ವಾರದಲ್ಲಿ  6,547 ಮಂದಿಗೆ ಕೋವಿಡ್, 13 ಸಾವು


Team Udayavani, May 5, 2021, 5:00 AM IST

ವಾರದಲ್ಲಿ  6,547 ಮಂದಿಗೆ ಕೋವಿಡ್, 13 ಸಾವು

ಮಹಾನಗರ: ದ.ಕ. ಜಿಲ್ಲೆಯಲ್ಲಿ ಕೋವಿಡ್ ತನ್ನ ಕಂಬಂಧಬಾಹು ವಿಸ್ತರಿಸುತ್ತಿದೆ. ಎರಡು ವಾರಗಳಿಂದ ಕೋವಿಡ್ ದೈನಂದಿನ ಪ್ರರಕಣದಲ್ಲಿ ಏರಿಕೆ ಕಾಣುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಸಾರ್ವಜನಿಕರು ಕೊರೊನಾ ಮಾರ್ಗಸೂಚಿ ಪಾಲನೆಯಲ್ಲಿ ಕೆಲವು ಮಂದಿ ನಿರ್ಲಕ್ಷ್ಯ ವಹಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಅಪಾಯಕ್ಕೆ ಕಾರಣವಾಗಬಹುದು.

ದ.ಕ. ಜಿಲ್ಲೆಯಲ್ಲಿ ಮಾರ್ಚ್‌ವರೆಗೆ ಶೇ.5.77ರಷ್ಟು ಕೋವಿಡ್ ಪಾಸಿಟಿವಿಟಿ ರೇಟಿಂಗ್‌ ಇತ್ತು. ಇದೀಗ ಕೊರೊನಾ ದೈನಂದಿನ ಪ್ರಕರಣ ಏರಿಕೆಯಾಗುತ್ತಿದ್ದು, ಈ ಸಂಖ್ಯೆ ಸುಮಾರು ಶೇ.10ರಷ್ಟು ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಸದ್ಯ ಕೋವಿಡ್ ರೋಗ ತಪಾಸಣೆ ಕೂಡ ಹೆಚ್ಚುತ್ತಿದೆ. ಪ್ರತೀ ದಿನ 4 ರಿಂದ 5 ಸಾವಿರ ಮಂದಿಯನ್ನು ತಪಾಸಣೆ ನಡೆಸಲಾಗುತ್ತಿದ್ದು, ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ, ರೋಗ ಗುಣಲಕ್ಷಣ ಉಳ್ಳವರ ತಪಾಸಣೆ ನಡೆಸಲಾಗುತ್ತಿದೆ. ಇದರಲ್ಲಿಯೇ ದೊಡ್ಡ ಸಂಖ್ಯೆಯ ಪಾಸಿಟಿವ್‌ ಪ್ರಕರಣ ದಾಖಲಾಗುತ್ತಿದೆ.

ದ.ಕ. ಜಿಲ್ಲೆಯಲ್ಲಿ   ಎರಡು ತಿಂಗಳ ಹಿಂದೆ ಕೊರೊನಾ ದೈನಂದಿನ ಪ್ರಕರಣಗಳು ಎರಡಂಕೆ ಸಂಖ್ಯೆಯಲ್ಲಿತ್ತು. ಎರಡು ವಾರದಿಂದ ಹಠಾತ್ತನೆ ಏರಿಕೆ ಕಂಡಿತ್ತು. ರೋಗ ಹರಡುವ ವೇಗ ಹೆಚ್ಚಾಗಿದೆ. ಮನೆಗಳಿಗೂ ಸೋಂಕು ಹರಡಿದ್ದು, ಕಂಟೈನ್‌ಮೆಂಟ್‌ ವಲಯಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯವಿದೆ. ಏಕೆಂದರೆ, ಜಿಲ್ಲಾಡಳಿತದ ಅಂಕಿ ಅಂಶದ ಪ್ರಕಾರ ಕಳೆದ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ 6,547 ಮಂದಿಗೆ ಕೊರೊನಾ ಸೋಂಕು ತಗು ಲಿದ್ದು, ಒಟ್ಟು 13 ಮಂದಿಯನ್ನು ಬಲಿ ತೆಗೆದುಕೊಂಡಿದೆ.

ಲೆಕ್ಕ ಸಿಗುವುದು ಕೆಲವು ಮಾತ್ರ ! :

ದ.ಕ. ಜಿಲ್ಲೆಯಲ್ಲಿ ಕೊರೊನಾ ಇದ್ದು, ಅನ್ಯ ಕಾಯಿಲೆಯಿಂದ ಬಳಲುತ್ತಿರುವ ಎಲ್ಲ ಸಾವುಗಳು ಕೊರೊನಾ ಸಾವು ಎಂದು ಪರಿಗಣಿಸಲಾಗುವುದಿಲ್ಲ. ಸಾವಿನ ನಿಖರತೆ  ಪತ್ತೆ ಮಾಡಿದ ಬಳಿಕವೇ ಆ ಸಾವು ಕೊರೊನಾದ್ದೇ ಅಥವಾ ಬೇರೆ ಕಾರಣವೇ ಎಂದು ನಿರ್ಧರಿಸಲಾಗುತ್ತದೆ. ಸಾವಿನ ನಿಖರತೆ ತಿಳಿದುಕೊಳ್ಳಲು 13 ಮಂದಿ ವೈದ್ಯಾಧಿಕಾರಿಗಳ ತಂಡವನ್ನು ಹಿಂದಿನ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು

ನೇಮಕ ಮಾಡಿದ್ದರು. ಕೊರೊನಾ ಸಾವಿನ ಕುರಿಂತೆ ಈ ತಂಡವು ಸಮಗ್ರ ಪರಿಶೀಲನೆ, ಅನಾರೋಗ್ಯ ವರದಿ ಆಧರಿಸಿ ವರದಿ ನೀಡುತ್ತದೆ. ಬಳಿಕ ಆ ಸಾವಿನ ಖಚಿತತೆ ತಿಳಿಯುತ್ತದೆ.

ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಕಾಣುತ್ತಿದ್ದು, ಪ್ರತಿಯೊಬ್ಬರೂ ಜಾಗರೂಕರಾಗಬೇಕು. ತುರ್ತು ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ. ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ. ಕೋವಿಡ್ ಗುಣಲಕ್ಷಣ ಕಂಡುಬಂದರೆ ಕೂಡಲೇ ವೈದ್ಯರನ್ನು ಭೇಟಿಯಾಗಿದೆ. -ಡಾ| ಕಿಶೋರ್‌ ಕುಮಾರ್‌,   ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

court

CBI court; ಕಸ್ಟಡಿ ಸಾ*ವು ಪ್ರಕರಣ: ಹಿಮಾಚಲ ಐಜಿ ಸೇರಿ 7 ಮಂದಿ ಪೊಲೀಸರಿಗೆ ಶಿಕ್ಷೆ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

1-roh

Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಆಕ್ಷೇಪ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್‌ ಕಾಲೇಜು

CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್‌ ಕಾಲೇಜು

CM  Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ

CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ

Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ

Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ

Fraud: ಆನ್‌ಲೈನ್‌ ಟ್ರೇಡಿಂಗ್‌: ಮಹಿಳೆಗೆ 15.27 ಲಕ್ಷ ರೂ. ವಂಚನೆ

Fraud: ಆನ್‌ಲೈನ್‌ ಟ್ರೇಡಿಂಗ್‌: ಮಹಿಳೆಗೆ 15.27 ಲಕ್ಷ ರೂ. ವಂಚನೆ

Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-sat

India Open; ಸಾತ್ವಿಕ್‌-ಚಿರಾಗ್‌ ಅಭಿಯಾನ ಸೆಮಿಫೈನಲ್‌ನಲ್ಲಿ ಅಂತ್ಯ

Work-Time

Work Time Issue: ವಾರಕ್ಕೆ 90 ಗಂಟೆ ಕೆಲಸ ಸಲೀಸಾ?

court

CBI court; ಕಸ್ಟಡಿ ಸಾ*ವು ಪ್ರಕರಣ: ಹಿಮಾಚಲ ಐಜಿ ಸೇರಿ 7 ಮಂದಿ ಪೊಲೀಸರಿಗೆ ಶಿಕ್ಷೆ

Foot ball

Mangaluru; ಫುಟ್‌ಬಾಲ್‌ ಕ್ವಾರ್ಟರ್‌ ಫೈನಲ್‌ :ಕಸಬ ಬ್ರದರ್ ಮೇಲುಗೈ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.