ಕೋವಿಡ್ ಸೋಂಕಿಗೆ ಒಂದೇ ಕುಟುಂಬದ ಮೂವರು ಬಲಿ
Team Udayavani, May 4, 2021, 6:38 PM IST
ಬೆಳಗಾವಿ: ಕೊರೊನಾ ಸೋಂಕಿಗೆ ಒಳಗಾದ ಒಂದೇ ಕುಟುಂಬದ ಮೂವರು ಎಂಟು ದಿನಗಳ ಅಂತರದಲ್ಲಿ ಸಾವಿಗೀಡಾದ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ನಡೆದಿದೆ.
ಮಧುಮೇಹ, ಅಧಿಕ ರಕ್ತದೊತ್ತಡ ಸಮಸ್ಯೆ ಹೊಂದಿದ್ದ 76 ವರ್ಷದ ಮಹಿಳೆ ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದರು. ಬಳಿಕ 82 ವರ್ಷದ ಪತಿ ನಿಧನರಾದರು. ನಂತರ ಮಗ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಕುಟುಂಬಕ್ಕೆ ಸೋಂಕು ತಗುಲಿತ್ತು.
ಏ.25ರಂದು ತಾಯಿ, ಏ.29ರಂದು ತಂದೆ ಹಾಗೂ ಮೇ 2ರಂದು ಮಗ ಮೃತಪಟ್ಟಿದ್ದಾರೆ. ತಂದೆ ಸಾವಿನ ಬಳಿಕ ಪರೀಕ್ಷೆ ಮಾಡಿಸಿದಾಗ ಪುತ್ರನಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ತಂದೆಯ ರಕ್ಷಾ ವಿಸರ್ಜನೆ ಕಾರ್ಯಕ್ರಮವನ್ನು ಕುಟುಂಬದವರು ನೆರವೇರಿಸುತ್ತಿದ್ದ ಸಂದರ್ಭದಲ್ಲೇ ಮಗನ ಸಾವಿನ ಸುದ್ದಿ ಬಂದಿದೆ. ತಂದೆಯ ರಕ್ಷಾ ವಿಸರ್ಜನೆಯಾದ ಕೆಲವೇ ಗಂಟೆಗಳಲ್ಲಿ ಮಗನ ಅಂತ್ಯಸಂಸ್ಕಾರ ನೆರವೇರಿದೆ. ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 559 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 33958 ಮಂದಿಗೆ ಸೋಂಕು ತಗುಲಿದಂತಾಗಿದೆ. ಒಂದೇ ದಿನ 214 ಜನರು ಗುಣಮುಖರಾಗಿದ್ದಾರೆ. 3715 ಸಕ್ರಿಯ ಪ್ರಕರಣಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.