ಪಶ್ಚಿಮ ಬಂಗಾಳ ಹಿಂಸಾಚಾರ : ಟಿಎಂಸಿ ವಿರುದ್ಧ ಜಮ್ಮು ಕಾಶ್ಮೀರ ಬಿಜೆಪಿ ಪ್ರತಿಭಟನೆ

Team Udayavani, May 5, 2021, 8:48 PM IST

J&K BJP protests against TMC, Mamata over post-poll violence in West Bengal 

ಸಾಂದರ್ಭಿಕ ಚಿತ್ರ

ಜಮ್ಮು  : ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಕಾರ್ಯಕರ್ತರು ಮತದಾನದ ನಂತರ ನಡೆದ ಹಿಂಸಾಚಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಯ ಸಾವಿರಾರು ಕಾರ್ಯಕರ್ತರು ಮತ್ತು ಅದರ ಮೋರ್ಚಾಗಳು ಫಲಕಗಳನ್ನು ಹಿಡಿದು ಬ್ಯಾನರ್ಜಿ ಮತ್ತು ಅವರ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ಈ ಬಗ್ಗೆ ಪ್ರತಿಕ್ರಿಯಿಸಿದ ಜಮ್ಮು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ, ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ನಡೆಸಿದ ಹತ್ಯೆಯಿಂದ ನಾವು ತೀವ್ರವಾಗಿ ನೊಂದಿದ್ದೇವೆ” ಬಿಜೆಪಿ ಕಾರ್ಯಕರ್ತರ ಸುರಕ್ಷತೆಗಾಗಿ ಕೇಂದ್ರ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಓದಿ : ಗೋವಾ : ಲಾಕ್ ಡೌನ್ ಭೀತಿಯಲ್ಲಿ ತವರು ಸೇರುತ್ತಿರುವ ಕೂಲಿ ಕಾರ್ಮಿಕರು

ಟಿಎಂಸಿ ಗೂಂಡಾಗಳು ಬಂಗಾಳದ ಬಿಜೆಪಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಇಂತಹ ದಾಳಿಗಳು ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುತ್ತಿವೆ ಮತ್ತು ಇದು ಟಿಎಂಸಿಯ ‘ಗೂಂಡಾ ನೀತಿ’ ಯನ್ನು ಪುನರುಚ್ಚರಿಸಿದೆ ಎಂದಿದ್ದಾರೆ.

ಇನ್ನು, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, “ಟಿಎಂಸಿ ಗೂಂಡಾಗಳು ಮಹಿಳೆಯರನ್ನು ಸಹ ಬಿಡಲಿಲ್ಲ”, ಇದು ಪ್ರಜಾಪ್ರಭುತ್ವದ “ಕಗ್ಗೊಲೆ” ಎಂದು ಆರೋಪಿಸಿದರು.

ಟಿಎಂಸಿ ಇಂತಹ ಕೃತ್ಯವೆಸಗುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾನದ ನಂತರದ ಹಿಂಸಾಚಾರದಲ್ಲಿ ಕನಿಷ್ಠ 14 ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಒಂದು ಲಕ್ಷ ಜನರು ತಮ್ಮ ಮನೆಗಳನ್ನು ಬಿಟ್ಟು ಓಡಿಹೋಗಿದ್ದಾರೆ. ಭಾರತದ ವಿಭಜನೆಯ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆದಿದ್ದವು ಎಂದು ಕೇಳಿದ್ದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಮ್ಮ ಪಕ್ಷ ಇಂತಹ ಚಟುವಟಿಕೆಗೆ ಬೆಂಬಲಸುವುದಿಲ್ಲ. ನಮ್ಮ ಆಧ್ಯತೆ ಇದಲ್ಲ. ರಾಜ್ಯದ ಅಭಿವೃದ್ಧಿ ನಮಗೆ ಮುಖ್ಯ. ಕಾನೂನು ಸುವ್ಯವಸ್ಥೆಯನ್ನು ರಾಜ್ಯದಲ್ಲಿ ಬಿಗಿಯಾಗಿ ಜಾರಿಗೊಳಿಸುತ್ತೇನೆ. ಬಿಜೆಪಿ ಗೆಲುವು ಪಡೆದ ಕ್ಷೇತ್ರಗಳಲ್ಲಿ ಹೆಚ್ಚು ಗಲಭೆ-ಗಲಾಟೆಗಳು ನಡೆಯುತ್ತಿವೆ. ಹಳೆ ವಿಡಿಯೋಗಳ ಮೂಲಕ ಸುಳ್ಳು ಸುದ್ದಿಗಳನ್ನು ಬಿಜೆಪಿ ಪಕ್ಷ ಹರಡುತ್ತಿದೆ. ಇಂತಹ ಕೃತ್ಯವನ್ನು ನಿಲ್ಲಿಸುವಂತೆ ಎಲ್ಲ ರಾಜಕೀಯ ಪಕ್ಷಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಇನ್ನು, ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭೆ ಚುನಾವಣೆಯ ಫ‌ಲಿತಾಂಶದ ದಿನದಿಂದ ಆರಂಭವಾದ ಹಿಂಸಾಚಾರ ಮಂಗಳವಾರವೂ ಮುಂದುವರಿ‌ ದಿದ್ದು, ಮೃತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಓದಿ : ಕ್ಷೇತ್ರವಾರು ಸಹಾಯವಾಣಿ-ಆಂಬ್ಯುಲೆನ್ಸ್‌ ಸೇವೆ ! ಕೋವಿಡ್ ಸಂಕಷ್ಟಕ್ಕೆ ಕಾಂಗ್ರೆಸ್‌ ಸ್ಪಂದನೆ!

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

jharkhand election: 7 guarantee from INDIA bloc

Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.

Lawrence Bishnoi T-Shirt Sale on Flipkart, Meesho

T-Shirt: ಫ್ಲಿಪ್‌ಕಾರ್ಟ್‌, ಮೀಶೋದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಟೀಶರ್ಟ್‌ ಮಾರಾಟ: ಆಕ್ರೋಶ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.