ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ತಾಯಿ ತೀವ್ರ ರಕ್ತಸ್ರಾವದಿಂದ ಸಾವು
Team Udayavani, May 10, 2021, 12:54 PM IST
ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ತಾಯಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್ರವರ ಪತ್ನಿ ಪೂಜಿತಾ ಮೃತಪಟ್ಟ ಮಹಿಳೆ.
ಪೂಜಿತಾರವರು ಹೆರಿಗೆಗೆಂದು ಪುತ್ತೂರಿನ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದು, ಮೇ.9ರಂದು ಬೆಳಿಗ್ಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆರೋಗ್ಯವಾಗಿದ್ದ ಅವರಿಗೆ ಮಧ್ಯಾಹ್ನ ವೇಳೆಗೆ ತೀವ್ರ ರಕ್ತಸ್ರಾವ ಉಂಟಾದ್ದರಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಲಾಗಿತ್ತು. ಸಂಜೆಯ ವೇಳೆಗೆ ಸ್ವಲ್ಪ ಚೇತರಿಸಿಕೊಂಡಿದ್ದರು. ತಡರಾತ್ರಿಯ ವೇಳೆ ಮತ್ತೆ ರಕ್ತಸ್ರಾವ ಉಂಟಾಗಿ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಮಕ್ಕಳು ಆರೋಗ್ಯವಾಗಿದ್ದು, ಪುತ್ತೂರು ಆಸ್ಪತ್ರೆಯಲ್ಲಿದ್ದಾರೆ.
ಮೃತ ಪೂಜಿತಾ ತಂದೆ, ತಾಯಿ, ಸಹೋದರ, ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪೂಜಿತಾ ಅವರು ಬಿಎಡ್ ಅಧ್ಯಯನ ನಡೆಸಿದ್ದು, ಇತ್ತೀಚೆಗಷ್ಟೇ ಡಿಸ್ಟಿಂಕ್ಷನ್ನೊಂದಿಗೆ ಪಾಸಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.