ಮೊದಲ‌ ಅಲೆ ಹತ್ತಿಕ್ಕಿದ ಹಾದಿಯನ್ನೇ ಮರೆತ ಸರ್ಕಾರ! ಪರೀಕ್ಷೆ ಇಳಿಕೆ ಎಂಬ ಅಡ್ಡದಾರಿ?


Team Udayavani, May 5, 2021, 9:21 AM IST

ಮೊದಲ‌ ಅಲೆ ಹತ್ತಿಕ್ಕಿದ ಹಾದಿಯನ್ನೇ ಮರೆತ ಸರ್ಕಾರ! ಪರೀಕ್ಷೆ ಇಳಿಕೆ ಅಡ್ಡದಾರಿ?

ಬೆಂಗಳೂರು: ಅತಿ ಹೆಚ್ಚು ಸೋಂಕು ಪರೀಕ್ಷೆ ನಡೆಸುವ ಮೂಲಕ ಕೊರೊನಾ ಸೋಂಕಿನ ಮೊದಲ ಅಲೆ ಹತ್ತಿಕ್ಕಿದ್ದನ್ನು ರಾಜ್ಯ ಸರ್ಕಾರ ಮರೆತಂತಿದೆ!

ಎರಡನೇ ಅಲೆ ತೀವ್ರಗೊಂಡಿರುವ ಈ ಸಂದರ್ಭದಲ್ಲಿಯೇ 50 ಸಾವಿರದಷ್ಟು ಸೋಂಕು ಪರೀಕ್ಷೆಗಳನ್ನು ಕಡಿಮೆ ಮಾಡಿದೆ. ಈ ಮೂಲಕ ಪರೋಕ್ಷವಾಗಿ ಹೊಸ ಸೋಂಕು ಪ್ರಕರಣಗಳನ್ನು ಇಳಿಕೆಗೆ ಮುಂದಾದಂತಿದೆ. ಸರ್ಕಾರದ ಈ ನಡೆಗೆ ಆರೋಗ್ಯ ತಜ್ಞರು ಕೂಡಾ ಬೇಸರ ವ್ಯಕ್ತಪಡಿಸಿದ್ದು,  ಪರೀಕ್ಷೆ ಇಳಿಕೆಯಾದರೆ ಸೋಂಕು ಹತೋಟಿ ಸಾಧ್ಯವಿಲ್ಲ ಎಂದು ಅಭಿಪ್ರಾಯ  ಪಟ್ಟಿದ್ದಾರೆ.

ಸೋಂಕು ತೀವ್ರತೆ ಹೆಚ್ಚಿರುವ ಪ್ರದೇಶದಲ್ಲಿ ಅತಿ ಹೆಚ್ಚು ಪರೀಕ್ಷೆಗಳನ್ನು ನಡೆಸಿ ಶೀಘವೇ ಸೋಂಕಿತರನ್ನು ಪತ್ತೆ ಮಾಡಿ ಕ್ವಾರಂಟೈನ್‌/ ಚಿಕಿತ್ಸೆ ನೀಡಿದರೆ ಆತನಿಂದ ಮತ್ತೂಬ್ಬರಿಗೆ ಸೋಂಕು ಹರಡುವುದನ್ನು ತಪ್ಪಿಸಬಹುದು.

ಇದನ್ನೂ  ಓದಿ:20 ದಿನದ ಅಂತರದಲ್ಲಿ ಈ ಗ್ರಾಮದಲ್ಲಿ 90 ಜನರು ಕೋವಿಡ್ ನಿಂದ ಪ್ರಾಣ ಕಳೆದುಕೊಂಡಿದ್ದಾರೆ!

ಇದು ಸೋಂಕನ್ನು ಹತೋಟಿಗೆ ತರುವ ಪ್ರಮುಖ ತಂತ್ರವಾಗಿದೆ. ಈ ಹಿಂದೆ ರಾಜ್ಯ ಸರ್ಕಾರವು ಕೂಡಾ ಇದನ್ನೆ ಮಾಡಿದ್ದು, ಮೊದಲ ಅಲೆ ತೀವ್ರವಾಗಿದ್ದ ಆಗಸ್ಟ್‌ನಲ್ಲಿ ನಿತ್ಯ 50 ಸಾವಿರ ನಡೆಯುತ್ತಿದ್ದ ಪರೀಕ್ಷೆಗಳನ್ನು ಸಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ದುಪ್ಪಟ್ಟು ಅಂದರೆ ಒಂದು  ಲಕ್ಷಕ್ಕೆ  ಹೆಚ್ಚಿಸಿತ್ತು. ಸತತ 60 ದಿನ 1 ಲಕ್ಷಕ್ಕೂ ಅಧಿಕ ಪರೀಕ್ಷೆ ನಡೆಯುವ ಮೂಲಕ ಅಕ್ಟೋಬರ್‌ ಅಂತ್ಯಕ್ಕೆ ಸೋಂಕು ಅರ್ಧಕ್ಕಿಂತ ಕ‌ಡಿಮೆಯಾದವು. ಆನಂತರ ನವೆಂಬರ್‌, ಡಿಸೆಂಬರ್‌ನಲ್ಲೂ ಇದೇ ರೀತಿ ಪರೀಕ್ಷೆ ನಡೆಸಿ ವರ್ಷಾಂತ್ಯಕ್ಕೆ ಪರೀಕ್ಷೆಗೆ ತಕ್ಕ ಫ‌ಲವೆಂಬಂತೆ 11 ಸಾವಿರಕ್ಕೇರಿದ್ದ ಹೊಸ ಪ್ರಕರಣ ಒಂದು ಸಾವಿರಕ್ಕೆ ಇಳಿಕೆಯಾಗಿದ್ದವು.

ಎರಡರಿಂದ ಒಂದೂವರೆ ಲಕ್ಷಕ್ಕೆ ತಗ್ಗಿದ ಪರೀಕ್ಷೆ: ಮೊದಲ ಅಲೆಯ ಹತ್ತಿಕ್ಕಿದ್ದ ತಂತ್ರವನ್ನು ಈ ಬಾರಿ ರಾಜ್ಯ ಸರ್ಕಾರ ಮರೆತಿದ್ದು, ಕಳೆದ ವಾರ ಹೆಚ್ಚು ಕಡಿಮೆ ಎರಡು ಲಕ್ಷ ಗಡಿಯಲ್ಲಿ ಪ‌ರೀಕ್ಷೆಗಳು ಈಗ ಒಂದೂವರೆ ಲಕ್ಷಕ್ಕೆ ತಗ್ಗಿವೆ. ಏ.30 ರಂದು 1.9 ಲಕ್ಷ ನಡೆದಿದ್ದ ಸೋಂಕು ಪರೀಕ್ಷೆಗಳು ಕಳೆದ ಐದು ದಿನಗಳಿಂದ ನಿತ್ಯ 8 ರಿಂದ 10 ಸಾವಿರ ಇಳಿಕೆಯಾಗುತ್ತಾ ಸಾಗಿ ಸದ್ಯ 1.4 ಲಕ್ಷಕ್ಕೆ ಬಂದು ನಿಂತಿವೆ. ಅದರಲ್ಲೂ ಸೋಂಕು ಹೆಚ್ಚಿರುವ ಬೆಂಗಳೂರಿನಲ್ಲಿ ಪರೀಕ್ಷೆಗಳ ಸಂಖ್ಯೆ ಒಂದು ಲಕ್ಷದಿಂದ 40 ಸಾವಿರಕ್ಕೆ ಇಳಿಕೆಯಾಗಿವೆ.

ಸರ್ಕಾರದಿಂದಲೇ ಸೂಚನೆ?: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಒಬ್ಬ ಸೋಂಕಿತನ ಕನಿಷ್ಠ 20 ಸಂಪರ್ಕಿತರ ಪರೀಕ್ಷೆ ನಡೆಸಬೇಕು. ಆದರೆ, ಐದಕ್ಕಿಂತಲೂ ಕಡಿಮೆ ಸಂಪರ್ಕಿತರ ಪರೀಕ್ಷೆ ನಡೆಯುತ್ತಿದೆ. ಇದು ಕೂಡಾ ಪರೀಕ್ಷೆ ತಗ್ಗಲು ಕಾರಣವಾಗಿದೆ. ಈ ಕುರಿತು ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಏಪ್ರಿಲ್‌ ಮೂರನೇ ವಾರದಲ್ಲಿ ಪರೀಕ್ಷೆ ಹೆಚ್ಚಿಸಲು ಸೂಚಿಸಿದ್ದರು. ಒಂದು ವಾರದಿಂದ ಪರೀಕ್ಷೆ ಕಡಿಮೆಗೆ ಸೂಚನೆ ಬಂದಿದೆ ಎನ್ನುತ್ತಾರೆ. ಇರೋ ಸೋಂಕಿತರಿಗೆ ಚಿಕಿತ್ಸೆ, ಆರೈಕೆ ಸಾಧ್ಯವಾಗುತ್ತಿಲ್ಲ. ಪರೀಕ್ಷೆ ಹೆಚ್ಚಿಸಿ ಇನ್ನಷ್ಟು ಸೋಂಕಿತರ ಹೆಚ್ಚಾದರೆ ನಿಭಾಹಿಸುವುದು ಕಷ್ಟವಾಗ ಬಹುದು ಎಂಬ ಲೆಕ್ಕಾಚಾರ ಸರ್ಕಾರದ ಬಳಿ ಇರಬಹುದು. ಆದರೆ, ಇದು ಸಮಂಜಸವಲ್ಲ ಎಂಬ ಅಭಿಪ್ರಾಯವನ್ನು ಕೆಲ ವೈದ್ಯರು ವ್ಯಕ್ತಪಡಿಸಿದ್ದಾರೆ.

ಪರೀಕ್ಷೆ ತಗ್ಗಿದರೂ, ಹೊಸ ಪ್ರಕರಣಗಳು ಕುಗ್ಗಲಿಲ್ಲ: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನಿತ್ಯ 10 ಸಾವಿರದಂತೆ 50 ಸಾವಿರ ಪರೀಕ್ಷೆ ಕಡಿಮೆ ಮಾಡುತ್ತಾ ಬಂದರೂ ಹೊಸ ಪ್ರಕರಣಗಳು ಮಾತ್ರ ನಲವತ್ತು ಸಾವಿರ ಆಸುಪಾಸಿನಲ್ಲಿಯೇ ಇವೆ. ಈ ಮೂಲಕ ಪರೀಕ್ಷೆ ಕಡಿಮೆ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂಬ ಸರ್ಕಾರದ ಆಲೋಚನೆ ಹಿನ್ನಡೆಯಾಗಿದೆ. ಸೋಂಕು ಕಳೆದ ಬಾರಿಗಿಂತ ದುಪ್ಪಟ್ಟಾಗಿದ್ದು, ಪರೀಕ್ಷೆಯೂ ದುಪ್ಪಟ್ಟಾಗಬೇಕು. ಈ ಕುರಿತು ಸರ್ಕಾರ ಕ್ರಮಕೈಗೊಂಡರೇ ಸೋಂಕು ಹತೋಟಿ ಸಾಧ್ಯ ಎಂದು ತಜ್ಞರು ತಿಳಿಸಿದ್ದಾರೆ.

4 ಲಕ್ಷ ಪರೀಕ್ಷೆ ಮಾಡಬೇಕು

ಸೋಂಕು ಪ್ರಕರಣಗಳು 40 ಸಾವಿರಕ್ಕೆ ಹೆಚ್ಚಿದ್ದು, ನಿತ್ಯ ನಾಲ್ಕು ಲಕ್ಷ ಪರೀಕ್ಷೆಗಳನ್ನು ನಡೆಸಬೇಕು. ಆದರೆ, ಅಷ್ಟೋಂದು ಪ್ರಯೋಗಾಲಯಗಳು ಇಲ್ಲ. ಹೀಗಾಗಿ, ರ್ಯಾಪಿಡ್‌ ಪರೀಕ್ಷೆಗಳಿಗೆ ಆದ್ಯತೆ ನೀಡ ಬೇಕು. ಹೆಚ್ಚು ರ್ಯಾಪಿಡ್‌ ಕಿಟ್‌ಗಳನ್ನು ತರಿಸಿಕೊಂಡ ಸೋಂಕು ಲಕ್ಷಣ ಇದ್ದವರಿಗೆ ಪರೀಕ್ಷೆ ಮಾಡಿ ಶೀಘ್ರ ಕ್ವಾರಂಟೈನ್‌ ಅಥವಾ ಚಿಕಿತ್ಸೆಗೆ ಸೂಚಿಸಬೇಕು ಎಂದು ವೈರಾಣು ತಜ್ಞ ಡಾ.ವಿ.ರವಿ ತಿಳಿಸಿದ್ದಾರೆ.

ಸೋಂಕು ಹತೋಟಿಗೆ ಸರ್ಕಾರದ ಮುಂದೆ ಸದ್ಯ ಇರುವ ಮಾರ್ಗ ಅತಿಹೆಚ್ಚು ಪರೀಕ್ಷೆ ಮಾಡುವುದಾಗಿದೆ. ರಾಜ್ಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಪರೀಕ್ಷೆ ನಡೆಸಬೇಕು. ಪರೀಕ್ಷೆ ಪ್ರಮಾಣ ಇಳಿಕೆಯು ಸೋಂಕು ಹರಡುವಿಕೆ ಹಾದಿಯಾಗುತ್ತದೆ.

ಡಾ.ಸುದರ್ಶನ್‌ ಬಲ್ಲಾಳ್‌, ತಜ್ಞರ ಸಲಹಾ ಸಮಿತಿ ಸದಸ್ಯರು, ಅಧ್ಯಕ್ಷರು ಮಣಿಪಾಲ್‌ ಆಸ್ಪತ್ರೆ

 

ಜಯಪ್ರಕಾಶ್ ಬಿರಾದಾರ್

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.