![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 8, 2021, 2:47 PM IST
ಯಾದಗಿರಿ: ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 55 ಆಕ್ಸಿಜನ್ ಬೆಡ್‌ಗಳನ್ನು ವ್ಯವಸ್ಥೆ ಮಾಡಲಾಗುತ್ತಿದ್ದು, ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ನಿರ್ಮಿತಿ ಕೇಂದ್ರದಿಂದ ಆಕ್ಸಿಜನ್ ಬೆಡ್‌ಗಳ ಜೋಡಣೆ ಕಾರ್ಯ ನಡೆಯುತ್ತಿದ್ದು, 55 ಹೆಚ್ಚುವರಿ ಆಕ್ಸಿಜನ್ ಬೆಡ್‌ಗಳ ಪೈಕಿ ಈಗಾಗಲೇ 30 ಬೆಡ್ ಗಳ ಜೋಡಣೆ ಕಾರ್ಯ ಮುಗಿದಿದೆ. ಉಳಿದ 25 ಆಕ್ಸಿಜನ್ ಬೆಡ್‌ಗಳನ್ನೂ ಅದಷ್ಟು ಶೀಘ್ರ ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕಿರಣ್ ಕುಮಾರ್ ಹೂಗಾರ್ ಮಾತನಾಡಿ, 2-3 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ರೋಗಿಗಳ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡುವ ಸ್ಥಳ (ವಾರ್ಡ್)ವನ್ನು ಸ್ಯಾನಿಟೈಸರ್ ಮಾಡಿ ನಿರ್ಮಿತಿ ಕೇಂದ್ರದವರು ಕಾಮಗಾರಿ ಕೈಗೊಳ್ಳಲು ಅನುವು ಮಾಡಿಕೊಡಬೇಕು ಎಂದು ಸ್ಥಾನಿಕ ವೈದ್ಯಾಧಿಕಾರಿ (ಆರ್‌ಎಂಒ) ಡಾ| ನೀಲಮ್ಮಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆ ಈಗಾಗಲೇ 132 ಆಕ್ಸಿಜನ್ ಬೆಡ್ ಗಳ ಸಾಮರ್ಥ್ಯವನ್ನು ಹೊಂದಿದ್ದು, ಇದೀಗ ಹೆಚ್ಚುವರಿ 55 ಬೆಡ್‌ಗಳ ಸೇರ್ಪಡೆಯಿಂದ 187ಕ್ಕೇರಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
You seem to have an Ad Blocker on.
To continue reading, please turn it off or whitelist Udayavani.