ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ
Team Udayavani, May 9, 2021, 2:28 PM IST
ನವದೆಹಲಿ : ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ.
ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ.
ಎಲ್ಲ ರಾಜ್ಯ ಮುಖ್ಯಮಂತ್ರಿಗಳೊಡನೆ ನಿರಂತರ ಸಂಪರ್ಕದಲ್ಲಿರುವ ಮೋದಿ, ರಾಜ್ಯದ ಸ್ಥಿತಿಗತಿಗಳನ್ನು ತಿಳಿದುಕೊಂಡು ಅಗತ್ಯ ಸಲಹೆಯನ್ನೂ ನೀಡುತ್ತಿದ್ದಾರೆ.
ನಿನ್ನೆಯಷ್ಟೇ ಮಹಾರಾಷ್ಟ್ರ, ಆಂಧ್ರ ಪ್ರದೇಶ, ಹಾಗೂ ಮಧ್ಯ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದ ಮೋದಿ, ಇಂದು ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳಿಗೆ ಕರೆ ಮಾಡಿದ್ದಾರೆ.
PM Modi speaks with Punjab, Bihar, Karnataka, Uttarakhand CMs over COVID-19 situation
Read @ANI Story Ihttps://t.co/R8MbnqEXFQ pic.twitter.com/BCHzNXX3kJ
— ANI Digital (@ani_digital) May 9, 2021
ಇನ್ನು ಕರ್ನಾಟಕದಲ್ಲಿ ಕೋವಿಡ್ ಉಲ್ಬಣಗೊಂಡಿದೆ. ಜನ ಸಾಮಾನ್ಯರ ಪರಿಸ್ಥಿತಿ ಬಹಳ ಹದಗೆಟ್ಟಿದೆ. ಹೀಗಿರುವಾಗ ಪ್ರಧಾನ ಮಂತ್ರಿಯ ಈ ಕರೆ ಬಹಳ ಮಹತ್ವ ಪಡೆದುಕೊಂಡಿದೆ. ಸದ್ಯ ಕೋವಿಡ್ ನಿಯಂತ್ರಣಕ್ಕೆ ನಾಳೆ, ಮೇ 10 ರಿಂದ 24ರವರೆಗೆ ರಾಜ್ಯಾದ್ಯಂತ ಸೆಮಿ ಲಾಕ್ಡೌನ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.