ಉದ್ಯೋಗ ನುಂಗಿದ ಕೋವಿಡ್ ! ಪದವೀಧರನ ಬದುಕಿಗೆ ಖಾತ್ರಿ ಆಸರೆ
ತುತ್ತಿನ ಚೀಲ ತುಂಬಿಸಿಕೊಳ್ಳಲು ನೆರವಾದ ನರೇಗಾ!
Team Udayavani, May 4, 2021, 10:30 PM IST
ಗಜೇಂದ್ರಗಡ: ಕೋವಿಡ್ ಆರ್ಭಟಕ್ಕೆ ಇಡೀ ದೇಶವೇ ನಲುಗಿದೆ. ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ಕರ್ಫ್ಯೂ ಜಾರಿಗೊಳಿಸಿದ್ದರಿಂದ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಆಗಮಿಸಿದ ಪದವೀಧರನ ಬದುಕಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೆಲಸ ಆಸರೆಯಾಗಿದೆ.
ದಿಂಡೂರು ಗ್ರಾಮದ ನಿವಾಸಿ ದುರ್ಗಪ್ಪ ಮಾದರ, ಪದವಿ ಮುಗಿಸಿ ಬೆಂಗಳೂರಿನ ಮಹಾಬೆಲ್ ಇಂಡಸ್ಟ್ರೀಸ್ ಎಲ್‌ಇಡಿ ಕಂಪನಿಯಲ್ಲಿ ಕಳೆದ 8 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಆದರೀಗ ಬೆಂಗಳೂರಿನಲ್ಲಿ ಕೊರೊನಾ ಹೊಡೆತಕ್ಕೆ ಕೆಲಸ ಮಾಡುತ್ತಿದ್ದ ಕಂಪನಿ ಬಾಗಿಲು ಮುಚ್ಚಿದೆ.
ಕೋವಿಡ್ ಆರ್ಭಟಕ್ಕೆ ಹಲವಾರು ನೌಕರರು ಕೆಲಸ ಕಳೆದುಕೊಂಡಿದ್ದಾರೆ. ಅವರ ಸಾಲಿನಲ್ಲಿ ದುರ್ಗಪ್ಪ ಸಹ ಒಬ್ಬರು. ಉದ್ಯೋಗ ಇಲ್ಲದೇ ಸಂಕಷ್ಟದ ಬದುಕು ಸಾಗಿಸುತ್ತಿದ್ದ ದುರ್ಗಪ್ಪ ಬೆಂಗಳೂರು ತೊರೆದು, ಸ್ವಗ್ರಾಮಕ್ಕೆ ಮರಳಿದ್ದರು. ಗ್ರಾಮಕ್ಕೆ ಬಂದ ನಂತರ ಯಾವೊಂದು ಕೆಲಸವಿಲ್ಲದೇ, ನಿರುದ್ಯೋಗದ ಸಮಸ್ಯೆ ಕಾಡತೊಡಗಿತು. ತುತ್ತಿನ ಚೀಲ ತುಂಬಿಸಿಕೊಳ್ಳಲು ಪದವಿಯ ಹಂಗಿಲ್ಲದೇ ರಾಜೂರು ಗ್ರಾಪಂ ವತಿಯಿಂದ ನಡೆಯುತ್ತಿದ್ದ ನರೇಗಾ ಅಡಿಯಲ್ಲಿ ಹೊಸ ಜಾಬ್ ಕಾರ್ಡ್ ಪಡೆದು ಕೂಲಿ ಕೆಲಸದಲ್ಲಿ ಇದೀಗ ತಲ್ಲೀನರಾಗಿದ್ದಾರೆ.
ಕೈ ಹಿಡಿದ ನರೇಗಾ: ಕಲಿತದ್ದು ಬಿ.ಎ ಶಿಕ್ಷಣ. ಕೆಲಸ ಮಾತ್ರ ಇಲ್ಲ. ಏನು ಮಾಡೋದು, ಬೇರೆ ಊರಿಗೆ ತೆರಳಿ ಕೆಲಸ ಮಾಡಬೇಕು ಅಂದ್ರೆ ಕೊರೊನಾ ಪೀಕಲಾಟ ಬೇರೆ ಎಂದು ದಿನಂಪ್ರತಿ ಕೊರಗುತ್ತ ದಿನ ಕಳೆಯುತ್ತಿದ್ದ, ದುರ್ಗಪ್ಪನಿಗೆ ಇದ್ದೂರಲ್ಲೇ ಸಂಜೀವಿನಿಯಂತೆ ನರೇಗಾ ಕೂಲಿ ಕೆಲಸ ದೊರೆಯುವ ಮೂಲಕ ಪದವೀಧರನ ಕೈ ಹಿಡಿದಿದೆ. ಸದ್ಯ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುವ ಮೂಲಕ ಧನ್ಯತಾ ಭಾವ ಮೆರೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.