ಸಿಲಿಂಡರ್ ಕೈಗಾರಿಕೆಗಿಲ್ಲ
Team Udayavani, May 2, 2021, 6:38 PM IST
ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕುತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿಆಸ್ಪತ್ರೆಗಳಲ್ಲಿ ಆಮ್ಲಜನಕ ಬಳಕೆ ಹೆಚ್ಚುತ್ತಿದೆ.ಅದಕ್ಕನುಗುಣವಾಗಿ ಯಾವುದೇವ್ಯತ್ಯಯವಾಗದಂತೆ ಅನಿಲ ಸಿಲಿಂಡರ್‌ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶುಕ್ರವಾರ ನಡೆದ ಜಿಲ್ಲೆಯ ಆಮ್ಲಜನಕಉತ್ಪಾದಕರು ಹಾಗೂ ಪೂರೈಕೆದಾರರುಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಆರೋಗ್ಯ ತುರ್ತುಪರಿಸ್ಥಿತಿಯಾಗಿದೆ.ಯಾವುದೇ ಕಾರಣಕ್ಕೂಕೈಗಾರಿಕಾ ಉದ್ದೇಶಕ್ಕೆ ಆಮ್ಲಜನಕ ಸಿಲಿಂಡರ್‌ಪೂರೈಸದೆ ಕೇವಲ ವೈದ್ಯಕೀಯ ಉದ್ದೇಶದಬಳಕೆಗೆ ಸರಬರಾಜು ಮಾಡಬೇಕು ಎಂದುನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರುಹೆಚ್ಚುತ್ತಿರುವುದರಿಂದ ಕೊರೊನಾ ಕೇರ್‌ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿಯೂಆಮ್ಲಜನಕ ಪೂರೈಕೆಯುಕ್ತ ಚಿಕಿತ್ಸೆಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ. ಹಾಗಾಗಿ ಕೊರತೆಅಥವಾ ವ್ಯತ್ಯಯವಾಗದಂತೆ ಆಮ್ಲಜನಕಸಿಲಿಂಡರ್‌ಗಳ ಪೂರೈಸುವಂತೆ ಸರಬರಾಜುದಾರರಿಗೆ ಸೂಚಿಸಿದರು.
ಹಾಸನದಲ್ಲಿ ಉತ್ಪಾದನೆಯಾಗುವಆಮ್ಲಜನಕವನ್ನು ಜಿಲ್ಲೆಯ ಬಳಕೆಗೆ ಮೊದಲುಪೂರೈಸಿದ ನಂತರವಷ್ಟೇ ಇತರ ಜಿಲ್ಲೆಗಳಿಗೆಕೇವಲ ವೈದ್ಯಕೀಯ ಬಳಕೆಗೆ ಒದಗಿಸಬೇಕು.ಇದನ್ನು ಸಹಾಯಕ ಔಷಧ ನಿಯಂತ್ರಣಾಧಿಕಾರಿ ಹಾಗೂ ಕೈಗಾರಿಕಾ ಇಲಾಖೆ ಜಂಟಿನಿರ್ದೇಶಕರು ನಿಯಂತ್ರಿಸಬೇಕು ಎಂದುಜಿಲ್ಲಾಧಿಕಾರಿ ಸೂಚನೆ ನೀಡಿದರು.
ಕೊರೊನಾ ಕೇರ್ ಕೇಂದ್ರ ಹಾಗೂತಾಲೂಕು ಆಸ್ಪತ್ರೆಗಳ ಬಳಕೆಗೆ 150 ಸಿಲಿಂಡರ್‌ಅಗತ್ಯವಿದ್ದು ಅದನ್ನು ಪಡೆದುಕೊಳ್ಳಲಾ ಗುವುದು ಎಂದು ಉತ್ಪಾದಕರು ಹಾಗೂ ಪೂರೈಕೆದಾರ ಸಂಸ್ಥೆಗಳಿಗೆ ಮನವರಿಕೆ ಮಾಡಿಕೊಟ್ಟಜಿಲ್ಲಾಧಿಕಾರಿಯವರು ಕೈಗಾರಿಕಾ ಉದ್ದೇಶಕ್ಕೆನೀಡಲಾಗಿರುವ ಸಿಲಿಂಡರ್ ವಶಕ್ಕೆ ತೆಗೆದುಕೊಳ್ಳಲು ಆದೇಶ ಹೊರಡಿಸಲಾಗುವುದು.ಅವುಗಳನ್ನು ವೈದ್ಯಕೀಯ ಉದ್ದೇಶಕ್ಕೆಬಳಸಬಹುದಾಗಿದೆ ಎಂದರು.
ಆಮ್ಲಜನಕ ಸಿಲಿಂಡರ್‌ಗಳನ್ನು ಯಾವುದೇವೈಯಕ್ತಿಕ ಬಳಕೆಗೆ ನೀಡುವಂತಿಲ್ಲ. ಹಾಗೆನೀಡದಲ್ಲಿ ಅಥವಾ ಸಂಗ್ರಸಿಕೊಂಡಲ್ಲಿಪ್ರಕರಣ ದಾಖಲಿಸಲಾಗುವುದು ಎಂದುಜಿಲ್ಲಾಧಿಕಾರಿ ಆರ್.ಗಿರೀಶ್ ಎಚ್ಚರಿಸಿದರು.ಸಭೆಯಲ್ಲಿ ಹಾಜರಿದ್ದ ಅನಿಲ ಪೂರೈಕೆಸಂಸ್ಥೆ ಪ್ರತಿನಿಧಿಗಳು ಜಿಲ್ಲಾಡಳಿತದೊಂದಿಗೆಸಂಪೂರ್ಣ ಸಹಕಾರ ನೀಡುವುದಾಗಿ ಎಂದುಭರವಸೆ ನೀಡಿದರು.ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ,ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್,ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್,ಸಹಾಯಕ ಔಷಧಿ ನಿಯಂತ್ರಕ ಡಾ.ಗಿರೀಶ್‌ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.