ವಲಸಿಗ ರೈತರಿಗೆ ಎಟುಕದ ಸೌಲಭ್ಯ

Team Udayavani, May 7, 2021, 2:28 PM IST

migrant farmers

ಬೆಂಗಳೂರು: ಕಳೆದ ವರ್ಷದ ಲಾಕ್‌ಡೌನ್‌ನಲ್ಲಿ ಗ್ರಾಮೀಣ ಪ್ರದೇಶಕ್ಕೆ ತೆರಳಿದ ವಲಸಿಗ ರೈತರಲ್ಲಿ ಶೇ..10ರಷ್ಟು ಮಂದಿ ಅಲ್ಲಿಯೇ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದು, ಬಹುತೇಕ ಮಂದಿಗೆ ಸರ್ಕಾರಿ ಸೌಲಭ್ಯಗಳು ತಲುಪಿಲ್ಲ!ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರಘೋಷಣೆ ಮಾಡಿರುವ ಪರಿಹಾರ ಶೇ..17 ರಷ್ಟುಜನರಿಗೆ ಮಾತ್ರ ದೊರೆತಿದೆ. ಶೇ..23 ರಷ್ಟು ರೈತರಿಗೆ ಮಾತ್ರ ನರೇಗಾ ಯೋಜನೆಯಿಂದ ಅವಕಾಶ ದೊರೆತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಶೇ..53 ರಷ್ಟು ರೈತರು ಹಾಗೂ ಶೇ..20 ರಷ್ಟು ರೈತರಿಗೆ ಮಾತ್ರ ಬೆಳೆ ವಿಮೆ ಸೌಲಭ್ಯ ದೊರೆತಿದೆ.  ಇದು ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯ ಹಾಗೂ ಮಹಾರಾಜ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್‌ಆಫ್‌ ಮೈಸೂರು ಸಹಯೋಗದೊಂದಿಗೆ ಪೃಥ್ವಿ ಎಂಬಸ್ವಯಂ ಸೇವಾ ಸಂಸ್ಥೆ ಕೊರೊನಾ ಲಾಕ್‌ಡೌನ್‌ ನಂತರ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋದ ಕುಟುಂಬಗಳ ಕುರಿತು ನಡೆಸಿದ ಸಮೀಕ್ಷೆಯಲ್ಲಿ ಬೆಳಕಿಗೆ ಬಂದ ಅಂಶ.

ಈಗ ಇನ್ನೊಮ್ಮೆ ಲಾಕ್‌ಡೌನ್‌ನಂಥ ಸ್ಥಿತಿಯೇಎದುರಾಗಿದ್ದು,. ಹಳ್ಳಿ ಸೇರಿರುವ ರೈತರಿಗೆ ಬದುಕು ಕಟ್ಟಿಕೊಡುವ ಅವಕಾಶವನ್ನು ಕಲ್ಪಿಸಿಕೊಡುವ ಸವಾಲು ಸರ್ಕಾರದ ಮುಂದೆ ಇದೆ. ಕಳೆದ ವರ್ಷ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ತೆರಳಿದ ವಲಸಿಗರಲ್ಲಿ ಶೇ.19 ರಷ್ಟು ಜನರು ರೈತ ಕುಟುಂಬಗಳಿಗೆ ಸೇರಿದವರಾಗಿದ್ದರು. ಅಂದರೆ ಸುಮಾರು 8 ರಿಂದ 10 ಲಕ್ಷ ರೈತ ಕುಟುಂಬಕ್ಕೆ ಸೇರಿದವರು ನಗರಗಳಿಂದ ಮರು ವಲಸೆ ತೆರಳಿದ್ದರು.ಅವರಲ್ಲಿ ಶೇ.23 ರಷ್ಟು ಜನರು ಕಲ್ಯಾಣ ಕರ್ನಾಟಕ,ಮಲೆನಾಡು ಹಾಗೂ ಕರಾವಳಿ ಭಾಗಕ್ಕೆಸೇರಿದವರಾಗಿದ್ದಾರೆ.ವಲಸಿಗರಲ್ಲಿ 60 ವರ್ಷ ಮೀರೀದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಹಳ್ಳಿಗಳಿಗೆ ತೆರಳಿದ ಶೇ.19 ರಷ್ಟುಜನರಲ್ಲಿ ಶೇ.10 ರಷ್ಟು ಜನರು ನಗರ ಪ್ರದೇಶಗಳಿಗೆವಾಪಸ್‌ ಬರದೇ ತಮ್ಮೂರುಗಳಲ್ಲಿಯೇ ಏನಾದರೂ ಉದ್ಯೋಗ ಮಾಡಿಕೊಂಡು ಇರಲು ಬಯಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಹಳ್ಳಿಗಳಿಗೆ ತೆರಳಿದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾಗಿರುವುದು ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಲಾಕ್‌ಡೌನ್‌ ಸಮಯ ಹಾಗೂ ನಂತರ ರಾಜ್ಯಸರ್ಕಾರ ರೈತರು ಹಾಗೂ ಕೃಷಿ ಕಾರ್ಮಿಕರಿಗೆ ನೆರವು ನೀಡಿರುವ ಬಗ್ಗೆ ಶೇಕಡಾ 45 ರಷ್ಟು ಜನರು ಮಾತ್ರತೃಪ್ತಿ ವ್ಯಕ್ತಪಡಿಸಿದ್ದು, ಶೇ.55 ರಷ್ಟು ಜನರು ರಾಜ್ಯಸರ್ಕಾರದ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನಹೊಂದಿದ್ದಾರೆ.

ಉತ್ಪಾದನೆ ನಷ್ಟ: ಕಳೆದ ವರ್ಷ ಲಾಕ್‌ಡೌನ್‌ಘೋಷಣೆ ಮಾಡಿದ ಸಂದರ್ಭದಲ್ಲಿ ರಾಜ್ಯದ ರೈತರುಹಿಂಗಾರು ಬೆಳೆ ಉತ್ತಮವಾಗಿ ಬಂದಿದ್ದರೂ ಶೇ.30ರಷ್ಟು ರೈತರು ಮಾತ್ರ ತಮ್ಮ ಉತ್ಪನ್ನ ಮಾರಾಟಮಾಡಲು ಸಾಧ್ಯವಾಗಿದೆ. ಶೇ.17 ರಷ್ಟು ಉತ್ಪನ್ನಮಾರಾಟವಾಗದೇ ಸಂಪೂರ್ಣ ಕೊಳೆತು ಹೋಗಿದೆ.ಶೇ. 6 ರಷ್ಟು ರೈತರಿಗೆ ಮಾತ್ರ ಸಾಮಾನ್ಯ ದರದೊರೆತಿದ್ದು, ಶೇ. 94 ರಷ್ಟು ರೈತರಿಗೆ ಸರಿಯಾದ ಬೆಲೆದೊರೆಯದೇ ನಷ್ಟ ಅನುಭವಿಸಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ರೈತರಿಗೆ ಸರ್ಕಾರದಕೃಷಿ, ನೀರಾವರಿ, ತೋಟಗಾರಿಕೆ ಸೇರಿದಂತೆ ಪ್ರಮುಖಇಲಾಖೆಗಳಿಂದ ಸೂಕ್ತ ಮಾಹಿತಿ ದೊರೆತಿರುವ ಬಗ್ಗೆಶೇ.49 ರಷ್ಟು ರೈತರು ಮಾತ್ರ ಸಹಮತವ್ಯಕ್ತಪಡಿಸಿದ್ದಾರೆ.

ಸಾಲದ ಸಮಸ್ಯೆ: ರೈತರಿಗೆ ಬಿತ್ತನೆ ಬೀಜದ ಸಮಸ್ಯೆ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೆ, ಸರಿಯಾದ ಸಮಯಕ್ಕೆ ಸೂಕ್ತ ಸಾಲ ಸಿಗದಿರುವ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಎಲ್ಲ ರೈತರಿಗೂ ಸಾಲದೊರೆಯದಿರುವ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬೆಳೆಗೆ ಸರಿಯಾದಮಾರುಕಟ್ಟೆ ವ್ಯವಸ್ಥೆ ದೊರೆಯದೇ ನಷ್ಟಅನುಭವಿಸಿರುವ ಬಗ್ಗೆ ರೈತರು ಸಮೀಕ್ಷೆಯಲ್ಲಿ ಬೇಸರವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಹಳ್ಳಿಗಳಿಗೆ ಮರು ವಲಸೆಹೋದ ರೈತ ಕುಟುಂಬಗಳು ಹಾಗೂ ಕಾರ್ಮಿಕರಿಗೆ ರಾಜ್ಯಸರ್ಕಾರ ಹಳ್ಳಿಗಳಲ್ಲಿಯೇ ಪರ್ಯಾಯ ಉದ್ಯೋಗ ಒಗದಿಸುವಲ್ಲಿವಿಫಲವಾಗಿದೆ. ಈಗ ಮತ್ತೆ ಲಾಕ್‌ಡೌನ್‌ ಆಗಿದೆ. ರಾಜ್ಯ ಸರ್ಕಾರಗ್ರಾಮೀಣ ಪ್ರದೇಶಗಳಲ್ಲಿಯೇ ಮರು ವಲಸಿಗರಿಗೆ ಪರ್ಯಾಯಉದ್ಯೋಗ ಒದಗಿಸುವ ಕಡೆಗೆ ಆದ್ಯತೆ ನೀಡಬೇಕು.

  • ಡಾ. ಪ್ರಕಾಶ್‌ ಕಮ್ಮರಡಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ

ಶಂಕರ ಪಾಗೋಜಿ

ಟಾಪ್ ನ್ಯೂಸ್

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

17

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.