ಬಿಜೆಪಿಗೆ ಬುದ್ಧಿ ಕಲಿಸುವ ಸಂದೇಶ
Team Udayavani, May 3, 2021, 8:31 PM IST
ಗದಗ: ಕೊರೊನಾದಂತಹ ಸಂದರ್ಭದಲ್ಲಿ ಬಿಜೆಪಿ ದುರಾಡಳಿತದಿಂದ ಜನರು ರೋಸಿ ಹೋಗಿದ್ದು, ಭ್ರಷ್ಟಾಚಾರ, ಜನರ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿಫಲವಾಗಿವೆ. ರವಿವಾರ ಪ್ರಕಟವಾದ ಐದು ರಾಜ್ಯಗಳು ಮತ್ತು ಕರ್ನಾಟಕದ ಉಪಚುನಾವಣಾ ಫಲಿತಾಂಶಗಳ ಮೂಲಕ ರಾಜ್ಯದ ಜನರು ಬಿಜೆಪಿಗೆ ಬುದ್ಧಿ ಕಲಿಸುವ ಸಂದೇಶ ರವಾನಿಸಿದ್ದಾರೆ.
ಜತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಆರಂಭವಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ ಹೇಳಿದರು. ನಗರದಲ್ಲಿ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 30 ಸಾವಿರ ಮತಗಳ ಅಂತರದಿಂದ ಜಯಭೇರಿ ಬಾರಿಸಿದೆ. ಜತೆಗೆ ಬೆಳಗಾವಿಯಲ್ಲಿ ಕೊನೆವರೆಗೂ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್ ಗೆ ಕೊನೆ ಗಳಿಗೆಯಲ್ಲಿ ಸೋಲಾಗಿದೆ. ಆದರೆ, ಕಳೆದ ಚುನಾವಣೆಯಲ್ಲಿ ಮೂರು ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಬಿಜೆಪಿ ಈಗ ಯಾವ ಸ್ಥಿತಿಗೆ ಇಳಿದಿದೆ. ರಾಜ್ಯದಲ್ಲಿ ಯಡಿಯೂರಪ್ಪ ಅವರ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ.
ಬಂಗಾಳದ ವಿಮೋಚನೆಯಲ್ಲಿ ನಾನೂ ಪಾಲುದಾರನೆಂಬ ಮೋದಿ ಅವರ ಸುಳ್ಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದರು. ಚುನಾವಣಾ ಆಯೋಗದ ದುರುಪಯೋಗ, ಜನರಿಗೆ ಮಾಡಿದ ಮೋಸ, ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಆ ಸುಳ್ಳಿಗೆ ಪ್ರತಿಯಾಗಿ ಪಶ್ಚಿಮ ಬಂಗಾಳದ ಮಹಾಜನತೆ ಸರಿಯಾದ ಉತ್ತರ ನೀಡಿದ್ದಾರೆಂದು ಲೇವಡಿ ಮಾಡಿದರು. ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಚುನಾವಣೆಯ ಎಲ್ಲಾ ಪಾವಿತ್ರ್ಯವನ್ನು ಕಳೆದಿದೆ.
ಈ ಎಲ್ಲಾ ದುರುಪಯೋಗಗಳ ಮಧ್ಯೆಯೂ ಬಿಜೆಪಿ ಮೂರಂಕಿ ದಾಟಿಲ್ಲ. ಆ ರೀತಿಯ ಜನವಿರೋಧಿ ನೀತಿಗೆ ಪ್ರಜ್ಞಾವಂತ ಮತದಾರರು ತಕ್ಕ ಬುದ್ಧಿ ಕಲಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.