ಕೇರಳ ಬೇಕಾದಷ್ಟು ಆಕ್ಸಿಜನ್ ಉತ್ಪಾದನೆ ಮಾಡಿಕೊಳ್ಳುತ್ತದೆ,ನಮ್ಮಲ್ಲ್ಯಾಕಿಲ್ಲ? ಸಿದ್ದು ಆಕ್ರೋಶ
Team Udayavani, May 5, 2021, 7:18 PM IST
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳು ಹಾಗೂ ಆಕ್ಸಿಜನ್ ಕೊರತೆಯ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ಸೊಂಕಿತರ ಚಿಕಿತ್ಸೆಗೆ ಬೇಕಾಗುವ ಆಕ್ಸಿಜನ್ ಹಾಗೂ ರೆಮಿಡೆಸಿವಿರ್ ಕೊರತೆಯ ಬಗ್ಗೆ ಮತ್ತೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದಲ್ಲಿನ ಮೆಡಿಕಲ್ ಆಕ್ಸಿಜನ್ ಅಭಾವದ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಕೇರಳದಲ್ಲಿ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಉತ್ಪಾದನೆ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಏಕೆ ಹೀಗಿಲ್ಲ? ತಜ್ಞರ ವರದಿ ಪ್ರಕಾರ ಮೇ ತಿಂಗಳಲ್ಲಿ ಕೊರೊನಾ ಸೋಂಕು ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ತಯಾರಿಸಲು ರಾಜ್ಯ ಬಿಜೆಪಿ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದಿದ್ದಾರೆ.
ಓದಿ : ಖಾಲಿ ಬೆಡ್ ಗಳ ಬಗ್ಗೆ ಪ್ರತಿ ದಿನ ಬುಲೆಟಿನ್ ಬಿಡುಗಡೆ : ಸಚಿವ ಬಸವರಾಜ ಬೊಮ್ಮಾಯಿ
ಕೇರಳದಲ್ಲಿ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಉತ್ಪಾದನೆ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಏಕೆ ಹೀಗಿಲ್ಲ?
ತಜ್ಞರ ವರದಿ ಪ್ರಕಾರ ಮೇ ತಿಂಗಳಲ್ಲಿ ಕೊರೊನಾ ಸೋಂಕು ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ತಯಾರಿಸಲು ರಾಜ್ಯ @BJP4Karnataka ಸರ್ಕಾರ ಅವಕಾಶ ಮಾಡಿಕೊಡಬೇಕು. 7/8#CovidIndia— Siddaramaiah (@siddaramaiah) May 5, 2021
ಇನ್ನು, ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮಿಡೆಸಿವಿರ್, ವೈದ್ಯರ ಕೊರತೆಯ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮಿಡಿಸಿವರ್ ಇಂಜೆಕ್ಷನ್ ಇಲ್ಲ. ಜೊತೆಗೆ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ಅವರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಅಧಿಕಾರ ನೀಡಬೇಕು ಎಂದಿದ್ದಾರೆ.
ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್, ರೆಮಿಡಿಸಿವರ್ ಇಂಜೆಕ್ಷನ್ ಇಲ್ಲ. ಜೊತೆಗೆ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ಅವರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ರಾಜ್ಯ @BJP4Karnataka ಸರ್ಕಾರ ಸಂಪೂರ್ಣ ಅಧಿಕಾರ ನೀಡಬೇಕು. 8/8#CovidIndia
— Siddaramaiah (@siddaramaiah) May 5, 2021
ಸಂಸದ ತೇಜಸ್ವಿ ಸೂರ್ಯ ಅವರು ಬಯಲಿಗೆಳೆದ ಬೆಡ್ ಬ್ಲಾಕಿಂಗ್ ವಿಚಾರವನ್ನು ಪ್ರಸ್ತಾಪಿಸಿ ಮಾಡಿದ ಟ್ವೀಟ್ ನಲ್ಲಿ, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದು ಇಡೀ ದೇಶಕ್ಕೆ ಗೊತ್ತು. ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ದಂಧೆ ತಡೆಯುವುದಕ್ಕಷ್ಟೇ ಸೀಮಿತ ಆಗದೆ, ಎಲ್ಲ ಸಂಸದರನ್ನು ಪ್ರಧಾನಿಯವರ ಬಳಿಗೆ ಕರೆದುಕೊಂಡು ಹೋಗಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದು ಇಡೀ ದೇಶಕ್ಕೆ ಗೊತ್ತು. ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ @Tejasvi_Surya ಬೆಡ್ ಬ್ಲಾಕಿಂಗ್ ದಂಧೆ ತಡೆಯುವುದಕ್ಕಷ್ಟೇ ಸೀಮಿತ ಆಗದೆ, ಎಲ್ಲ ಸಂಸದರನ್ನು ಪ್ರಧಾನಿಯವರ ಬಳಿಗೆ ಕರೆದುಕೊಂಡು ಹೋಗಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ. 6/8#CovidIndia
— Siddaramaiah (@siddaramaiah) May 5, 2021
ಓದಿ : ಕೋವಿಡ್ ಲಸಿಕೆ : ನಾಲ್ವರಲ್ಲಿ ಒಬ್ಬರಿಗೆ ಮಾತ್ರ ಅಡ್ಡಪರಿಣಾಮ : ಅಧ್ಯಯನ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.