ಹೆಚ್ಚುತ್ತಿದೆ ಎರಡನೇ ಅಲೆ ಆರ್ಭಟ !ಸೋಂಕಿತರಿಗೆ ಮೀಸಲಿಟ್ಟ ಆಂಬ್ಯುಲೆನ್ಸ್
Team Udayavani, May 5, 2021, 8:48 PM IST
ವರದಿ: ಮುನೇಶ ತಳವಾರ
ಮುಂಡಗೋಡ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು ಸರ್ಕಾರದ ಸಹಭಾಗಿತ್ವದ ಜಿವಿಕೆ ಇಎಂಆರ್‌ಐ ಸಂಸ್ಥೆಯವರು ಕೋವಿಡ್ ಸೋಂಕಿತರಿಗಾಗಿ 108 ಆಂಬ್ಯುಲೆನ್ಸ್ ಮೀಸಲಿಟ್ಟಿದ್ದು 108 ಸಿಬ್ಬಂದಿ ಹಗಲಿರುಳು ಎನ್ನದೇ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರ ಪ್ರಕರಣ ಮತ್ತು ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಸಕಾಲದಲ್ಲಿ ಚಿಕಿತ್ಸೆ ಇಲ್ಲದೆ ಮತ್ತು ವಾಹನದ ಸಮಸ್ಯೆಗಳಿಂದ ಸಾವು-ನೋವು ಹೆಚ್ಚಾಗುತ್ತಿದೆ. ಬಡವರ ಪಾಲಿಗೆ 108 ಆಂಬ್ಯುಲೆನ್ಸ್ ಹಾಗೂ ಸಿಬ್ಬಂದಿ ಭಗವಂತನ ರೂಪದಲ್ಲಿ ಬಂದು ಸೋಂಕಿತರು ಇದ್ದ ಸ್ಥಳದಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ-ಬೇರೆ ಆಸ್ಪತ್ರೆಗಳಿಗೆ ಔಷಧೋಪಚಾರದೊಂದಿಗೆ ಆಂಬ್ಯುಲೆನ್ಸ್‌ನಲ್ಲಿ ಬೇಕಾಗುವ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುತ್ತ ಸಕಾಲದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲ ಮಾಡುತ್ತಿದ್ದಾರೆ.
ಕೋವಿಡ್-19 ವೈರಸ್ 2ನೇ ಅಲೆಯ ಗಂಭೀರತೆ ಅರಿತು 108 ಸೇವೆಯ ಆಂಬ್ಯುಲೆನ್ಸ್ ಚಾಲಕರು, ತುರ್ತು ವೈದ್ಯಕೀಯ ತಂತ್ರಜ್ಞರು ತಮ್ಮ ಕರ್ತವ್ಯ ನಿಷ್ಠೆ ಮೆರೆದು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಕುಟಂಬವನ್ನು ಬಿಟ್ಟು ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ಮುನ್ನುಗ್ಗುತ್ತಾ ಆಂಬ್ಯುಲೆನ್ಸ್‌ನಲ್ಲಿ ಬರುವ ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುಸುತ್ತಿರುವ ಸಿಬ್ಬಂದಿ ಒಂದೊಂದು ದಿನ ಊಟ-ನಿದ್ದೆಯಿಲ್ಲದೆ ಕರ್ತವ್ಯ ನಿರ್ವಹಿಸುವ ಇವರು ಸರ್ಕಾರದ ಸೌಲಭ್ಯಕ್ಕಾಗಿ ಹವಣಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.