ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ
Team Udayavani, May 9, 2021, 12:21 PM IST
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ (Lockdown) ವಿಸ್ತರಿಸಲಾಗಿದೆ. ಮೇ.17ರ ವರೆಗೆ ಈ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಇಂದು (ಮೇ.09) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿ ದರ 35% ನಿಂದ 23% ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ. ಹಾಗೂ ಒಂದು ವಾರಗಳ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಈ ಅವಧಿಯಲ್ಲಿ ಮೆಟ್ರೋ ರೈಲಿನ ಸೇವೆಯೂ ಬಂದ್ ಇರುವುದಾಗಿ ಘೋಷಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಲಾಕ್ ಡೌನ್ ಹೇರಲಾಗಿತ್ತು. ಲಾಕ್ ಡೌನ್ ಜಾರಿಯಿಂದ ಕೋವಿಡ್ ಹರಡುವಿಕೆಯನ್ನು ತಡೆಗಟ್ಟ ಬಹುದು. ಈ ಕಾರಣದಿಂದ ಮತ್ತೊಮ್ಮೆ ಲಾಕ್ ಡೌನ್ ಮೊರೆ ಹೋಗಲಾಗಿದೆ.
ಇನ್ನು ಈ ತಿಂಗಳ ದಿನಾಂಕ 3 ರಿಂದ 8 ವರೆಗೆ ದೆಹಲಿಯಲ್ಲಿ 1,15,285 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೆ ಅವಧಿಯಲ್ಲಿ 2105 ಜನರು ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಮತ್ತೊಂದು ಬಾರಿ ಲಾಕ್ ಡೌನ್ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ.
Delhi lockdown extended by a week till May 17; Delhi Metro services to be suspended during this period: CM Arvind Kejriwal pic.twitter.com/EVizv1cehl
— ANI (@ANI) May 9, 2021
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.