ದೇಶದಲ್ಲಿಂದು 4.03 ಲಕ್ಷ ಕೋವಿಡ್ ಪ್ರಕರಣ ಪತ್ತೆ : 4,092 ಜನರ ಸಾವು
Team Udayavani, May 9, 2021, 12:02 PM IST
ನವದೆಹಲಿ : ಭಾರತದಲ್ಲಿ ಕೋವಿಡ್-19 ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 4,03,738 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೇ ಅವಧಿಯಲ್ಲಿ 4,092 ಮಂದಿ ಮಹಾಮಾರಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಇಂದು ( ಭಾನುವಾರ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಒಂದೇ ದಿನ 4,03,738 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 4,092 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,42,362ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,36,648ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,86,444 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,83,17,404ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,65,428 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 30,22,75,471 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.