ಯುವ ಸಮುದಾಯ ಎಚ್ಚೆತ್ತುಕೊಳ್ಳಿ… ಕೋವಿಡ್ ಬಾಧಿತರಲ್ಲಿ ಯುವಕರೇ ಹೆಚ್ಚು !
Team Udayavani, May 10, 2021, 7:05 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆಯುತ್ತಿದ್ದು, ಕಳೆದೆರಡು ತಿಂಗಳಲ್ಲಿ ಸೋಂಕು ದೃಢಪಟ್ಟವರ ಪೈಕಿ ಶೇ. 50ಕ್ಕೂ ಹೆಚ್ಚು ಮಂದಿ ಯುವಕರು ಎನ್ನುವುದು ಆತಂಕದ ಸಂಗತಿ!
ಜಿಲ್ಲೆಯಲ್ಲಿ ಮಾರ್ಚ್ 1ರಿಂದ ಈವರೆಗೆ ಒಟ್ಟು 10,544 ಮಂದಿಗೆ ಸೋಂಕು ಬಾಧಿಸಿದ್ದು, ಈ ಪೈಕಿ 5,862 ಮಂದಿ 16ರಿಂದ 30 ವರ್ಷದೊಳಗಿನವರು ಎನ್ನುವುದು ಗಮನಾರ್ಹ ವಿಚಾರ. ಅದರಲ್ಲೂ 16ರಿಂದ 20 ವರ್ಷದೊಳಗಿನ 1,603 ಮಂದಿ ಮತ್ತು 21 ವರ್ಷದಿಂದ 30 ವರ್ಷದೊಳಗಿನ 4,259 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ಮೊದಲನೇ ಅಲೆಗೆ ಹೋಲಿಸಿದರೆ ಎರಡನೇ ಅಲೆ ಹರಡುವಿಕೆ ತೀವ್ರ ಗತಿಯಲ್ಲಿದೆ. ಅದರಲ್ಲೂ ಪ್ರತೀ ದಿನದ ಪಾಸಿಟಿವ್ ಪ್ರಕರಣದಲ್ಲಿ ಶೇ.50ಕ್ಕೂ ಹೆಚ್ಚು ಮಂದಿ ಯುವಕರೇ ಆಗಿದ್ದಾರೆ. ಬೇಕಾಬಿಟ್ಟಿ ತಿರುಗಾಟ, ಕೊರೊನಾ ಬಗ್ಗೆ ನಿರ್ಲಕ್ಷವೇ ಇದಕ್ಕೆ ಪ್ರಮುಖ ಕಾರಣ ಎನ್ನುತ್ತಾರೆ ವೈದ್ಯರು. ಕೊರೊನಾ ಮೊದಲನೇ ಅಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹರಡುವಿಕೆ ಸಾಧ್ಯತೆ ಹೆಚ್ಚಿತ್ತು. ಯುವಕರಿಗೆ ರೋಗ ನಿರೋಧಕ ಶಕ್ತಿ ಹೆಚ್ಚು ಇರುವ ಕಾರಣ, ಅವರಲ್ಲಿ ರೋಗದ ತೀವ್ರತೆ ಕಡಿಮೆ ಇತ್ತು. ಆದರೆ, ಈ ಬಾರಿ ಯುವಕರಿಗೆ ಬಹಳ ವೇಗವಾಗಿ ಸೋಂಕು ಬಾಧಿಸುತ್ತಿದೆ ಎನ್ನುವುದು ನೋಡಿದಾಗ ಯುವಕರು ಕೊರೊನಾ ಬಗ್ಗೆ ನಿರ್ಲಕ್ಷé ವಹಿಸುವುದು ಅಪಾಯಕಾರಿ ಎನ್ನುವ ಮುನ್ನೆಚ್ಚರಿಕೆಯನ್ನು ಈ ಅಂಕಿ-ಅಂಶ ನೀಡುತ್ತಿದೆ.
ಕೊರೊನಾ ಎರಡನೇ ಅಲೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕಳೆದ ಕೆಲ ದಿನಗಳಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಕರ್ಫ್ಯೂ ಸಡಿಲಿಕೆ ಮುಗಿದರೂ ಸುಮ್ಮನೆ ತಿರುಗಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಮಾರ್ಗಸೂಚಿ ನಿರ್ಲಕ್ಷವೂ ಯುವಕರಲ್ಲಿ ಕೊರೊನಾ ಹರಡುವಿಕೆ ಹೆಚ್ಚಾಗಲು ಕಾರಣವಾಗಿದೆ.
ಯುವಕರಲ್ಲಿ ಅಪಾಯ
ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದೆ. ಮೊದಲನೇ ಅಲೆಗೆ ಹೋಲಿಸಿದರೆ ರೋಗದ ಹರಡುವಿಕೆ ವೇಗ ಹೆಚ್ಚಾಗಿದೆ. ಅದರಲ್ಲೂ ಸಕ್ರಿಯ ಪ್ರಕರಣ ಪೈಕಿ ಶೇ.50ರಷ್ಟು ಯುವಕರಲ್ಲಿ ಕೊರೊನಾ ಬಾಧಿಸುತ್ತಿರುವುದು ಆತಂಕಕಾರಿ ಸಂಗತಿ. ಲಾಕ್‌ಡೌನ್ ಮಾದರಿ ಕರ್ಫ್ಯೂ ಇದ್ದರೂ, ಯುವಕರು ರಸ್ತೆಯಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದಾರೆ. ಕೊರೊನಾ ಮಾರ್ಗಸೂಚಿ ಪಾಲನೆಯಿಂದ ಮಾತ್ರವೇ ಕೊರೊನಾ ನಿಯಂತ್ರಣ ಸಾಧ್ಯ.
– ಡಾ| ಕಿಶೋರ್ ಕುಮಾರ್, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.