ಜಿಪಂ-ತಾಪಂ ಮೀಸಲು ಪ್ರಕಟ
ಕುತೂಹಲ ಕೆರಳಿಸಿದ ಚುನಾವಣಾ ಆಯೋಗದ ನಡೆ !ಸದ್ಯ ಚುನಾವಣೆ ಅನುಮಾನ
Team Udayavani, May 2, 2021, 7:36 PM IST
ಹಾವೇರಿ: ಕೊರೊನಾ ಎರಡನೇ ಅಲೆ ನಡುವೆಯೇ ಜಿಪಂ, ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ತಯಾರಿ ನಡೆಸಿರುವ ರಾಜ್ಯ ಚುನಾವಣಾ ಆಯೋಗ, ಜಿಲ್ಲೆಯ ಜಿಪಂ-ತಾಪಂ ಕ್ಷೇತ್ರಗಳ ವರ್ಗವಾರು ಮೀಸಲಾತಿ ಕೋಷ್ಠಕ ಪ್ರಕಟಿಸಿದೆ.
ಕಳೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ 34 ಸ್ಥಾನಗಳು ಇದ್ದವು. ಈ ಸಾರಿ ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರ ವಿಂಗಡಿಸಿ 38ಕ್ಷೇತ್ರಗಳನ್ನು ನಿಗದಿಪಡಿಸಲಾಗಿದೆ. ಸದ್ಯ ಚುನಾವಣಾ ಆಯೋಗ ಹೊರಡಿಸಿರುವ ವರ್ಗವಾರು ಮೀಸಲಾತಿ ಕೋಷ್ಠಕದನ್ವಯ ಒಟ್ಟು 38ಕ್ಷೇತ್ರಗಳ ಪೈಕಿ 19 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಅನುಸೂಚಿತ ಜಾತಿಗೆ 6ಸ್ಥಾನಗಳಿದ್ದು, ಅದರಲ್ಲಿ 3ಮಹಿಳೆಯರಿಗೆ, ಅನುಸೂಚಿತ ಪಂಗಡದಲ್ಲಿ ಮೀಸಲಿರುವ 4ಸ್ಥಾನಗಳ ಪೈಕಿ 2 ಮಹಿಳೆಯರಿಗೆ, ಹಿಂದುಳಿದ ಅ ವರ್ಗಕ್ಕೆ ಮೀಸಲಿಟ್ಟಿರುವ 7ಸ್ಥಾನಗಳಲ್ಲಿ 4 ಮಹಿಳೆಯರಿಗೆ ಮೀಸಲಾಗಿವೆ.
ಹಿಂದುಳಿದ ಬ ವರ್ಗಕ್ಕೆ ಮೀಸಲಾಗಿರುವ ಎರಡು ಸ್ಥಾನಗಳಲ್ಲಿ ಒಂದು ಮಹಿಳೆಯರ ಪಾಲಾಗಿದೆ. ಒಟ್ಟು 19ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಿದ್ದು, ಅದರಲ್ಲಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಿಡಲ್ಪಟ್ಟಿವೆ.
4 ನೂತನ ಜಿಪಂ ಕ್ಷೇತ್ರಗಳ ರಚನೆ:
ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು ಹಾಗೂ ಹಾನಗಲ್ಲ ತಾಲೂಕುಗಳಲ್ಲಿ ತಲಾ ಒಂದು ಜಿಪಂ ಕ್ಷೇತ್ರಗಳನ್ನು ಹೆಚ್ಚಿಸಿ ಆಯೋಗ ಅಧಿ ಸೂಚನೆ ಹೊರಡಿಸಿದೆ. ಹಾವೇರಿ ತಾಲೂಕಿನ ಕರ್ಜಗಿ, ಹಾನಗಲ್ಲ ತಾಲೂಕಿನ ಕುಸನೂರು, ರಾಣಿಬೆನ್ನೂರು ತಾಲೂಕಿನ ಕೋಡಿಯಾಲ, ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಹೊಸದಾಗಿ ಜಿಪಂ ಕ್ಷೇತ್ರಗಳು ರಚನೆಯಾಗಿವೆ.
ಮತದಾರರ ಪಟ್ಟಿ ಪ್ರಕಟವೂ ವಿಳಂಬ:
ಜಿಪಂ, ತಾಪಂ ಚುನಾವಣೆಗೆ ಸಂಬಂಧಿ ಸಿದ ಮತದಾರರ ಪಟ್ಟಿಯನ್ನು ಏ.30ರಂದು ಪ್ರಕಟಿಸಲು ಚುನಾವಣಾ ಆಯೋಗ ಜಿಲ್ಲಾ ಧಿಕಾರಿಗಳಿಗೆ ಸೂಚನೆ ನೀಡಿತ್ತು. ಆದರೆ, ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಘೋಷಣೆಯಾಗಿರುವುದರಿಂದ ಮತದಾರರ ಪಟ್ಟಿಯ ಮುದ್ರಣಕ್ಕೆ, ಇತರೆ ಸರಬರಾಜಿಗೆ ಹಾಗೂ ಇತರೆ ಕಾರ್ಯಗಳಿಗೆ ಅಡ್ಡಿಯಾಗಿದೆ. ಇದರಿಂದ ಏ.30ರಂದು ಪ್ರಕಟಿಸಬೇಕಿದ್ದ ಅಂತಿಮ ಮತದಾರರ ಪಟ್ಟಿಯನ್ನು ಮೇ 15ಕ್ಕೆ ಮುಂದೂಡಲಾಗಿದೆ ಎಂದು ಆಯೋಗದ ಅ ಧೀನ ಕಾರ್ಯದರ್ಶಿಗಳು ಜಿಲ್ಲಾ ಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಸದ್ಯಕ್ಕೆ ಚುನಾವಣೆ ಅನುಮಾನ:
ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಚುನಾವಣೆ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಸಾಧ್ಯವಾಗಲ್ಲ. ಆದರಿಂದ ಮೇ-ಜೂನ್‌ನಲ್ಲಿ ನಡೆಯಬೇಕಿದ್ದ ಜಿಪಂ-ತಾಪಂ ಚುನಾವಣೆಯನ್ನು ಮುಂದೂಡುವ ಅನಿವಾರ್ಯತೆ ಇದೆ. ಹೀಗಾಗಿ, ಮುಂದಿನ 6ತಿಂಗಳ ಅವಧಿ ಗೆ ಮುಂದೂಡುವ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಸದ್ಯ ಚುನಾವಣೆ ನಡೆಯುವುದು ಅನುಮಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.