ಎಚ್1ಬಿ ವೀಸಾ ವಿವಾದ ಇತ್ಯರ್ಥ
Team Udayavani, May 5, 2021, 6:40 AM IST
ವಾಷಿಂಗ್ಟನ್: ಅಮೆರಿಕದ ಏಳು ಉದ್ಯಮಗಳು ಸೇರಿ ಅಮೆರಿಕದ ಪೌರತ್ವ ಮತ್ತು ವಲಸೆ ಸೇವಾ ಸಂಸ್ಥೆ ವಿರುದ್ಧ ಮಸಾಚುಸೆಟ್ಸ್ ಜಿಲ್ಲಾ ನ್ಯಾಯಾಲಯದಲ್ಲಿ ಹೂಡಿದ್ದ ಮೊಕದ್ದಮೆಯನ್ನು ಕೈಬಿಟ್ಟಿವೆ.
ಯುಎಸ್‌ಸಿಐಎಸ್, ವಿದೇಶಗಳ ಕೆಲಸಗಾರರಿಗೆ ಈ ಹಿಂದೆ ಇದ್ದಂತೆಯೇ ವಿದೇಶಿ ಕೆಲಸದ ವೀಸಾ ನೀಡಲು ಒಪ್ಪಿದ್ದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಇದರಿಂದ ಅಲ್ಲಿನ ಕಂಪೆನಿಗಳಲ್ಲಿ ಕೆಲಸ ಮಾಡಲು ಬಯಸುವ ವಿದೇಶಿ ಉದ್ಯೋಗಿಗಳು ನಿಟ್ಟುಸಿರುಬಿಟ್ಟಿದ್ದಾರೆ.
ಅಕ್ಟೋಬರ್ 1ರ ಅನಂತರ ಎಚ್-1ಬಿ ವೀಸಾಗಳಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಯುಎಸ್‌ಸಿಐಎಸ್ ಬೇಕಾಬಿಟ್ಟಿಯಾಗಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಈ ವರ್ಷ ಮಾರ್ಚ್‌ನಲ್ಲಿ ಅಮೆರಿಕದ 7 ಉದ್ಯಮಗಳ ಪರವಾಗಿ, ವಲಸೆ ಮಂಡಳಿ ಅರ್ಜಿ ಸಲ್ಲಿಸಿತ್ತು. ಇದೇ ವೇಳೆ, ವಿದ್ಯಾರ್ಥಿ ವೀಸಾದೊಂದಿಗೆ ಅಮೆರಿಕಕ್ಕೆ ತೆರಳಲು ಬಯಸಿರುವ ಭಾರತೀಯ ವಿದ್ಯಾರ್ಥಿಗಳಿಗೆ, ಅಮೆರಿಕ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ. ಅಲ್ಲಿನ ಶಿಕ್ಷಣಸಂಸ್ಥೆಗಳಲ್ಲಿ ಓದಲು ಬಯಸುವ ಭಾರತೀಯರ ತರಗತಿಗಳು ಆ.1 ಅಥವಾ ಅನಂತರ ಶುರುವಾಗುವುದಾದರೆ ವೀಸಾ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.