ಔಷಧೋಪಕರಣ ಕೊರತೆಯಾಗದಿರಲಿ

ಉಸ್ತುವಾರಿ ಸಚಿವ ಕಾರಜೋಳ ಮೊದಲ ಸಭೆ! ­ಸಮನ್ವಯದಿಂದ 24 ಗಂಟೆಯೂ ಕೆಲಸ ಮಾಡಿ

Team Udayavani, May 5, 2021, 8:11 PM IST

tyjryr5y

ಬೆಳಗಾವಿ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳ ಮಾಹಿತಿಯನ್ನು ಪ್ರತಿದಿನ ವೆಬ್‌ ಸೈಟ್‌ ಮೂಲಕ ಜನರಿಗೆ ನೀಡಬೇಕು. ಆಕ್ಸಿಜನ್‌, ರೆಮ್‌ಡಿಸಿವಿಯರ್‌ ಮೊದಲಾದ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳ ಜೊತೆ ಮಂಗಳವಾರ ಝೂಮ್‌ ಮೂಲಕ ಸಭೆ ನಡೆಸಿದ ಅವರು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯೊಂದಿಗೆ 24 ಗಂಟೆಯೂ ಕೆಲಸ ಮಾಡಲು ಮುಂದಾಗಬೇಕು ಎಂದರು.

ಕೋವಿಡ್‌ ಸೋಂಕಿತರ ಚಿಕಿತ್ಸೆಯಲ್ಲಿ ಆಕ್ಸಿಜನ್‌ ಕೊರತೆಯ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್‌ ಸಂಗ್ರಹ, ದೆ„ನಂದಿನ ಬಳಕೆ ಹಾಗೂ ತುರ್ತು ಸಂದರ್ಭದಲ್ಲಿ ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು. ಅದೇ ರೀತಿ ರೆಮ್‌ಡಿಸಿವಿಯರ್‌ ಲಭ್ಯತೆ ಬಗ್ಗೆ ನಿಗಾ ವಹಿಸುವುದಲ್ಲದೆ ಅದು ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ರೆಮ್‌ಡಿಸಿವಿಯರ್‌ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಆಸ್ಪತ್ರೆಗಳಿಗೆ ನೋಟಿಸ್‌ ನೀಡಬೇಕು. ಆದರೆ ಸೇವಾಶುಲ್ಕ ಮಾತ್ರ ಪಡೆಯಲು ಅವಕಾಶವನ್ನು ಕಲ್ಪಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಲಭ್ಯವಿರುವ ವೆಂಟಿಲೇಟರ್‌ ಸೌಲಭ್ಯ ಸಮರ್ಪಕ ಬಳಕೆಗೆ ಅಗತ್ಯವಿರುವ ತಂತ್ರಜ್ಞರನ್ನು ನೇಮಿಸಿಕೊಳ್ಳಬೇಕು ಎಂದರು. ಕೋವಿಡ್‌ ಹೆಚ್ಚಾಗಿ ಹರಡುತ್ತಿರುವ ಗ್ರಾಮಗಳಲ್ಲಿ ಯಾವ ಕಾರಣಕ್ಕಾಗಿ ಹರಡುತ್ತಿದೆ ಎಂಬುದನ್ನು ಪತ್ತೆಹಚ್ಚಲು ಗ್ರಾಮಗಳಲ್ಲಿ ಕಾರ್ಯಪಡೆಗಳನ್ನು ಕಡ್ಡಾಯವಾಗಿ ರಚನೆ ಮಾಡಿ, ನಿಯಂತ್ರಿಸಲು ಕ್ರಮ ಜರುಗಿಸಬೇಕು. ಹೋಬಳಿ ಮಟ್ಟದಲ್ಲಿ ಸಾರ್ವಜನಿಕರ ಸಲಹಾ ಸಮಿತಿ ರಚಿಸಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.