ
Team Udayavani, May 2, 2021, 7:00 AM IST
ಬೆಂಗಳೂರು: ರಾಜ್ಯಾದ್ಯಂತ ತೀವ್ರವಾಗಿರುವ ಕೊರೊನಾ ಹಾವಳಿಯ ದುರ್ಲಾಭ ಪಡೆಯಲು ಹೊಂಚುಹಾಕುತ್ತಿರುವ ದುಷ್ಕರ್ಮಿಗಳು ಸೋಂಕುಪೀಡಿತರ ಜೀವ ಉಳಿಸುವ ರೆಮಿಡಿಸಿವಿರ್, ಆಮ್ಲಜನಕ ಸಿಲಿಂಡರ್ ಮತ್ತು ಆಸ್ಪತ್ರೆಗಳ ಹಾಸಿಗೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹಲವು ದಿನಗಳಿಂದ ಇಂಥ ಪ್ರಕರಣಗಳು ವರದಿಯಾಗುತ್ತಿದ್ದು, ಜನರು ದುಷ್ಕರ್ಮಿಗಳು ಒಡ್ಡುವ ಆಮಿಷಕ್ಕೆ ಬಲಿಯಾಗುತ್ತಿದ್ದಾರೆ. ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 50ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು 26 ಪ್ರಕರಣಗಳು ದಾಖಲಾಗಿವೆ. ವಿವಿಧ ಜಿಲ್ಲೆಗಳ ಸರಕಾರಿ- ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್‌ಗಳ ಮೇಲೆ ನಿಗಾ ಇರಿಸಲಾಗಿದೆ. ಜಿಲ್ಲಾ, ತಾಲೂಕು ಆರೋಗ್ಯಾಧಿಕಾರಿಗಳ ಜತೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಲಬುರಗಿ: ಮೂವರ ಬಂಧನ
ಕಲಬುರಗಿಯಲ್ಲಿ ಖಾಸಗಿ ಸ್ಟಾಫ್ ನರ್ಸ್, ಎಕ್ಸರೇ ಟೆಕ್ನಿಶಿಯನ್ ಮತ್ತು ಮೆಡಿಕಲ್ ಶಾಪ್ ಉದ್ಯೋಗಿ ಸಹಿತ ಮೂವರು ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿ ಜೈಲು ಸೇರಿದ್ದಾರೆ. ಈ ಇಂಜೆಕ್ಷನ್‌ಗಳನ್ನು 20ರಿಂದ 25 ಸಾವಿರ ರೂ.ಗಳಿಗೆ ಮಾರಾಟ ಮಾಡುವಾಗಲೇ ಪೊಲೀಸರು ಸೆರೆ ಹಿಡಿದಿದ್ದಾರೆ.
30 ಸಾವಿರ ರೂ. ಬೆಲೆ!
ಬೆಳಗಾವಿ ಜಿಲ್ಲೆಯಲ್ಲಿ 15 ದಿನಗಳ ಹಿಂದೆ ರೆಮಿಡಿಸಿವಿರ್ ಚುಚ್ಚುಮದ್ದು 25-30 ಸಾವಿರ ರೂ.ವರೆಗೆ ಕಾಳಸಂತೆಯಲ್ಲಿ ಮಾರಾಟವಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ವಿಜಯಪುರದಲ್ಲಿ ಐವರ ಬಂಧನ
ವಿಜಯಪುರದಲ್ಲಿ ರೆಮಿಡಿಸಿವಿರ್ ಕಾಳಸಂತೆ ಮಾರಾಟಕ್ಕಾಗಿ ಐವರನ್ನು ಬಂಧಿಸಿದ್ದು, ಡಿಎಚ್‌ಒ ಡಾ| ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.
ದಾವಣಗೆರೆಯಲ್ಲಿ ಇಬ್ಬರ ಬಂಧನ
ದಾವಣಗೆರೆಯಲ್ಲಿ ಜಿಲ್ಲಾ ಚಿಗಟೇರಿ ಆಸ್ಪತ್ರೆ ಫಾರ್ಮಸಿಸ್ಟ್ ಜಿ. ಮಂಜುನಾಥ ರಾವ್ ಮತ್ತು ದಿನಗೂಲಿ ನೌಕರ ಗಣೇಶ್ ಎಂಬವರನ್ನು ಬಂಧಿಸಲಾಗಿದೆ. ಜಿಲ್ಲಾಸ್ಪತ್ರೆ ಹಿಂಭಾಗ ಆಟೋದಲ್ಲಿ ರೆಮಿಡಿಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ವೇಳೆ ಗಣೇಶ್‌ನನ್ನು ಬಂಧಿಸಕೊಳ್ಳಲಾಗಿತ್ತು. ಆತ ನೀಡಿದ ಸುಳಿವಿನ ಮೇರೆಗೆ ಮಂಜುನಾಥ ರಾವ್‌ನನ್ನು ಬಂಧಿಸಲಾಗಿತ್ತು.
ಹೇಗಿದೆ ದಂಧೆ ?
ರೆಮಿಡಿಸಿವಿರ್ ಔಷಧ ಉತ್ಪಾದಿಸುವ ಕಂಪೆನಿಗಳು ಮತ್ತು ಸಗಟು ವ್ಯಾಪಾರಿಗಳು ಈ ಮಾಫಿಯಾದಲ್ಲಿ ತೊಡಗಿವೆ. ಮೂರನೇ ವ್ಯಕ್ತಿ ಮತ್ತು ಸಂಸ್ಥೆಯ ಮೂಲಕ ಔಷಧ ಮಳಿಗೆಗಳಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಲಾಗುತ್ತಿದೆ. ಇದಲ್ಲದೆ, ಸ್ವಯಂಸೇವಕರ ಹೆಸರಿನಲ್ಲಿ ಕೆಲವರು ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಆಮ್ಲಜನಕದ ಸಿಲಿಂಡರ್ ಕೊಡಿಸುವುದಾಗಿ ಮೋಸ ಮಾಡುತ್ತಿದ್ದಾರೆ. ಇವರ ಮೋಸಕ್ಕೆ ವಾಟ್ಸ್‌ಆ್ಯಪ್ ಗ್ರೂಪ್‌ಗಳು ವೇದಿಕೆಯಾಗುತ್ತಿವೆ. ಕೆಲವು ಸ್ವಯಂಸೇವಕರು ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿಕೊಂಡು ನೊಂದವರಿಗೆ ಸಹಾಯ ಮಾಡುತ್ತಿದ್ದಾರೆ. ಇದರಲ್ಲಿ ನುಸುಳುವ ವಂಚಕರು ಹಾಸಿಗೆ, ಆಮ್ಲಜನಕ ಕೊಡಿಸುವುದಾಗಿ ಹೇಳಿ ಮುಂಗಡ ಹಣ ವಸೂಲಿ ಮಾಡುತ್ತಿದ್ದಾರೆ.
3,7504,000 ರೆಮಿಡಿಸಿವಿರ್ ದರ ನಿಗದಿ
ಸರಕಾರವು ರೆಮಿಡಿಸಿವಿರ್ ಉತ್ಪಾದಿಸುವ ಕಂಪೆನಿಗಳ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, 3,750-4,000 ರೂ. ಬೆಲೆಯಲ್ಲಿ ವಿತರಿಸುವಂತೆ ಸೂಚಿಸಿದೆ. ಅದಕ್ಕಿಂತ ಹೆಚ್ಚಿನ ಬೆಲೆ ನಿಗದಿ ಪಡಿಸುವಂತಿಲ್ಲ. ಒಂದು ವೇಳೆ ಹೆಚ್ಚುವರಿ ಬೆಲೆ ಪಡೆದರೆ ಕಾನೂನು ಕ್ರಮದ ಜತೆಗೆ ಒಡಂಬಡಿಕೆ ರದ್ದುಪಡಿಸುವ ಎಚ್ಚರಿಕೆ ನೀಡಿದೆ. ಮೆಡಿಕಲ್ ಸ್ಟೋರ್‌ಗಳಲ್ಲಿ ರೆಮಿಡಿಸಿವಿರ್ ಮಾರಾಟಕ್ಕೆ ಅವಕಾಶವಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ ಕಾಳಸಂತೆಯಲ್ಲಿ 20,000 ರೂ.ಗಳಿಗೆ ಮಾರಾಟವಾಗುತ್ತಿರುವುದು ವರದಿಯಾಗಿದೆ.
ಯಾಕೆ ಈ ಸಮಸ್ಯೆ?
ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಹಾಸಿಗೆ ಬೇಡಿಕೆ ಮತ್ತು ಬೆಲೆ ಹೆಚ್ಚಾಗಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಹಾಸಿಗೆಗಳು ಲಭ್ಯವಾಗದಿರುವುದು ಬೆಡ್ ಬ್ಲಾಕಿಂಗ್ ದಂಧೆಗೆ ದಾರಿ ಮಾಡಿಕೊಟ್ಟಿವೆ. ಸೋಂಕು ಹೆಚ್ಚಿರುವ ಬೆಂಗಳೂರಿನಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ಅನಿವಾರ್ಯವಾಗಿ ಖಾಸಗಿಯ ಮೊರೆಹೋಗಿ ಲಕ್ಷಾಂತರ ರೂ. ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ.
ಖಾಸಗಿಯಲ್ಲಿ ಕಾದಿರಿಸುವಿಕೆ
ಬಹುತೇಕ ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳು ಸರಕಾರಕ್ಕೆ ಶೇ. 50ರಷ್ಟು ಹಾಸಿಗೆ ನೀಡಿಲ್ಲ. ನೇರವಾಗಿ ಅಥವಾ ಪರಿಚಯಸ್ಥರು, ಪ್ರಭಾವಿಗಳ ಮೂಲಕ ಕೇಳಿದರೆ ಸರಕಾರಕ್ಕೆ ನೀಡದೆ ಖಾಲಿ ಇರುವ ಹಾಸಿಗೆಗಳನ್ನು ಆಸ್ಪತ್ರೆ ವೈದ್ಯರು, ಸಿಬಂದಿಯೇ ಹೆಚ್ಚಿನ ದರಕ್ಕೆ ನೀಡುತ್ತಿದ್ದಾರೆ.
ಕೊರೊನಾಹೆಸರಿನಲ್ಲಿ ನಡೆಯು ತ್ತಿರುವ ಅಕ್ರಮ ವ್ಯವಹಾರ ಸಂಬಂಧ ಈಗಾಗಲೇ ಬೆಂಗಳೂರು ಸಹಿತ ರಾಜ್ಯದ ಎಲ್ಲೆಡೆ ಕಾರ್ಯಾಚರಣೆಗೆ ಸೂಚಿಸಲಾಗಿದೆ.
-ಪ್ರತಾಪ್ ರೆಡ್ಡಿ, ಎಡಿಜಿಪಿ, ರಾಜ್ಯ ಕಾನೂನು ಸುವ್ಯವಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.