ಕಾರ್ಕಳ : ಚೆಕ್ ಪೋಸ್ಟಿನಲ್ಲಿ ವಿಳಂಬ; ಎದೆನೋವಿನಿಂದ ಬಳಲುತ್ತಿದ್ದ ಮಹಿಳೆ ಸಾವು
Team Udayavani, May 10, 2021, 2:29 PM IST
ಕಾರ್ಕಳ : ಚೆಕ್ ಪೋಸ್ಟಿನಲ್ಲಿ ವಿಳಂಬವಾದ ಹಿನ್ನೆಲೆ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಲಾಗದೆ ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ನಲ್ಲೂರು ನಿವಾಸಿ ಮಂಜುಳಾ (33) ಮೃತ ದುರ್ದೈವಿ.
ಮಂಜುಳಾ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಕಾರಿನಲ್ಲಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಬಜಗೋಳಿ ಚೆಕ್ ಪೋಸ್ಟ್ ವಾಹನ ಅಡ್ಡಗಟ್ಟಿದ ಸಿಬ್ಬಂದಿ, ಖಾಸಗಿ ವಾಹನಕ್ಕೆ ಅನುಮತಿ ಇಲ್ಲ. ಆ್ಯಂಬುಲೆನ್ಸ್ ಗೆ ಕರೆ ಮಾಡಿ, ಅದರಲ್ಲಿ ತೆಗೆದುಕೊಂಡು ಹೋಗಿ ಎಂದು ಸೂಚಿಸಿದ್ದಾರೆ. ಎಷ್ಟೇ ಮನವಿ ಮಾಡಿಕೊಂಡರು ಆಸ್ಪತ್ರೆಗೆ ತೆರಳಲು ಅವಕಾಶ ಮಾಡಿಕೊಟ್ಟಿಲ್ಲ. ಕೊನೆಗೆ ಅಲ್ಲಿಂದು ಹಿಂದುರಿಗಿ ಬಂದು, ಬೇರೆ ಮಾರ್ಗದ (ಅಡ್ಡ ರಸ್ತೆ) ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಇತ್ತ ಆಸ್ಪತ್ರೆಯಲ್ಲಿಯೂ ವಿಳಂಬವಾಗಿದ್ದರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದಾಳೆ ಎಂದು ಮೃತಳ ಸಂಬಂಧಿಕರು ಹೇಳಿದ್ದಾರೆ.
ಅಕ್ಕನನ್ನು ಕಳೆದುಕೊಂಡ ಸಹೋದರಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಮಂಜುಳಾ ಸಾವಿಗೆ ಚೆಕ್ ಪೋಸ್ಟಿನಲ್ಲಿ ವಿಳಂಬವಾಗಿರುವುದೇ ಕಾರಣ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.
ಇನ್ನು ಘಟನೆ ಕುರಿತು ಉದಯವಾಣಿಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕೆ.ಎಸ್.ರಾವ್, ರೋಗಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ವಿಳಂಬವಾಗಿಲ್ಲ. ಪ್ರಾಥಮಿಕ ರ್ಯಾಪಿಡ್ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ ನೆಗೆಟಿವ್ ಬಂದಿತ್ತು. ಆರ್ ಟಿಪಿಸಿ ಆರ್ ಪರೀಕ್ಷೆಯನ್ನು ನಡೆಸಲಾಗಿತ್ತು. ಕೋವಿಡ್ ನಿಯಮ ಅನುಸರಿಸಿಯೇ ಚಿಕಿತ್ಸೆ ನಡೆಸಬೇಕು. ಅದಲ್ಲದೆ ಅವರು ಖಾಸಗಿ ಸಿಟಿ ಆಸ್ಪತ್ರೆಗೆ ತೆರಳಿ ಅನಂತರ ಇಲ್ಲಿಗೆ ಬಂದಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ವಿಳಂಬ ಎನ್ನುವುದು ಅವರ ಆರೋಪವಾಗಿತ್ತು.ನಮ್ಮಲ್ಲಿ ಚಿಕಿತ್ಸೆ ವಿಳಂಬ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.