ಮೆಗ್ಗಾನ್ ಆಸ್ಪತ್ರೆಯಲ್ಲೂ ಆಕ್ಸಿಜನ್ ಬೆಡ್ ಅಭಾವ, ಬೋರ್ಡ್ ನೋಡಿ ಸೋಂಕಿತರಲ್ಲಿ ಆತಂಕ
Team Udayavani, May 6, 2021, 2:24 PM IST
ಶಿವಮೊಗ್ಗ: ರಾಜ್ಯದಲ್ಲಿ ಒಂದೆಡೆ ಆಕ್ಸಿಜನ್ ಕೊರತೆಯ ಭೀತಿಯಿದ್ದರೆ, ಮತ್ತೊಂದೆಡೆ ಸಿಎಂ ಯಡಿಯೂರಪ್ಪ ತವರು ಶಿವಮೊಗ್ಗದಲ್ಲಿ ಆಕ್ಸಿಜನ್ ಬೆಡ್ ಗಳಿಗೆ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆ ಮೆಗ್ಗಾನ್ ಮುಂಭಾಗದಲ್ಲಿಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡು ಹಾಕಲಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ 400 ಆಕ್ಸಿಜನ್ ಬೆಡ್ ಗಳಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ಇದರಿಂದ ಬೆಡ್ ಗಳು ಭರ್ತಿಯಾಗಿದ್ದು, ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಹೇಳುತ್ತಿದ್ದಾರೆ. ಆದರೆ ಆಕ್ಸಿಜನ್ ಬೆಡ್ ಕೊರತೆ ಎಂದು ಆಸ್ಪತ್ರೆ ಮುಂದೆ ಬೋರ್ಡ್ ಹಾಕಿರುವುದು ಸೋಂಕಿತರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ:ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆಗೆ ಶೆಟ್ಟರ್ ಭೇಟಿ: ಆಕ್ಸಿಜನ್ ಉತ್ಪಾದನೆ ಕುರಿತಂತೆ ಚರ್ಚೆ
ಆಕ್ಸಿಜನ್ ಪ್ರಮಾಣಕ್ಕೆ ತಕ್ಕಂತೆ ಬೆಡ್ ಗಳನ್ನು ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅದಕ್ಕಿಂತಲೂ ಹೆಚ್ಚು ಬೆಡ್ ವ್ಯವಸ್ಥೆ ಮಾಡಿ, ಬಳಿಕ ಆಕ್ಸಿಜನ್ ಇಲ್ಲದೆ ಸೋಂಕಿತರು ನರಳುವುದು ಬೇಡ. ಸಂಜೆ ವೇಳೆಗೆ ಹೆಚ್ಚುವರಿ ಆಕ್ಸಿಜನ್, ಬಳಿಕ ಉಳಿದ ವ್ಯವಸ್ಥೆ ಮಾಡುವುದಾಗಿ ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ಶ್ರೀಧರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.