ಸಿಎಂ ಯಡಿಯೂರಪ್ಪ, ಸಚಿವ ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ
Team Udayavani, May 3, 2021, 3:43 PM IST
ಬೆಂಗಳೂರು: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನರು ಸಾವನ್ನಪ್ಪಿದ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಕೂಡಲೇ ನೈತಿಕ ಹೊಣೆ ಹೊತ್ತು ಸಿಎಂ ಯಡಿಯೂರಪ್ಪ ಮತ್ತು ಸಚಿವ ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಇದನ್ನೂ ಓದಿ:ಚಾಮರಾಜನಗರ ದುರಂತ: ಸರ್ಕಾರದ ಮುಖ್ಯಕಾರ್ಯದರ್ಶಿಯನ್ನು ಭೇಟಿಯಾಗಲಿದೆ ಕಾಂಗ್ರೆಸ್ ನಿಯೋಗ
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದು ಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಇದನ್ನೂ ಓದಿ: ಚಾಮರಾಜನಗರ ದುರಂತ: ಮಧ್ಯರಾತ್ರಿ ಮನೆಗೆ ಹೋಗಿ ಕರೆದರೂ ಆಸ್ಪತ್ರೆಗೆ ಬರಲಿಲ್ಲ ಡಿಸಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.