ಸೋಂಕು ಗಂಭೀರವಿಲ್ಲದಿದ್ದರೆ ಕೇರ್‌ ಸೆಂಟರ್‌ಗೆ


Team Udayavani, May 8, 2021, 2:54 PM IST

To the care center if the infection is not serious

ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ‌ಡೆಯುತ್ತಿದ್ದು, ಸೋಂಕಿನ ಗಂಭೀರ ಗುಣಲಕ್ಷಣ ಇಲ್ಲದವರನ್ನು ಸ್ಟೆಪ್‌ಡೌನ್‌ ಆಸ್ಪತ್ರೆ ಅಥವಾ ಕೋವಿಡ್‌ ಕೇರ್‌ ಕೇಂದ್ರಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲು ನಿರ್ಧರಿಸಿದ್ದೇವೆ. ಇದರಿಂದ ಕೊರೊನಾ ಸೋಂಕಿತರಿಗೆ ಅಗತ್ಯವಿರುವೆಡೆ ಹಾಸಿಗೆವ್ಯವಸ್ಥೆ ಮಾಡಲು ಸಾಧ್ಯವಿದೆ ಎಂದುಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿಎನ್‌.ಅಶ್ವತ್ಥನಾರಾಯಣ ಹೇಳಿದರು.

ಶುಕ್ರವಾರ ಕೋವಿಡ್‌ ಚಿಕಿತ್ಸೆ ಶಿಷ್ಟಾಚಾರ ಸಮಿತಿಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಜ್ಞರು ಕೊಟ್ಟ ವರದಿ ಪ್ರಕಾರ ಶೇ.30ರಿಂದ 40ರಷ್ಟುಗಂಭೀರವಲ್ಲದ ಸೋಂಕಿತರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಇವರೆಲ್ಲರನ್ನೂ ಸ್ಟೆಪ್ ಡೌನ್‌ ಆಸ್ಪತ್ರೆ ಅಥವಾ ಕೋವಿಡ್‌ ಕೇರ್‌ ಕೇಂದ್ರಕ್ಕೆಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದರು.

ಇದರಿಂದ ಖಾಲಿಯಾಗುವ ಹಾಸಿಗೆ ಗಂಭೀರಸ್ಥಿತಿಯಲ್ಲಿರುವ ಸೋಂಕಿತರಿಗೆ ಲಭ್ಯವಾಗುತ್ತವೆ. ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ. ಆದಷ್ಟು ಬೇಗ ಈ ಕಾರ್ಯ ಆಗಬೇಕು. ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳು ಕೂಡಕಡ್ಡಾಯವಾಗಿ ಈ ನಿರ್ಣಯವನ್ನುಜಾರಿಗೆ ತರಬೇಕು. ನೋಡಲ್‌ ಅಧಿಕಾರಿಗಳ ಉಸ್ತುವಾರಿಯಲ್ಲಿ ಈಪ್ರಕ್ರಿಯೆ ಕಟ್ಟುನಿಟ್ಟಾಗಿ ನಡೆಯಬೇಕುಎಂದು ಸೂಚಿಸಿದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ.90ಕ್ಕಿಂತಕಡಿಮೆ ಸ್ಯಾಚುರೇಷನ್‌ ಇರುವವರು ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಹಣ ಕೊಡುತ್ತಾರೆಂದುಆಸ್ಪತ್ರೆಗಳಿಗೆ ದಾಖಲು ಮಾಡಿಕೊಳ್ಳುವಂತಿಲ್ಲ.ಇದು ಖಾಸಗಿ ಆಸ್ಪತ್ರೆಗಳಿಗೂ ಕಡ್ಡಾಯವಾಗಿಅನ್ವಯವಾಗುತ್ತದೆ ಎಂದು ನಿರ್ದೇಶಿಸಿದರು.

ರಿಮೋಟ್‌ ಐಸಿಯು: ರಿಮೋಟ್‌ ಐಸಿಯು ವ್ಯವಸ್ಥೆಯನ್ನು ಕೆಲ ದಿನಗಳಲ್ಲಿಯೇ ಅನುಷ್ಠಾನಕ್ಕೆತರಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಯಾವ ಚಿಕಿತ್ಸೆ ನೀಡಲಾಗುತ್ತಿದೆ? ಅವರ ಆರೋಗ್ಯ ಹೇಗಿದೆ? ಎಂಬ ಮಾಹಿತಿಯನ್ನುಸಂಬಂಧಿಕರಿಗೆ ನೀಡುವುದು ಕಡ್ಡಾಯ. ವೈದ್ಯರುಈ ಬಗ್ಗೆ ಸಂಬಂಧಿಕರಿಗೆ ಸಮರ್ಪಕ ಮಾಹಿತಿ ನೀಡಲಾಗುತ್ತಿಲ್ಲ ಎಂದು ದೂರುಗಳು ಬರುತ್ತಿವೆ. ಸಾವುಗಳ ಬಗ್ಗೆಯೂ ಸಮರ್ಪಕ ಆಡಿಟ್‌ನಡೆಯಬೇಕು ಎಂದು ಸೂಚಿಸಿದರು.

ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್‌ ಅಕ್ಬರ್ , ಇಲಾಖೆಆಯುಕ್ತ ತ್ರಿಲೋಕ ಚಂದ್ರ, ಡಿಸಿಎಂ ಅವರಕಾರ್ಯದರ್ಶಿ ಪ್ರದೀಪ್‌, ಚಿಕ್ಸಿತೆಯ ಶಿಷ್ಟಾಚಾರಸಮಿತಿ ಅಧ್ಯಕ್ಷರೂ ಆದ ರಾಜೀವ್‌ ಗಾಂಧಿಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ ಸೇರಿ ಹಿರಿಯ ವೈದರು ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.