ಪೊಲೀಸ್ ಕಾರ್ಯಾಚರಣೆ: ದಂಡ ವಸೂಲಿ
Team Udayavani, May 8, 2021, 3:21 PM IST
ಕಂಪ್ಲಿ: ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಸಿಪಿಐ ಸುರೇಶ ಎಚ್. ತಳವಾರ್, ಪಿಎಸ್‌ಐ ಟಿ.ಎಲ್. ಬಸಪ್ಪ ಲಮಾಣಿ ಮತ್ತು ಸಿಬ್ಬಂದಿ ಸಾರ್ವಜನಿಕರನ್ನು ಚದುರಿಸುವ ಜೊತೆಗೆ 5 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೆ ತಂದು ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳಾದ ಕಿರಾಣಿ, ತರಕಾರಿ ಹಾಲು ಮತ್ತು ಔಷಧ ಖರೀದಿಗೆ ಅವಕಾಶ ನೀಡಿದೆ.ಆದರೆ ಇವುಗಳನ್ನು ಮೀರಿ ಕೆಲವರು ಬಟ್ಟೆಅಂಗಡಿಗಳನ್ನು ಹಾಗೂ ಹೋಟೆಲ್, ಸ್ಟೀಲ್‌ಫರ್ನಿಚರ್ ಅಂಗಡಿಗಳನ್ನು ತರೆದು ಸಾಮಾಜಿಕ ಅಂತರವನ್ನು ಮರೆತು ವ್ಯಾಪಾರದಲ್ಲಿ ತೊಡಗಿದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಮುಚ್ಚಿಸಿದರಲ್ಲದೆ ದಂಡ ವಿಧಿಸುವುದರ ಜೊತೆಗೆ 5 ಜನರ ಮೇಲೆ ಪ್ರಕರಣವನ್ನು ದಾಖಲಿಸಿದ್ದಾರೆ.
ಜೊತೆಗೆ ಖಡಕ್ಕಾಗಿ ಸೂಚನೆಯನ್ನು ನೀಡಿದ್ದು ಇನ್ನು ಮುಂದೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಸೇವೆಯನ್ನು ಹೊರತುಪಡಿಸಿ ಬೇರೆ ಅಂಗಡಿಗಳು ತೆರೆದರೆ ಅಂಥವರ ವಿರುದ್ಧಅಪರಾಧ ಪ್ರಕರಣಗಳನ್ನು ದಾಖಲಿಸುವುದಾಗಿ ಎಚ್ಚರಿಸಿದರು.
ಪಟ್ಟಣದಲ್ಲಿ ಇದುವರೆಗೆ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡದ 519ಪ್ರಕರಣಗಳಲ್ಲಿ 86200ರೂ, ಅನಗತ್ಯವಾಗಿ ಸಂಚರಿಸುವ ವಾಹನಗಳ ಮಾಲೀಕರ 133ಪ್ರಕರಣಗಳಲ್ಲಿ 75300 ರೂ ದಂಡ ವಸೂಲಿ ಮಾಡಿದರೆ, ಕಾನೂನು ವಿಭಾಗದ ಪಿಎಸ್‌ಐ ವಿರೂಪಾಕ್ಷಪ್ಪ ಮತ್ತು ಅಪರಾಧ ವಿಭಾಗದಪಿಎಸ್‌ಐ ಟಿ.ಎಲ್ ಬಸಪ್ಪ ಲಮಾಣಿ ನೇತೃತ್ವದಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡದ 371 ಪ್ರಕರಣಗಳಲ್ಲಿ 37100ರೂ, ಅನಗತ್ಯವಾಗಿ ಸಂಚರಿಸುವ ವಾಹನಗಳಮಾಲೀಕರ 132 ಪ್ರಕರಣಗಳಲ್ಲಿ 57200 ರೂಗಳು ಸೇರಿದಂತೆ 2,48,800ರೂಗಳ ದಂಡ ವಸೂಲಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.