ನವಜಾತ ಶಿಶುವನ್ನುಬಾಣಲೆಯಲ್ಲಿ ಹಾಕಿ ಯಮುನಾ ನದಿಯಲ್ಲಿ ತೇಲಿ ಬಿಟ್ಟ ಕ್ರೂರಿಗಳು..!
Team Udayavani, May 7, 2021, 9:05 AM IST
ಮಥುರಾ : ನವಜಾತ ಶಿಶುವೊಂದನ್ನು ಬಾಣಲೆಯಲ್ಲಿ ಹಾಕಿ ಯಮುನಾ ನದಿಯಲ್ಲಿ ತೇಲಿ ಬಿಟ್ಟಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಸ್ಥಳೀಯರು ಈ ಮಾಹಿತಿಯನ್ನ ಪೊಲೀಸರಿಗೆ ತಿಳಿಸಿದ ಮೇಲೆ ಮಗುವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಥುರಾ ಪೊಲೀಸರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಮಗುವನ್ನು ಸರ್ಕಾರಿ ಆಸ್ಪತ್ರೆಯ ಮಕ್ಕಳ ವಿಭಾಗಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದಿದ್ದಾರೆ.
ಸಬ್ ಇನ್ಸ್‌ಪೆಕ್ಟರ್ ಮನೋಜ್ ಶರ್ಮಾ ಅವರು ಕಬ್ಬಿಣದ ಬಾಣಲೆಯಲ್ಲಿದ್ದ ಮಗುವನ್ನು ಹೊರಗೆ ತೆಗೆದುಕೊಂಡು ಆಸ್ಪತ್ರೆಗೆ ಕರೆದೊಯ್ದರು. ಆ ಮಗುವನ್ನು ಬಿಳಿ ಬಿಟ್ಟೆಯಿಂದ ಕಟ್ಟಿ ಬಾಣಲೆಯಲ್ಲಿ ಹಾಕಲಾಗಿತ್ತು. ಮಗು ಅಳುತ್ತಿದ್ದನ್ನು ನೋಡಿದ ಸ್ಥಳೀಯರು ನಮಗೆ ಮಾಹಿತಿ ನೀಡಿದರು. ಅದೃಷ್ಟವಶಾತ್ ಬಾಣಲೆಯು ಮಗುಚಿಕೊಂಡಿಲ್ಲ. ಹಾಗೇನಾದರೂ ಆಗಿದ್ದರೆ ಮಗುವು ನೀರಿನಲ್ಲಿ ಮುಳುಗುತ್ತಿತ್ತು ಎಂದಿದ್ದಾರೆ. ಸದ್ಯ ಆ ಮಗುವಿನ ಪೋಷಕರ ಪತ್ತೆಗಾಗಿ ಕಾರ್ಯಾಚರಣೆ ಮಾಡಲಾಗಿದೆ. ಆ ಮಗುವನ್ನು ಯಾರೂ ದತ್ತು ಪಡೆಯಲು ಮುಂದೆ ಬರದಿದ್ದರೆ, ಜಿಲ್ಲಾಡಳಿತದ ಅನುಮತಿ ಮೇರೆಗೆ ನಾನೇ ಸಾಕುತ್ತೇನೆ ಎಂದು ಹಿಂದೂಸ್ತಾನಿ ಬಿರಾದಾರಿ ಉಪಾಧ್ಯಕ್ಷ ವಿಶಾಲ್ ಶರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.