ಹೈದರಾಬಾದ್ ಮೃಗಾಲಯ : 8 ಸಿಂಹಗಳಿಗೆ ಕೋವಿಡ್
Team Udayavani, May 5, 2021, 7:10 AM IST
ಹೈದರಾಬಾದ್: ಇಲ್ಲಿನ ನೆಹರೂ ಮೃಗಾಲಯದಲ್ಲಿರುವ ಎಂಟು ಸಿಂಹಗಳಿಗೆ ಕೋವಿಡ್ ಸೋಂಕು ತಗಲಿದೆ.
ದೇಶದಲ್ಲಿ ಪ್ರಾಣಿಗಳಿಗೆ ಕೋವಿಡ್ ಸೋಂಕು ಹರಡಿರುವ ಪ್ರಕರಣ ವರದಿಯಾಗಿರುವುದು ಇದೇ ಮೊದಲು. ಎ. 29ರಂದು ಮೃಗಾಲಯದ ಸಿಂಹಗಳಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮೃಗಾಲಯದ ನಿರ್ದೇಶಕರು ಈ ಸುದ್ದಿಯನ್ನು ಖಚಿತಪಡಿಸಲು ನಿರಾಕರಿಸಿದ್ದಾರೆ.
ಸಿಂಹಗಳಿಗೆ ಕೊರೊನಾದಂಥ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದ್ದೆವು. ನನಗೆ ಇನ್ನೂ ವರದಿ ತಲುಪಿಲ್ಲವಾದ್ದರಿಂದ ಈ ಬಗ್ಗೆ ಖಚಿತವಾಗಿ ಹೇಳಲಾಗದು. ಸಿಂಹಗಳು ಚೇತರಿಸಿಕೊಳ್ಳುತ್ತಿವೆ ಎಂದು ಹೇಳಿದ್ದಾರೆ.
ಈ ಮೃಗಾಲಯದಲ್ಲಿ ಒಟ್ಟು 12 ಸಿಂಹಗಳಿವೆ. ಕೆಲವು ಸಿಂಹಗಳಿಗೆ ಶೀತ, ಕೆಮ್ಮು ರೀತಿಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಸಿಂಹಗಳಿಗೆ ಕೊರೊನಾ ದೃಢಪಟ್ಟಿದೆ ಎಂದು ಮೃಗಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಹಾಂಕಾಂಗ್‌ನಲ್ಲಿ ನಾಯಿ ಮತ್ತು ಬೆಕ್ಕುಗಳಿಗೆ ಕೊರೊನಾ ಹರಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.