ಕೋವಿಡ್ ನಿಂದ ಉತ್ತರಪ್ರದೇಶ ಬಿಜೆಪಿ ವಕ್ತಾರ ಡಾ.ಮನೋಜ್ ಮಿಶ್ರಾ ನಿಧನ
ಮಿಶ್ರಾ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವುದಾಗಿ ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Team Udayavani, May 3, 2021, 11:25 AM IST
ಲಕ್ನೋ: ಉತ್ತರಪ್ರದೇಶದ ಭಾರತೀಯ ಜನತಾ ಪಕ್ಷದ ವಕ್ತಾರ ಡಾ.ಮನೋಜ್ ಮಿಶ್ರಾ ಸೋಮವಾರ(ಮೇ 03) ಕೋವಿಡ್ ಸೋಂಕಿನಿಂದ ನಿಧನರಾಗಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಇಂತಹ ಹಲವು ಸೋಲನ್ನು ನೋಡಿದ್ದೇನೆ: ಚುನಾವಣಾ ಸೋಲಿನ ಬಳಿಕ ಅಣ್ಣಾಮಲೈ ಪ್ರತಿಕ್ರಿಯೆ
ಮಿಶ್ರಾ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟ ನಂತರ ಅವರನ್ನು ಕಾನ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ. ಮಿಶ್ರಾ ಅವರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಹಿರಿಯ ವಕ್ತಾರ ಡಾ.ಮನೋಜ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವುದಾಗಿ ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಕ್ಷಿಪ್ರವಾಗಿ ಹರಡುತ್ತಿದ್ದು, ಕಳೆದ 24ಗಂಟೆಯಲ್ಲಿ 3,68,147 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.