ಸುಕೋ-ಐಎಂಎ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ
Team Udayavani, May 6, 2021, 10:27 PM IST
ಸಿಂಧನೂರು: ಇಲ್ಲಿನ ಐಎಂಎ ಹಾಲ್‌ನಲ್ಲಿ ಅತ್ಯಾಧುನಿಕ ಸುಕೋ-ಐಎಂಎ ಸಹಭಾಗಿತ್ವ ಹಾಗೂ ಜನತಾ ಸೌಹಾರ್ದ ಸಹಕಾರಿ ನಿಯಮಿತ ಸಹಕಾರದಲ್ಲಿ ಆರಂಭಿಸಲಾದ 30 ಹಾಸಿಗೆ ಹೈಟೆಕ್ ಕೋವಿಡ್ ಆಸ್ಪತ್ರೆಯನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ಲೋಕಾರ್ಪಣೆ ಮಾಡಿದರು.
ಆನ್‌ಲೈನ್‌ನಲ್ಲಿ ಈ ವಿಶೇಷ ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಷ್ಟ-ಕಾಲದಲ್ಲಿ ಸರಿಯಾದ ನಿರ್ಣಯ ತೆಗೆದುಕೊಂಡು ಸುಕೋ ಅವರು ಹಲವರ ಬದುಕಿನಲ್ಲಿ ಬೆಳಕು ಚೆಲ್ಲುವ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಕೋವಿಡ್ ಆಸ್ಪತ್ರೆಗೆ ಸಂಬಂಧಿ ಸಿ, ಶಾಸಕ ವೆಂಕಟರಾವ್ ನಾಡಗೌಡ ಅವರು ಎರಡೂ¾ರು ಬಾರಿ ನನಗೆ ಕರೆ ಮಾಡಿ, ಸರಕಾರದ ಸಹಕಾರ ಕೇಳಿದ್ದರು.
ಜನರು ಎಲ್ಲ ಕಡೆಗೂ ಬೆಡ್, ಆಕ್ಸಿಜನ್, ಔಷಧ ಕೊರತೆ ಎದುರಿಸುತ್ತಿದ್ದಾರೆ. ನಮಗೂ ಆಕ್ಸಿಜನ್ ಕೊಡಿಸಿ ಅಂತಾ ಕರೆಗಳು ಬರುತ್ತಿವೆ. ಆಸ್ಪತ್ರೆ ಭರ್ತಿಯಾಗಿವೆ. ಸ್ಥಳ ಕೊರತೆಯಿದೆ ಎಂಬ ಮಾತು ಕೇಳುತ್ತಿರುತ್ತೇವೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಸುಕೋ ಮತ್ತು ಐಎಂಎ ವೈದ್ಯರ ತಂಡ ಜನಪರ ಕಾಳಜಿ ತೋರಿದೆ.
ಜನರ ಭಾವನೆಯನ್ನು ಅರಿತು ಅವರ ನೆರವಿಗೆ ಧಾವಿಸಿದ್ದು, ಒಳ್ಳೆಯ ಬೆಳವಣಿಗೆ. ಸರಕಾರ ನಿಗದಿಪಡಿಸಿದ ದರಕ್ಕಿಂತ ಶೇ.50ರಷ್ಟು ಕಡಿಮೆ ದರದಲ್ಲಿ ಚಿಕಿತ್ಸೆ ವೆಚ್ಚವನ್ನು ಪಡೆಯಲಾಗುತ್ತಿದೆ ಎಂಬುದನ್ನು ಕೇಳಿದಾಗ ಸಂತಸವಾಯಿತು. ಸುಕೋ ಹಾಗೂ ಐಎಂಎನ ಈ ಸೇವೆ ಹೆಚ್ಚು ಜನರಿಗೆ ತಲುಪಿ, ಜನರು ಕೊರೊನಾ ಮಹಾಮಾರಿ ಎಂಬ ಕಂಟಕದಿಂದ ಬೇಗ ಹೊರಬರುವಂತಾಗಲಿ ಎಂದರು.
ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ, ಸಿಂಧನೂರು ತಾಲೂಕಿನಲ್ಲಿ 250 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ 3 ವೆಂಟಿಲೇಟರ್ ಗಳನ್ನು ಒದಗಿಸುವ ಕುರಿತು ಈಗಾಗಲೇ ನಿಮ್ಮ ಗಮನಕ್ಕೆ ತರಲಾಗಿದೆ. ಖಾಸಗಿ, ಸರಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಔಷಧ ಪೂರೈಕೆಯಾಗಬೇಕಿದೆ. ಈ ಬಗ್ಗೆ ತ್ವರಿತ ಸ್ಪಂದನೆ ಅವಶ್ಯ ಎಂದು ಡಿಸಿಎಂ ಸವದಿ ಅವರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಭತ್ತ ಖರೀದಿಗೆ ಸಂಬಂಧಿ ಸಿ ಆನ್‌ಲೈನ್ ನೋಂದಣಿಯನ್ನು ಬ್ಲಾಕ್ ಮಾಡಿರುವ ಕುರಿತು ಗಮನಕ್ಕೆ ತಂದು, ನೋಂದಣಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಸುಕೋ ಬ್ಯಾಂಕ್ ಅಧ್ಯಕ್ಷ ಮೋಹಿತ್ ಮಸ್ಕಿ ಅವರು ಹೊಸದಾಗಿ ಆರಂಭಿಸುತ್ತಿರುವ ಕೋವಿಡ್ ಆಸ್ಪತ್ರೆ ಕುರಿತು ವಿವರ ನೀಡಿದರು. ಜನತಾ ಸೌಹಾರ್ದ ಸಹಕರಿ ನಿರ್ದೇಶಕ ಶಿವಕುಮಾರ್, ವೈದ್ಯರಾದ ಡಾ| ಶಿವರಾಜ್ ಪಾಟೀಲ್, ಬಿ.ಎನ್. ಪಾಟೀಲ್, ಡಾ| ಶರಣಬಸವ ದೇವರೆಡ್ಡಿ, ಡಾ| ಚನ್ನನಗೌಡ ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.